ನಮ್ಮ ದೇಶ ಮೊದಲಿನಿಂದಲೂ ಕೆಲವು ಸಮಸ್ಯೆಗಳನ್ನು ಎದುರಿಸುತ್ತಲೆ ಬಂದಿದೆ ಅವುಗಳಲ್ಲಿ ನಿರುದ್ಯೋಗ ಒಂದು ಪ್ರಮುಖ ಸಮಸ್ಯೆಯಾಗಿದೆ ನಿರುದ್ಯೋಗ ಇಂದಿಗೂ ಕೂಡ ಕಂಡು ಬರುತ್ತಿದೆ. ದ್ವಿತೀಯ ಪಿಯುಸಿ ಹಾಗೂ ಪದವಿ ಓದಿದ ಯುವಕ ಯುವತಿಯರಿಗೆ ಸಿಹಿ ಸುದ್ದಿಯೊಂದಿದೆ ಅದೇನೆಂದು ಈ ಲೇಖನದಲ್ಲಿ ನೋಡೋಣ
ಹಟ್ಟಿಗೋಲ್ಡ್ ಮೈನ್ಸ್ ಲಿಮಿಟೆಡ್ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟಗೊಂಡಿದೆ ಎಚ್ ಜಿಎಂಎಲ್. ಈ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಭರ್ತಿ ಮಾಡಲು ನಿರ್ಧರಿಸಲಾಗಿದೆ ಒಟ್ಟು 135 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ಫೋರ್ ಮನ್ ಖಾಲಿ ಇರುವ 41 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ, ಭದ್ರತಾ ನಿರೀಕ್ಷಕರು ಖಾಲಿ ಇರುವ 6 ಹುದ್ದೆಗಳಿಗೆ, ಐಟಿಐ ಫಿಟ್ಟರ್ ಖಾಲಿ ಇರುವ 64 ಹುದ್ದೆಗಳಿಗೆ ಭದ್ರತಾ ಸಿಬ್ಬಂದಿ ಖಾಲಿ ಇರುವ 24 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.
ಹಟ್ಟಿ ಗೋಲ್ಡ್ ಮೈನ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕೆಲವು ಅರ್ಹತೆಯನ್ನು ಹೊಂದಿರಬೇಕು. ಅಭ್ಯರ್ಥಿಯು ದ್ವಿತೀಯ ಪಿಯುಸಿ, ಐಟಿಐ, ಡಿಪ್ಲೋಮಾ ಅಥವಾ ಯಾವುದೆ ಪದವಿಯನ್ನು ಪಡೆದಿರಬೇಕು ಅಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಜೊತೆಗೆ ಹುದ್ದೆಗೆ ಸಂಬಂಧಿಸಿದಂತೆ ಶಿಸ್ತನ್ನು ಹೊಂದಿರಬೇಕು. ಇನ್ನು ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ, ಪ್ರವರ್ಗ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ 38 ವರ್ಷ, ಪ್ರವರ್ಗ 1,ಎಸ್ಸಿ,ಎಸ್ಟಿ ಅಭ್ಯರ್ಥಿಗಳು 40 ವರ್ಷ ವಯೋಮಿತಿ ಸಡಿಲಿಕೆ ಇದೆ, ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಕೊಡಲಾಗಿದೆ.
ಇನ್ನು ಅರ್ಜಿ ಶುಲ್ಕ ನೋಡುವುದಾದರೆ, ಸಾಮಾನ್ಯ ವರ್ಗದವರಿಗೆ 600 ರೂಪಾಯಿ ಹಿಂದುಳಿದ ವರ್ಗಕ್ಕೆ ಸೇರಿದವರು 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ 300 ರೂಪಾಯಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ನೂರು ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನವನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ. ಹಟ್ಟಿ ಗೋಲ್ಡ್ ಮೈನ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇದೆ ಮೇ 31, 2024 ಆಗಿರುತ್ತದೆ ಹೀಗಾಗಿ ಆಸಕ್ತ ಅಭ್ಯರ್ಥಿಗಳು ಮೇ 31ರ ಒಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಮಾಹಿತಿಯನ್ನು ತಪ್ಪದೆ ಎಲ್ಲರಿಗೂ ತಿಳಿಸಿ.