Gruhalakshmi Scheme Money: ರಾಜ್ಯದ ಮಹಿಳೆಯರಿಗೆ ಸಹಾಯ ಆಗಲಿ ಎಂದು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ ಜಾರಿಗೆ 4 ತಿಂಗಳು ಕಲೆಯುತ್ತಿದೆ. ಸುಮಾರು ಮಹಿಳೆಯರಿಗೆ 3 ಕಂತಿನ ಹಣ ಕೂಡ ಬಂದಿದೆ. ಆದರೆ ಇನ್ನೂ ಸಾಕಷ್ಟು ಮಹಿಳೆಯರಿಗೆ ಮೊದಲ 2 ಕಂತುಗಳ ಹಣ ಬಿಟ್ಟು ಇನ್ನೇನು ಬಂದಿಲ್ಲ ಎನ್ನುತ್ತಿದ್ದಾರೆ. ಇತ್ತ ಸರ್ಕಾರ ರೇಷನ್ ಕಾರ್ಡ್, ಬ್ಯಾಂಕ್ ಅಕೌಂಟ್ ಇವುಗಳ ಸಮಸ್ಯೆ ಇರೋದಕ್ಕೆ ಹಣ ಬಂದಿಲ್ಲ ಎಂದು ಹೇಳುತ್ತಿದೆ.
ವಿಚಾರಿಸಲು ಆಹಾರ ಇಲಾಖೆಗೆ ಹೋದರೆ ಅವರಲ್ಲಿ ಮಾಹಿರಿ ಇಲ್ಲ, ಬ್ಯಾಂಕ್ ನಲ್ಲಿ ವಿಚಾರಿಸಿ ಎನ್ನುತ್ತಾರೆ, ಬ್ಯಾಂಕ್ ಗ್3 ಹೋದರೆ ನಮಗೆ ಗೊತ್ತಿಲ್ಲ ಆಹಾರ ಇಲಾಖೆಗೆ ಹೋಗಿ ಅಂತ ಹೇಳುತ್ತಾರ್3 ಎಂದು ಮಹಿಳೆಯರು ತಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತಾ ಇಲ್ವಾ ಎಂದು ಆತಂಕಕ್ಕೆ ಒಳಗಾಗಿದ್ದಾರೆ. ಮಹಿಳೆಯರು ಹೇಳುವ ಪ್ರಕಾರ ಅವರ ಬ್ಯಾಂಕ್ ಅಕೌಂಟ್ ಸರಿಯಾಗಿಯೇ ಇದೆ, ಸರ್ಕಾರದ ಸಮಸ್ಯೆ ಇಂದಲೇ ಹಣ ಬಂದಿಲ್ಲ. ಹೀಗಾಗಿ ಇದು ಸರ್ಕಾರದ ತೊಂದರೆಯೇ ಎಂದು ಗೊತ್ತಾಗುತ್ತಿದೆ.
Gruhalakshmi Scheme Money
ಹಲವು ಮಹಿಳೆಯರಿಗೆ ಒಂದು ಕಂತಿನ ಹಣವು ಬಂದಿಲ್ಲದೇ ಇರುವುದು ಅವರ ಆತಂಕ ಹೆಚ್ಚಿಸಿದೆ. ಆದರೆ ಸರ್ಕಾರವು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಹಾಗೆ ಕೆಲವು ನಿಯಮಗಳನ್ನು ಇಟ್ಟಿದೆ, ಆ ನಿಯಮಗಳನ್ನು ಪಾಲಿಸಿಲ್ಲ ಎಂದರೆ ಅಂಥ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗಲ್ಲ. ಅದು ಏನು ಎಂದರೆ, ಟ್ಯಾಕ್ಸ್ ಪಾವತಿ ಮಾಡುವ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗೋದಿಲ್ಲ.
ಹೌದು, ಈ ನಿಯಮ ಗೊತ್ತಿದ್ದು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವ 50,000 ಅರ್ಜಿಗಳನ್ನು ಸರ್ಕಾರ ರದ್ದು ಮಾಡಿದೆ. ಹಾಗೆಯೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವ 3000 ಸಾವಿರ ಮಹಿಳೆಯರು ಮೃತ ಪಟ್ಟಿದ್ದು, ಅವರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗುವುದಿಲ್ಲ. ಇನ್ನು ಕೆಲವರಿಗೆ ಆಧಾರ್ ಸೀಡಿಂಗ್ ಆಗಿಲ್ಲದ ಕಾರಣ ಅವರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ.
ಹಾಗೆಯೇ ಕೆಲವು ಮಹಿಳೆಯರಿಗೆ ಸೆಪ್ಟೆಂಬರ್ ತಿಂಗಳ ಹಣ ಕೂಡ ಬಂದಿಲ್ಲ, ಯಜಮಾನನ ಅಕೌಂಟ್ ಗೆ ಬರುತ್ತದೆ ಎಂದು ಹೇಳಿದ್ದರು ಸಹ ಆ ಹಣವು ಕೂಡ ಬಂದಿಲ್ಲ. ಆದರೆ 4 ಕಂತಿನ ಹಣ ಈಗಾಗಲೇ 15 ಜಿಲ್ಲೆಯ ಮಹಿಳೆಯರಿಗೆ ಬಂದಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ನೀವು ಆಹಾರ ಇಲಾಖೆಯ ವೆಬ್ಸೈಟ್ ನಲ್ಲಿ https://ahara.kar.nic.in/Home/EServices ಈ ಲಿಂಕ್ ಕ್ಲಿಕ್ ಮಾಡುವ ಮೂಲಕ ಡಿಬಿಟಿ ಸ್ಟೇಟಸ್ ಚೆಕ್ ಮಾಡಬಹುದು. ಇದರಲ್ಲಿ ನಿಮಗೆ ಹಣ ಬರುತ್ತೋ ಇಲ್ಲವೋ ಎಂದು ಗೊತ್ತಾಗುತ್ತದೆ.