ನಮ್ಮ ದೇಶ ಮೊದಲಿನಿಂದಲೂ ಕೆಲವು ಸಮಸ್ಯೆಗಳನ್ನು ಎದುರಿಸುತ್ತಲೆ ಬಂದಿದೆ ಅವುಗಳಲ್ಲಿ ನಿರುದ್ಯೋಗ ಒಂದು ಪ್ರಮುಖ ಸಮಸ್ಯೆಯಾಗಿದೆ ನಿರುದ್ಯೋಗ ಇಂದಿಗೂ ಕೂಡ ಕಂಡು ಬರುತ್ತಿದೆ. ಪದವಿ ಓದಿದ ಯುವಕ ಯುವತಿಯರಿಗೆ ಸಿಹಿ ಸುದ್ದಿಯೊಂದಿದೆ ಅದೇನೆಂದು ಈ ಲೇಖನದಲ್ಲಿ ನೋಡೋಣ

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೊ ಎನ್ ಸಿಬಿ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಇಲಾಖೆಯಲ್ಲಿ ಖಾಲಿ ಇರುವ ಇನ್ಸಪೆಕ್ಟರ್ ಹುದ್ದೆಗೆ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೊ ಇದರಲ್ಲಿ 14 ಖಾಲಿ ಇರುವ ಸಬ್ ಇನ್ಸಪೆಕ್ಟರ್ ಹುದ್ದೆಗೆ ಅರ್ಜಿ ಕರೆಯಲಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಆಫ್ಲೈನ್ ಮೂಲಕವೆ ಸಲ್ಲಿಸಬೇಕಾಗುತ್ತದೆ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೊ ಇಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗೆ ಕೆಲವು ಅರ್ಹತೆಗಳಿರಬೇಕು ಎನ್ ಸಿಬಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೆ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೊ ಇವರ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 56 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ ಈ ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ 17 ಮೇ 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16 ಜುಲೈ 2024 ಆಗಿರುತ್ತದೆ.
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೊ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ಪರೀಕ್ಷೆಗಳಿಗೆ ಹಾಜರಾಗಬಹುದು. ಈ ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವುದರಿಂದ ಅರ್ಜಿ ಶುಲ್ಕದ ಬಗ್ಗೆ ಮಾಹಿತಿಯನ್ನು ನೀಡಿಲ್ಲ ಯಾವುದೆ ಜಾತಿಯ ಅಭ್ಯರ್ಥಿಯು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಫಾರ್ಮ್ ಸಿಗುತ್ತದೆ ಅದನ್ನು ಪಡೆದು ಭರ್ತಿ ಮಾಡಿ ಇಲಾಖೆಗೆ ಸಲ್ಲಿಸಬೇಕು ನಂತರ ಲಿಖಿತ ಪರೀಕ್ಷೆ ಹಾಗೂ ಸಂದರ್ಶನಕ್ಕೆ ಹಾಜರಾಗಬೇಕು ಜುಲೈ 16ರ ಒಳಗೆ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆಯಿರಿ. ಈ ಮಾಹಿತಿಯನ್ನು ಯುವಕ ಯುವತಿಯರಿಗೆ ತಿಳಿಸಿ.