ನಿರುದ್ಯೋಗಿ ಮಹಿಳೆಯರಿಗೆ ಒಂದು ಸಿಹಿ ಸುದ್ದಿ ಬಂದಿದೆ. ಮಹಿಳೆಯರಿಗೆ 3ಲಕ್ಷದವರೆಗೆ ಸಾಲದ ಸೌಲಭ್ಯವನ್ನು ನೀಡಲು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ನಿರುದ್ಯೋಗ ಮಹಿಳೆಯರಿಗೆ ಸ್ವಯಂ ಉದ್ಯೋಗ ಮಾಡಿಕೊಳ್ಳಲು ಸಾಲ ಸೌಲಭ್ಯ ನೀಡಲು ಉದ್ಯೋಗಿನಿ ಯೋಜನೆಯ ಅಡಿಯಲ್ಲಿ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಾವು ಇಲ್ಲಿ ತಿಳಿಯೋಣ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಎಸ್.ನಟರಾಜ್ ಅವರು ಉದ್ಯೋಗಿನಿ ಯೋಜನೆಯ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ಈ ಯೋಜನೆಯ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಹಾಗೂ ಸಾಮಾನ್ಯ ಮಹಿಳೆಯರು ಯಾವುದಾದರೂ ಲಾಭದಾಯಕ ಚಟುವಟಿಕೆಯಲ್ಲಿ ಮುಂದುವರೆಯಲು ಸ್ವಂತ ಉದ್ಯೋಗವನ್ನು ಕೈಗೊಳ್ಳಲು ಯಾವುದಾದರೂ ಬ್ಯಾಂಕಿನಲ್ಲಿ ಗರಿಷ್ಠ 3ಲಕ್ಷದವರೆಗೆ ಸಾಲ ಸೌಲಭ್ಯವನ್ನು ನೀಡಲಾಗುವುದು. ವಿಧವೆಯರು, ಅಂಗವಿಕಲರು ಹಾಗೂ ಸಂಕಷ್ಟದಲ್ಲಿರುವವರಿಗೂ ಕೂಡ ಈ ಸೌಲಭ್ಯವನ್ನು ನೀಡಲಾಗುತ್ತಿದೆ.
ಉದ್ಯೋಗಿನಿ ಯೋಜನೆಯ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಕನಿಷ್ಠ ಶೇಕಡಾ 50ರಷ್ಟು ಅಥವಾ ಗರಿಷ್ಠ 1ವರೆ ಲಕ್ಷದಷ್ಟು ಸಹಾಯ ಧನ ನೀಡಲಾಗುವುದು. ಈ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಮಹಿಳೆಯರು 18 ವರ್ಷದಿಂದ 55ವರ್ಷ ವಯೋಮಿತಿ ಹೊಂದಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಇದ್ದಲ್ಲಿ ವರ್ಷದ ಆದಾಯ 1ಲಕ್ಷದ 50ಸಾವಿರ ರೂಪಾಯಿ ಆಗಿರಬೇಕು. ಸಾಮಾನ್ಯ ವರ್ಗದ ಮಹಿಳೆಯರಿಗೆ ಕುಟುಂಬದ ವಾರ್ಷಿಕ ಆದಾಯ 2ಲಕ್ಷ ರೂಪಾಯಿಗಳ ಒಳಗೆ ಇರಬೇಕು.
ಅರ್ಜಿ ಸಲ್ಲಿಸಲು ಮಹಿಳೆಯರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ರೇಷನ್ ಕಾರ್ಡ್, ಆಧಾರ್ ಕಾರ್ಡ್, ಶಾಲಾ ವರ್ಗಾವಣಾ ಪ್ರಮಾಣ ಪತ್ರ, 10ನೇ ತರಗತಿ ಮಾರ್ಕ್ಸ್ ಕಾರ್ಡ್, ಯೋಜನೆಯ ಪತ್ರ, ಚಾಲ್ತಿಯಲ್ಲಿ ಇರುವ ಬ್ಯಾಂಕ್ ಪಾಸ್ಬುಕ್ ಇವೆಲ್ಲ ದಾಖಲಾತಿಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗುತ್ತದೆ. ಇದಕ್ಕೆ ವಿಶೇಷವಾಗಿ ವಿಧವೆಯರು, ಸಂಕಷ್ಟದಲ್ಲಿರುವವರು ಅರ್ಜಿಯೊಂದಿಗೆ ಸಂಬಂಧಿಸಿದ ಪ್ರಮಾಣ ಪತ್ರವನ್ನು ಲಗತ್ತಿಸಬೇಕು. ಅರ್ಹ ಮಹಿಳೆಯರು ಆಯಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಛೇರಿಗೆ ಉಚಿತವಾಗಿ ನವೆಂಬರ್ 23ರಿಂದ ಅರ್ಜಿಯನ್ನು ಪಡೆದು ಅದೇ ಕಚೇರಿಗೆ ನವೆಂಬರ್ 30ರ ಒಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ 7619180160 ಈ ನಂಬರ್ ಗೆ ಕರೆ ಮಾಡಬಹುದಾಗಿದೆ.
ನಾವು ಪ್ರಕಟ ಮಾಡುವ ಯಾವುದೇ ಲೇಖನದಲ್ಲಿನ ಮಾಹಿತಿ ನಮ್ಮ ಸ್ವಂತದ್ದಾಗಿರುವುದಿಲ್ಲ. ಸಂಗ್ರಹಿತ ಮಾಹಿತಿಯನ್ನು ನಿಮ್ಮ ಮುಂದೆ ಇಡುತ್ತೇವೆ. ಇವುಗಳಿಂದ ಮೂಡುವ ಯಾವುದೇ ರೀತಿಯ ಭಿನ್ನಾಭಿಪ್ರಾಯ, ಗೊಂದಲಗಳಿಗೆ ನಾವು ಹೊಣೆಗಾರರಾಗಿರುವುದಿಲ್ಲ