Jobs In 2024: ಹೊಸ ವರ್ಷಕ್ಕೆ ಈ ಎಲ್ಲಾ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದೆ ಸರ್ಕಾರ, ಈಗಿನಿಂದಲೇ ಅಪ್ಲೈ ಮಾಡಲು ತಯಾರಿ ಮಾಡಿಕೊಳ್ಳಿ ಸರ್ಕಾರಿ ಕೆಲಸ ಸಿಗಬೇಕು ಎಂದು ಬಯಸುತ್ತಿರುವವರಿಗೆ ಇದೀಗ ಒಂದು ಗುಡ್ ನ್ಯೂಸ್ ಸಿಕ್ಕಿದೆ. ಅದೇನು ಎಂದರೆ 2024ರ ಹೊಸ ವರ್ಷ ಶುರುವಾದ ಬಳಿಕ ವಿವಿಧ ಹುದ್ದೆಗಳಿಗೆ ಸರ್ಕಾರ ನೇಮಕಾತಿ ಮಾಡಿಕೊಳ್ಳಲಿದ್ದು, ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಇದು ಒಳ್ಳೆಯ ಅವಕಾಶ ಆಗಿದೆ. ಹಾಗಿದ್ದಲ್ಲಿ ಯಾವೆಲ್ಲಾ ಇಲಾಖೆಗಳಲ್ಲಿ ನೇಮಕಾತಿ ನಡೆಯಲಿದೆ ಎಂದು ಮಾಹಿತಿ ನೀಡುತ್ತೆವೆ ನೋಡಿ..
ಕಂದಾಯ ಇಲಾಖೆ :- ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. 265 ನೋಂದಣಿ ಕಚೇರಿಗಳಲ್ಲಿ, ಸುಮಾರು 1145 ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಇದರಲ್ಲಿ 55 ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡುವ ಬಗ್ಗೆ ಮಾಹಿತಿ ಸಿಕ್ಕಿದೆ.
ಗ್ರಾಮ ಲೆಕ್ಕಿಗರು :- ನಮ್ಮ ರಾಜ್ಯದಲ್ಲಿ ಈಗ ಸುಮಾರು 1500 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆ ಖಾಲಿ ಇದೆ, ಅವುಗಳ ಪೈಕಿ ಸಧ್ಯಕ್ಕೆ 750 ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಮಾಡಿರುವುದಾಗಿ ಮಾಹಿತಿ ನೀಡಲಾಗಿದೆ.
ಅರಣ್ಯ ಇಲಾಖೆ :- ಈ ಇಲಾಖೆಯಲ್ಲಿ 26 ವಲಯ ಅರಣ್ಯಾಧಿಕಾರಿ ಹುದ್ದೆಗಳು ಖಾಲಿ ಇದೆ, ಹಾಗೆಯೇ 143 ಉಪ ಅರಣ್ಯಾಧಿಕಾರಿ ಹುದ್ದೆಗಳು ಖಾಲಿ ಇದ್ದು ಇವುಗಳನ್ನು ಭರ್ತಿ ಮಾಡಲಾಗುತ್ತದೆ. ನ್ಸ್ರ ನೇಮಕಾತಿ ಮೂಲಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
ಸಾರಿಗೆ ಇಲಾಖೆ :- ಸಚಿವರಾದ ರಾಮಲಿಂಗಾರೆಡ್ಡಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಮುಂದಿನ ವರ್ಷ ಖಾಲಿ ಇರುವ 9000 ಕಂಡಕ್ಟರ್ ಹಾಗೂ ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
KAS ನೇಮಕಾತಿ :- ಪ್ರಸ್ತುತ ರಾಜ್ಯದಲ್ಲಿ ಖಾಲಿ ಇರುವ ಕೆಎಎಸ್ ಗೆಜೆಟೆಡ್ ಪ್ರೊಬೆಶನರಿ ಹುದ್ದೆಗೆ ಸಂಬಂಧಿಸಿದ ಹಾಗೆ 656 ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಲಾಗಿದೆ. ಪ್ರಸ್ತುತ 500 ಹುದ್ದೆಗಳನ್ನು ಭರ್ತಿ ಮಾಡಬಹುದು ಎಂದು ಹೇಳಲಾಗುತ್ತಿದೆ.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ :- ಪಂಚಾಯತ್ ರಾಜ್ ಇಲಾಖೆಯಲ್ಲಿ 150 PDO ಹುದ್ದೆಗಳು ಖಾಲಿ ಇದೆ, 135 ಪಂಚಾಯಿತಿ ಕಾರ್ಯದರ್ಶಿ ಗ್ರೇಡ್ 1 ಹುದ್ದೆಗಳು ಖಾಲಿ ಇದೆ, 343 ಪಂಚಾಯಿತಿ ಗ್ರೇಡ್ 2 ಹುದ್ದೆಗಳು ಖಾಲಿ ಇದೆ, 105 ಸೆಕೆಂಡ್ ಡಿವಿಷನ್ ಕ್ಲರ್ಕ್ ಹುದ್ದೆಗಳು ಖಾಲಿ ಇದೆ. ಈ ಹುದ್ದೆಗಳನ್ನು ಭರ್ತಿ ಮಾಡಬಹುದು ಎನ್ನಲಾಗುತ್ತಿದೆ.
ಸಮಾಜ ಕಲ್ಯಾಣ ಇಲಾಖೆ ವಾರ್ಡನ್ ಹುದ್ದೆಗಳು :- ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಗಳಲ್ಲಿ ಖಾಲಿ ಇರುವ 232 ವಾರ್ಡನ್ ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಸಿಎಂ ಅವರೊಡನೆ ಚರ್ಚೆ ನಡೆಸಲಾಗುತ್ತಿದೆ.
ಪೊಲೀಸ್ ಇಲಾಖೆ :– ಪೊಲೀಸ್ ಇಲಾಖೆಯಲ್ಲಿ ಸುಮಾರು 2000 ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡುವುದಕ್ಕೆ ಅವಕಾಶ ನೀಡಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ :– ಈ ಇಲಾಖೆಯಲ್ಲಿ 2439 ನಿಲಯ ಪಾಲಕರು, ನಿಲಯ ಮೇಲ್ವಿಚಾರಕ ಹುದ್ದೆಗಳು ಖಾಲಿ ಇದೆ. ಇವುಗಳ ಪೈಕಿ 1189 ಹುದ್ದೆಗಳನ್ನು ಭರ್ತಿ ಆಗಿದೆ. 1250 ಹುದ್ದೆಗಳು ಖಾಲಿ ಇದೆ, ಇದರಲ್ಲಿ 150 ಹುದ್ದೆಗಳನ್ನು ಭರ್ತಿ ಮಾಡಲು KPSC ಗೆ ಮನವಿ ಮಾಡಲಾಗಿದೆ. ಹಾಗೆಯೇ ಇವುಗಳ ಪೈಕಿ 1006 ಹುದ್ದೆಗಳನ್ನು ನೇರ ನೇಮಕಾತಿ ಮಾಡಲು ಪ್ರಸ್ತಾವನೆ ಹಾಕಲಾಗಿದೆ.
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ, ಕರ್ನಾಟಕ ವಿದ್ಯುತ್ ನಿಗಮ ನಿಯಮಿತ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಇಲ್ಲಿ ಖಾಲಿ ಇರುವ ಹುದ್ದೆಗಳನ್ನು ಸಹ ಭರ್ತಿ ಮಾಡಲಾಗುತ್ತದೆ.