ನಮಗೆಲ್ಲ ಗೊತ್ತಿರುವ ಹಾಗೆ ಇಂದು ಕೇಂದ್ರದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ ಮಧ್ಯಂತರ ಬಜೆಟ್ ಮಂಡನೆ ನಡೆದಿದೆ. ಇದರಲ್ಲಿ ಜನರಿಗೆ ಅನುಕೂಲ ಅಗುವಂಥ ಸಾಕಷ್ಟು ಸೌಲಭ್ಯಗಳು ಮತ್ತು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಈ ವೇಳೆ ನಿರ್ಮಲಾ ಸೀತಾರಾಮನ್ ಅವರು ಒಂದು ಭರ್ಜರಿ ಸಂತೋಷದ ಸುದ್ದಿಯನ್ನು ಘೋಷಣೆ ಮಾಡಿದ್ದಾರೆ. ದೇಶದ ಜನರಿಗೆ ಇದು ಬಹಳ ಸಂತೋಷದ ವಿಚಾರ ಆಗಿದೆ.
ನಿರ್ಮಲಾ ಸೀತಾರಾಮನ್ ಅವರು ಘೋಷಿಸಿರುವ ಸಂತೋಷದ ವಿಚಾರ ಏನು ಎಂದರೆ, ಬಜೆಟ್ ಮಂಡನೆಯಲ್ಲಿ ನಮ್ಮ ದೇಶದ 1 ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಣೆ ಮಾಡಿದ್ದಾರೆ ನಿರ್ಮಲಾ ಸೀತಾರಾಮನ್. ಇದು ನಿಜಕ್ಕೂ ಜನರಿಗೆ ಅನುಕೂಲ ನೀಡಲಿದ್ದು, ಈ ಸೌಲಭ್ಯವನ್ನು ಹೇಗೆ ಪಡೆದುಕೊಳ್ಳುವುದು ಎಂದು ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ.
ಹಾಗೆಯೇ ನಮ್ಮ ದೇಶದಲ್ಲಿ ಹೆಚ್ಚು ಮೆಡಿಕಲ್ ಕಾಲೇಜುಗಳನ್ನು ತೆರೆಯಲಾಗುತ್ತದೆ ಎಂದು ಕೂಡ ಹೇಳಿದ್ದಾರೆ. ಅಂಗನವಾಡಿ ಕೇಂದ್ರಗಳನ್ನು ಉತ್ತಮ ದರ್ಜೆಗೆ ತೆಗೆದುಕೊಂಡು ಹೋಗಲಾಗುವುದು ಎಂದಿದ್ದಾರೆ.. ಅಂಗನವಾಡಿ ಕಾರ್ಯಕರ್ತೆಯರಿಗೆ ಆಯುಶ್ಮಾನ್ ಭಾರತ್ ಯೋಜನೆಯ ಸೌಲಭ್ಯ ನೀಡಲಾಗುತ್ತದೆ. ಹಾಗೆಯೇ ಮುಂದಿನ 5 ವರ್ಷಗಳಲ್ಲಿ 5 ಕೋಟಿ ಬಡವರಿಗೆ ಮನೆ ಕಟ್ಟಿಸಿಕೊಡಲಾಗುತ್ತದೆ ಎಂದು ತಿಳಿಸಿದ್ದಾರೆ.