ಉಪೇಂದ್ರ ಅವರು ಕನ್ನಡ ಚಿತ್ರರಂಗದಲ್ಲಿ ಸೇರಿ ಕನ್ನಡ ಚಿತ್ರರಂಗಕ್ಕೆ ಒಳ್ಳೆಯ ಹೆಸರನ್ನು ನೀಡಿದ್ದಾರೆ. ಇವರ ನಟನೆಗಳಿಗೆ ಮತ್ತು ಇವರ ಅಲೋಚನೆಗಳಿಗೆ ಇನ್ನೊಬ್ಬರನ್ನು ಹೋಲಿಸಲು ಸಾಧ್ಯವಿಲ್ಲ. ಇವರು ಸೂಪರ್ ಸ್ಟಾರ್ ಎಂದೇ ಪ್ರಖ್ಯಾತಿ ಆಗಿದ್ದಾರೆ. ನಾವು ಇಲ್ಲಿ ಉಪೇಂದ್ರ ಅವರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಉಪೇಂದ್ರ ನಿರ್ದೇಶಕ ಹಾಗೂ ನಟ. ಇವರು ಮಧ್ಯಮ ವರ್ಗದ ಬ್ರಾಹ್ಮಣ ಕುಟುಂಬದಲ್ಲಿ ಮಂಜುನಾಥ್ ರಾವ್ ಮತ್ತು ಅನಸೂಯ ದಂಪತಿಗಳ ಎರಡನೆಯ ಪುತ್ರನಾಗಿ ದಿನಾಂಕ 18 ಸೆಪ್ಟೆಂಬರ್ 1968ರಲ್ಲಿ ಕುಂದಾಪುರ ಸಮೀಪದಲ್ಲಿರುವ ಕೋಟೇಶ್ವರದಲ್ಲಿ ಜನಿಸಿದರು. ಇವರ ಅಣ್ಣ ಸುಧೀಂದ್ರ. ಉಪೇಂದ್ರರವರು 1998ರಲ್ಲಿ ಬಿಡುಗಡೆಯಾದ ತರ್ಲೆನನ್ಮಗ ಚಿತ್ರದ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಇದಕ್ಕೂ ಮುಂಚೆ ಕಾಶೀನಾಥ್ ಜೊತೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು. ಇವರು ತಮ್ಮ ಮತ್ತು ಇತರರ ಚಿತ್ರಗಳಿಗೆ ಹಾಡುಗಳನ್ನು ರಚಿಸಿದ್ದಾರೆ.

ಉಪೇಂದ್ರ ರವರು ಬಸವನಗುಡಿಯ ಎ.ಪಿ.ಎಸ್ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವಾಗ ನಿರ್ದೇಶನವನ್ನು ಅಂಟಿಸಿಕೊಂಡ ಉಪ್ಪಿ ಕನ್ನಡದ ಹೆಸರಾಂತ ನಿರ್ದೇಶಕ ಕಾಶೀನಾಥ್ ಅವರ ಬಳಿ ಸಹಾಯ ನಿರ್ದೇಶಕರಾಗಿ ಕೆಲಸ ಮಾಡಿದರು. 1998ರಲ್ಲಿ ತೆರೆಗೆ ಬಂದ ಎ ಚಿತ್ರವನ್ನು ನಿರ್ದೇಶಿಸಿ ಸ್ವತಃ ತಾವೇ ನಟಿಸಿ, ನಾಯಕನಾಗಿಯೂ ಕನ್ನಡ ಚಿತ್ರರಂಗದಲ್ಲಿ ಪರಿಚಿತರಾದರು. ಮುಂದೆ ತೆರೆಗೆ ಬಂದ ಉಪೇಂದ್ರ ಚಿತ್ರವು ಹಲವಾರು ದಾಖಲೆಗಳನ್ನು ಬರೆಯಿತು. ಇವೆರಡು ಚಿತ್ರಗಳು ಕನ್ನಡದಲ್ಲಿ ಮಾತ್ರವಲ್ಲದೇ ತೆಲುಗು ಚಿತ್ರರಂಗದಲ್ಲಿಯೂ ಶತದಿನ ಪೂರೈಸಿದವು. ಇಲ್ಲಿಂದ ಮುಂದೆ 10 ವರ್ಷಗಳ ಕಾಲ ನಿರ್ದೇಶನವನ್ನು ಬದಿಗಿಟ್ಟ ಉಪ್ಪಿ, ಹಲವಾರು ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದರು.

ಮುಂದೆ ಇವರು 2010ರಲ್ಲಿ ನಿರ್ದೇಶಿಸಿದ ‘ಸೂಪರ್ ಮತ್ತು 2015ರಲ್ಲಿ ನಿರ್ದೇಶಿಸಿದ ಉಪ್ಪಿ 2 ಚಿತ್ರಗಳು ಶತದಿನ ಪೂರೈಸಿದವು. 2003ರಲ್ಲಿ ಉಪೇಂದ್ರ ಖ್ಯಾತ ನಟಿ ಪ್ರಿಯಾಂಕ ಅವರನ್ನು ಕೈಹಿಡಿದರು. ಇವರಿಗೆ ಆಯುಷ್ ಉಪೇಂದ್ರ ಮತ್ತು ಐಶ್ವರ್ಯ ಉಪೇಂದ್ರ ಎಂಬ ಇಬ್ಬರು ಮಕ್ಕಳಿದ್ದಾರೆ. ಪ್ರಿಯಾಂಕಾ ಉಪೇಂದ್ರ ಮೂಲತಃ ಪಶ್ಚಿಮ ಬಂಗಾಳದವರು. ಪ್ರಿಯಾಂಕಾ ಉಪೇಂದ್ರ ಅವರು ನಟಿಸಿದ ಕನ್ನಡದ ಮೊದಲ ಚಿತ್ರ ಉಪೇಂದ್ರ ರವರ ಲೇಖನ ಮತ್ತು ನಾಯಕತ್ವದ H2O ಸಿನೆಮಾ. ಉಪೇಂದ್ರ ರವರು 2018 ಮಾರ್ಚ್ ನಲ್ಲಿ ಪ್ರಜಾಕೀಯ ಪಕ್ಷ ಸ್ಥಾಪಿಸಿ ರಾಜಕೀಯವಾಗಿಯೂ ಸಕ್ರಿಯವಾಗಿದ್ದಾರೆ. ಈಗ ತಮ್ಮ ಮಕ್ಕಳ ಮತ್ತು ಹೆಂಡತಿಯ ಜೊತೆ ಮನೆಯಲ್ಲಿ ಸಂತೋಷವಾಗಿದ್ದಾರೆ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!