Police Constable Jobs: ಸರ್ಕಾರಿ ಕೆಲಸ ಪಡೆಯಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಒಂದು ವೇಳೆ ನಿಮಗೂ ಕೂಡ ಸರ್ಕಾರಿ ಕೆಲಸದಲ್ಲಿ ಅದರಲ್ಲೂ ಪೊಲೀಸ್ ಇಲಾಖೆಯಲ್ಲಿ ಕೆಲಸ ಪಡೆಯಬೇಕು ಎಂದು ಆಸಕ್ತಿ ಇದ್ದರೆ, ನಿಮಗಾಗಿ ಒಂದು ಒಳ್ಳೆಯ ಅವಕಾಶ ಇಲ್ಲಿದೆ. ಕಾನ್ಸ್ಟೇಬಲ್ (Police Constable) ನೇಮಕಾತಿ ಬಗ್ಗೆ 2023-24ನೇ ಸಾಲಿನ ನೇಮಕಾತಿ ಬಗ್ಗೆ ಈಗ ಒಂದು ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಜೆನೆರಲ್ ಡ್ಯೂಟಿ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.
ಪ್ರಸ್ತುತ 26,146 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಮೊದಲಿಗೆ 75,768 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು. ಈಗ ಸಿಕ್ಕಿರುವ ಮಾಹಿತಿ ಪ್ರಕಾರ ಜೆನೆರಲ್ ಡ್ಯೂಟಿ ಕಾನ್ಸ್ಟೇಬಲ್ ಹುದ್ದೆಗಳನ್ನು ಸಿಎಪಿಎಫ್, ಎನ್.ಐ.ಎ, ಎಸ್.ಎಸ್.ಎಫ್ ಮತ್ತು ರೈಫಲ್ ಮೆನ್, ಅಸ್ಸಾಂ ರೈಫಲ್ಸ್ ಇಲ್ಲಿ ಭರ್ತಿ ಮಾಡಲಾಗುತ್ತದೆ. ಈ ಹುದ್ದೆಯ ಬಗ್ಗೆ ಪೂರ್ತಿ ಮಾಹಿತಿಯನ್ನು ತಿಳಿಸಿಕೊಡುತ್ತೇವೆ ನೋಡಿ..
ಈ ಹುದ್ದೆಗೆ ಅರ್ಜಿ ಸಲ್ಲಿಸಲು 10ನೇ ತರಗತಿ ಪಾಸ್ ಆಗಿದ್ರೆ ಸಾಕು, ವಿವಿಧ ಭದ್ರತಾ ಪಡೆಗಳಲ್ಲಿ 26,146 ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ಈಗ ಅವಕಾಶ ನೀಡಲಾಗಿದೆ. ಜೆನೆರಲ್ ಡ್ಯೂಟಿ ಕಾನ್ಸ್ಟ್ರೇಬಲ್ ಹುದ್ದೆಗಳು ಎಲ್ಲೆಲ್ಲಿ ಎಷ್ಟೆಷ್ಟು ಹುದ್ದೆ ಖಾಲಿ ಇದೆ ಎಂದು ನೋಡುವುದಾದರೆ..
ಗಡಿ ಭದ್ರತಾ ಪಡೆಯಲ್ಲಿ 6174 ಹುದ್ದೆಗಳು, ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ 3337 ಹುದ್ದೆಗಳು, ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ 11025 ಹುದ್ದೆಗಳು, ಸಶಸ್ತ್ರ ಸೀಮಾ ಬಲ್ ನಲ್ಲಿ 635 ಹುದ್ದೆಗಳು, ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ 3189 ಹುದ್ದೆಗಳು, ಅಸ್ಸಾಂ ರೈಫಲ್ಸ್ ನಲ್ಲಿ 1490 ಹುದ್ದೆಗಳು, ಸೆಕ್ರೇಟರಿಯಟ್ ಸೆಕ್ಯೂರಿಟಿ ಫೋರ್ಸ್ ನಲ್ಲಿ 296 ಹುದ್ದೆಗಳು ಖಾಲಿ ಇದೆ.
ಖಾಲಿ ಇರುವ ಒಟ್ಟು 26,146 ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ಸೂಚನೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಬಗ್ಗೆ ಪೂರ್ತಿ ಮಾಹಿತಿ ನೋಡುವುದಾದರೆ, ಅರ್ಜಿ ಹಾಕುವುದಕ್ಕೆ ಪ್ರಾರಂಭ ಆಗಿರುವ ದಿನಾಂಕ 24/11/2023, ಅರ್ಜಿ ಹಾಕಲು ಕೊನೆಯ ದಿನಾಂಕ 31/12/2024. ಈ ಹುದ್ದೆಗೆ ಸಿಬಿಟಿ ಪರೀಕ್ಷೆ ನಡೆಯುವ ದಿನ 2024ರ ಫೆಬ್ರವರಿ ಅಥವಾ ಮಾರ್ಚ್ ನಲ್ಲಿ, ದಿನಾಂಕ ಇನ್ನು ನಿಗದಿ ಆಗಿಲ್ಲ.
ಅರ್ಜಿ ಸಲ್ಲಿಕೆಗೆ ನಿಮ್ಮ ಇಮೇಲ್ ಐಡಿ, ಫೋನ್ ನಂಬರ್, SSLC ಮಾರ್ಕ್ಸ್ ಕಾರ್ಡ್, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸೇರಿದಂತೆ ಇನ್ನು ಕೆಲವು ಪ್ರಮುಖವಾದ ಮಾಹಿತಿ ಬೇಕಾಗುತ್ತದೆ. ಅರ್ಜಿ ಸಲ್ಲಿಕೆಗೆ ವಯೋಮಿತಿ ಇದ್ದು, 18 ರಿಂದ 23 ವರ್ಷದ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಯೋಮಿತಿ ಸಡಿಲಿಕೆ ಇದ್ದು, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ..
ಅರ್ಜಿ ಶುಲ್ಕ ಇದ್ದು, ಸಾಮಾನ್ಯ ವರ್ಗದವರು ಮತ್ತು ಇತರೆ ಹಿಂದುಳಿದ ವರ್ಗದವರು 100 ರೂಪಾಯಿ ಅರ್ಜಿ ಶುಲ್ಕ ಪಾವತಿ ಮಾಡಬೇಕು. ಎಸ್ಸಿ/ಎಸ್ಟಿ ವರ್ಗದವರಿಗೆ ಅರ್ಜಿ ಶುಲ್ಕ ಇಲ್ಲ..ನೆಟ್ ಬ್ಯಾಂಕಿಂಗ್, ಎಸ್.ಬಿ.ಐ ಚಲನ್ ಮತ್ತು ಕ್ರೆಡಿಟ್ ಕಾರ್ಡ್ ಮೂಲಕ ಶುಲ್ಕ ಪಾವತಿ ಮಾಡಬಹುದು. ಆಯ್ಕೆ ವಿಧಾನ ಹೇಗಿರುತ್ತದೆ ಎಂದರೆ, ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಯಲಿದ್ದು ಸಿಬಿಟಿ೦, ಪಿ.ಎಸ್.ಟಿ, ಪಿಇಟಿ, ದಾಖಲೆಗಳ ಪರಿಶೀಲನೆ, ಮೆಡಿಕಲ್ ಟೆಸ್ಟ್ ಇಷ್ಟು ಪ್ರೊಸೆಸ್ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ https://ssc.nic.in ಈ ವೆಬ್ಸೈಟ್ ಗೆ ಭೇಟಿ ನೀಡಿ.