ಬಡ ವಿದ್ಯಾರ್ಥಿಗಳು ಕಲಿಯುವುದೇ ಕಷ್ಟವಾಗುತ್ತದೆ ಅದಕ್ಕಾಗಿ ಸರ್ಕಾರ ಕೆಲವು ಯೋಜನೆಯನ್ನು ಜಾರಿಗೆ ತರುತ್ತದೆ. ಅವರಿಗೆ ಬೇಕಾದ ಕಂಪ್ಯೂಟರ್, ಲ್ಯಾಪ್ ಟಾಪ್ ಕೊಂಡುಕೊಳ್ಳಲು ಆಗುವುದಿಲ್ಲ. ಇದನ್ನು ಮನಗಂಡ ಮಹಾನಗರ ಪಾಲಿಕೆ ಬಡ ಮಕ್ಕಳಿಗೆ ಕಂಪ್ಯೂಟರ್, ಲ್ಯಾಪ್ ಟಾಪ್ ಪಡೆಯಲು ಸಹಾಯಧನ ನೀಡುತ್ತದೆ. ಆದರೆ ಅರ್ಜಿ ಸಲ್ಲಿಸಲು ಏನೇನು ಬೇಕು ಹಾಗೂ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂಬೆಲ್ಲಾ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಯೋಣ.

ಸರ್ಕಾರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತವಾಗಿ ಕಂಪ್ಯೂಟರ್ ಅಥವಾ ಲ್ಯಾಪ್ ಟಾಪ್ ನೀಡುತ್ತದೆ ಇದಕ್ಕಾಗಿ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಹಾನಗರ ಪಾಲಿಕೆ ವತಿಯಿಂದ 2020-2021 ರಿಂದ ಶೇಕಡಾ 2.57 ರ ಯೋಜನೆಯಡಿ ಇತರೆ ಹಿಂದುಳಿದ ಜನಾಂಗದವರ ಅನುಮೋದನೆಗೊಂಡ ಹಾಗೂ ಉಳಿದ ಮೊತ್ತದಲ್ಲಿ ಪರಿಶಿಷ್ಟ ಜಾತಿಯ ಎಂಬಿಬಿಎಸ್ ಅಥವಾ ಬಿಇ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಅಥವಾ ಲ್ಯಾಪ್ ಟಾಪ್ ಖರೀದಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಗರದ ಹಿಂದುಳಿದ ಜನಾಂಗದವವರ ಶ್ರೇಯೋಭಿವೃದ್ಧಿಗಾಗಿ ಶೇಕಡಾ 7.25 ರ ಯೋಜನೆಯಡಿ ಎಂಬಿಬಿಎಸ್ ಹಾಗೂ ಬಿಇ ಓದುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 50,000 ರೂಪಾಯಿ ಸಹಾಯಧನ ನೀಡಲಾಗುವುದು. ಇದರಿಂದ ಪರಿಶಿಷ್ಟ ಜಾತಿ ಜನಾಂಗದವರ ಅಭಿವೃದ್ಧಿಗಾಗಿ ಶೇಕಡಾ 24.10 ಯೋಜನೆಯಡಿ ಸಹಾಯಧನವನ್ನು ನೀಡಲಾಗುತ್ತದೆ ಇದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ಅರ್ಜಿ ಸಲ್ಲಿಸಲು ಕೆಲವು ಅರ್ಹತೆಗಳಿರಬೇಕು. ವಿದ್ಯಾರ್ಥಿಗಳು ನಗರದಲ್ಲಿ ವಾಸವಾಗಿರಬೇಕು, ಅರ್ಜಿಯೊಂದಿಗೆ ಪ್ರಸ್ತುತವಾದ ಜಾತಿ, ಆದಾಯ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಆಧಾರ ಕಾರ್ಡ್, ವಿದ್ಯಾರ್ಥಿಗಳು ಓದುತ್ತಿರುವ ಕಾಲೇಜಿನ ಗುರುತಿನ ಚೀಟಿ, ವಾಸಸ್ಥಳ ಪ್ರಮಾಣ ಪತ್ರ, ಇತ್ತೀಚಿನ ಪಾಸ್ ಪೋರ್ಟ್ ಸೈಜಿನ 3 ಫೋಟೋಗಳು, ಅಂಕಪಟ್ಟಿಗಳನ್ನು ಲಗತ್ತಿಸಿದಲ್ಲಿ ಮಾತ್ರ ಸದರಿ ಸೌಲಭ್ಯಗಳನ್ನು ಪಡೆಯಬಹುದು. ಅಪೂರ್ಣ ದಾಖಲಾತಿ ಒದಗಿಸಿದರೆ ಅಂತಹ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಭರ್ತಿ ಮಾಡಿದ ಅರ್ಜಿಯನ್ನು 2021 ರ ಜನವರಿ 19 ರ ಒಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿ ಬೇಕಾದಲ್ಲಿ ದೂರವಾಣಿ ಸಂಖ್ಯೆ 08392230293 ಹಾಗೂ ಮಹಾನಗರ ಪಾಲಿಕೆ ಬಳ್ಳಾರಿ ಕರೆಮಾಡಿ ತಿಳಿಯಬಹುದು. ಈ ಮಾಹಿತಿಯನ್ನು ತಪ್ಪದೇ ಎಲ್ಲರಿಗೂ ತಿಳಿಸಿ ಬಡ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯ ಮಾಡಿ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!