ದೇಶ ಹಾಗೂ ರಾಜ್ಯದ ಜನರ ಅನುಕೂಲತೆಗಾಗಿ ಹಲವು ಯೋಜನೆಗಳನ್ನು ರೂಪಿಸಲಾಗುತ್ತದೆ, ಅಷ್ಟೇ ಅಲ್ಲದೆ ಈ ಯೋಜನೆಯಡಿಯಲ್ಲಿ ಬಡವರಿಗೆ ಉತ್ತಮ ಗುಣಮಟ್ಟದ ಅರೋಗ್ಯ ಸೌಲಭ್ಯ ಸಿಗಲಿ ಅನ್ನೋ ಕಾರಣಕ್ಕೆ ಈ ಹಿಂದೆ ಮೋದಿ ಸರ್ಕಾರ ‘ಆಯುಷ್ಮಾನ್ ಭಾರತ ಯೋಜನೆಯನ್ನು ರೂಪಿಸಿತ್ತು ಈಗಾಗಲೇ ಈ ಯೋಜನೆಯ ಸದುಪಯೋಗವನ್ನು ಕೆಲವರು ಪಡೆದುಕೊಳ್ಳುತ್ತಿದ್ದಾರೆ. ಇದೆ ನಿಟ್ಟಿನಲ್ಲಿ ಆಗಸ್ಟ್ ೧೫ ರಂದು ಮೋದಿಜಿಯವರು ತಮ್ಮ ಭಾಷಣದ ಮೂಲಕ ಅರೋಗ್ಯ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಅಷ್ಟಕ್ಕೂ ಈ ಯೋಜನೆಯ ವಿಶೇಷತೆ ಏನು ಅನ್ನೋದನ್ನ ಮುಂದೆ ನೋಡಿ.
ನ್ಯಾಷನಲ್ ಡಿಜಿಟಲ್ ಹೆಲ್ತ್ ಮಿಷನ್ ಈ ಯೋಜನೆಯಡಿಯಲ್ಲಿ ಪ್ರತಿಯೊಬ್ಬ ಭಾರತೀಯನಿಗೂ ಹೆಲ್ತ್ ಐಡಿ ನೀಡಲಾಗುತ್ತದೆ, ಇದರಿಂದ ಬಡವರಿಗೆ ಉಪಯೋಗವಾಗಲಿದೆ ಅನ್ನೋದನ್ನ ಮೋದಿಜಿಯವರು ತಿಳಿಸಿದ್ದಾರೆ. ಹೌದು ವೈದ್ಯರು ಯಾವ ಔಷಧ ತೆಗದುಕೊಳ್ಳಲು ಸೂಚಿಸಿದ್ದಾರೆ, ಯಾವಾಗ ಅದನ್ನು ಸೂಚಿಸಲಾಗಿದೆ ಎಂಬ ಮಾಹಿತಿ ಜತೆಗೆ ಆರೋಗ್ಯಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿಗಳು ವ್ಯಕ್ತಿಯ ಹೆಲ್ತ್ ಐಡಿಗೆ ಲಿಂಕ್ ಆಗಿರಲಿವೆ.
ಇನ್ನು ಈ ಯೋಜನೆಯ ವಿಶೇಷತೆ ಏನು ಅನ್ನೋದನ್ನ ನೋಡುವುದಾದರೆ, ತಂತ್ರಜ್ಞಾನ ಆಧಾರಿತ ಯೋಜನೆಯಾಗಿದ್ದು, ಎಲ್ಲರಿಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಡಿಜಿಟಲ್ ವ್ಯವಸ್ಥೆಗಳನ್ನು ಬಳಸಿಕೊಳ್ಳಲಾಗುತ್ತದೆ. ಇದು ಅನೇಕ ಡಿಜಿಟಲ್ ಆರೋಗ್ಯ ಸೇವೆಗಳನ್ನು ಒಟ್ಟುಗೂಡಿಸಿ ಅಸ್ತಿತ್ವದಲ್ಲಿರುವ ಆರೋಗ್ಯ ಮಾಹಿತಿಗಳನ್ನು ಸಂಯೋಜಿಸಲು ನೆರವಾಗಲಿದೆ.
ಮತ್ತೆ ಇದರಿಂದ ಯಾವುದೇ ತೊಂದರೆಯಾಗುವುದಿಲ್ಲ ಅಂದರೆ ಈ ಕಾರ್ಡ್ ನಿಂದ ಯಾವುದೇ ವಯಕ್ತಿಕ ಮಾಹಿತಿಯ ಸೋರಿಕೆ ಆಗೋದಿಲ್ಲ ಸುರಕ್ಷತೆ ಮತ್ತು ಗೋಪ್ಯತೆಯನ್ನು ಖಾತರಿಪಡಿಸಲಾಗುತ್ತದೆ ಎಂದು ಸರ್ಕಾರವೇ ತಿಳಿಸಿದೆ.
ಏನಿದು ಹೆಲ್ತ್ ಐಡಿ ಅನ್ನೋದನ್ನ ಮತ್ತೊಮ್ಮೆ ಹೇಳುವುದಾದರೆ ನಮ್ಮ ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಡಿಜಿಟಲ್ ಹೆಲ್ತ್ ಐಡಿ ಕೊಡಲಾಗುತ್ತದೆ. ಯಾವುದೇ ಒಬ್ಬ ವ್ಯಕ್ತಿಯ ಆರೋಗ್ಯ ದಾಖಲೆಗಳು ಡಿಜಿಟಲ್ ಸ್ವರೂಪದಲ್ಲಿ ಇರಲಿದ್ದು, ದೇಶದಾದ್ಯಂತ ಇರುವ ವೈದ್ಯರು ಮತ್ತು ಸರ್ಕಾರದ ಆರೋಗ್ಯ ಸೌಲಭ್ಯಗಳೊಂದಿಗೆ ಲಿಂಕ್ ಆಗಿರಲಿದೆ. ಮುಖ್ಯವಾಗಿ ಈ ಯೋಜನೆಯನ್ನು ತರಲು ಮುಖ್ಯ ಉದ್ದೇಶವೇನು ಅನ್ನೋ ಮಾಹಿತಿಯನ್ನು ತಿಳಿಯುವುದಾದರೆ, ಆರೋಗ್ಯ ಸೇವೆಗಳ ದಕ್ಷತೆ, ಪರಿಣಾಮ ಮತ್ತು ಪಾರದರ್ಶಕತೆ ಹೆಚ್ಚಿಸುವ ಸಲುವಾಗಿ ಈ ಯೋಜನೆ ಹಮ್ಮಿಕೊಳ್ಳಲಾಗಿದೆ. ಹೆಲ್ತ್ ಐಡಿಯು ಮೊಬೈಲ್ ಆ್ಯಪ್ ರೂಪದಲ್ಲಿ ಇರಲಿದೆ ಅನ್ನೋದನ್ನ ಮೂಲಗಳು ತಿಳಿಸಿವೆ.