ಮಾಸ್ಕ ಧರಿಸದೇ ಸಿದ್ದರಾಮಯ್ಯ ಭೇಟಿ ಮಾಡಲು ಬಂದ ನಟಿ

0 1

ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ ಕಾಣಿಸಿಕೊಳ್ಳುವುದು ಮತ್ತು ಇದು ಹೊಟ್ಟೆಯ ಮೇಲೂ ಪರಿಣಾಮ ಬೀರುವುದು. ಕೊರೊನಾದಿಂದ ದೇಶದಾದ್ಯಂತ ಅನೇಕ ಸಾವು-ನೋವುಗಳು ಸಂಭವಿಸುತ್ತಿದೆ. ಇಂತಹ ಸಂದರ್ಭದಲ್ಲಿಯೂ ಜನರು ನಿರ್ಲಕ್ಷದಿಂದ ಓಡಾಡುತ್ತಿದ್ದಾರೆ. ಚಿತ್ರನಟಿ ಭಾವನಾ ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಲು ಮಾಸ್ಕ್ ಇಲ್ಲದೆ ಹೋಗಿದ್ದರು. ಹಾಗಿದ್ದಲಿ ನಾವು ಅದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ.

ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ. ವಿಶ್ವದಲ್ಲೇ ಮೊದಲ ಬಾರಿಗೆ 2019 ರ ಡಿಸೆಂಬರ್ ನಲ್ಲಿ ವ್ಯುಹಾನ್‌ನಲ್ಲಿ ಸೋಂಕು ಪತ್ತೆಯಾಗಿತ್ತು. ಕೆಲವು ಕೊರೊನಾ ವೈರಸ್ ಕೇವಲ ಪ್ರಾಣಿಗಳ ಮೇಲೆ ಮಾತ್ರ ಪರಿಣಾಮ ಬೀರುವುದು. ಇನ್ನು ಕೆಲವು ವೈರಸ್ ಗಳು ಮನುಷ್ಯರ ಮೇಲೆ ಕೂಡ ಪರಿಣಾಮ ಬೀರುವುದು. ಇದು ಸಾಮಾನ್ಯ ಶೀತದಂತಹ ಲಘು ಪ್ರಮಾಣದಿಂದ ಮಧ್ಯಮ ಪ್ರಮಾಣದ ಮೇಲ್ಭಾಗದ ಶ್ವಾಸಕೋಶದ ಸೋಂಕನ್ನು ಉಂಟು ಮಾಡುವುದು. ಆದರೆ ಇದು ಕೆಲವೊಂದು ಸಲ ತೀವ್ರ ರೀತಿಯ ನ್ಯುಮೋನಿಯಾ ಮತ್ತು ಬ್ರಾಂಕೈಟಿಸ್ ಉಂಟು ಮಾಡುವುದು. ಮನುಷ್ಯರನ್ನು ಕಾಡುವಂತಹ ಕೊರೊನಾ ವೈರಸ್ ನಲ್ಲಿ ಹಲವು ವಿಧಗಳು ಇವೆ.

ಇದರಲ್ಲಿ ಮೆರ್ಸ್ ಮತ್ತು ಸಾರ್ಸ್ ವೈರಸ್ ಸೇರಿದೆ. ಕೊರೊನಾ ವೈರಸ್ ಯಾವ ರೀತಿಯದ್ದು ಮತ್ತು ಸೋಂಕು ಎಷ್ಟು ಗಂಭೀರವಾಗಿದೆ ಎನ್ನುವುದರ ಮೇಲೆ ಇದರ ಲಕ್ಷಣವು ಅವಲಂಬಿಸಿದೆ. ಕೋವಿಡ್‌-19 ವೈರಸ್‌ ಸಾಂಕ್ರಾಮಿಕ ರೋಗ. ವ್ಯಕ್ತಿಯಿಂದ ವ್ಯಕ್ತಿಗೆ ಹರಡುತ್ತದೆ. ಸೋಂಕಿತ ವ್ಯಕ್ತಿ ಸೀನಿದಾಗ ಅಥವಾ ಕೆಮ್ಮಿದ ವೇಳೆ ಮತ್ತೊಬ್ಬ ವ್ಯಕ್ತಿಯ ಮೂಗಿನ ರಂಧ್ರಗಳು, ಬಾಯಿಯ ಮೂಲಕ ವೈರಾಣು ಹರಡುತ್ತದೆ. ಅಲ್ಲದೆ ಸೀನಿದಾಗ ಹೊರಬರುವ ವೈರಾಣುಗಳು ವಸ್ತು ಇತ್ಯಾದಿಗಳ ಮೇಲ್ಮೈನಲ್ಲಿ ಜಾಗಮಾಡಿಕೊಳ್ಳುತವೆ. ಆರೋಗ್ಯವಂತ ವ್ಯಕ್ತಿ ಇದೇ ಮೇಲ್ಮೈನನ್ನು ಮುಟ್ಟಿದಾಗ ಆತನ ಕೈಗಳಲ್ಲಿ ಕೋವಿಡ್‌-19 ವೈರಾಣು ಸೇರಿಕೊಳ್ಳುತ್ತದೆ.

ಕೈಗಳಿಂದ ಮೂಗು, ಬಾಯಿ, ಕಣ್ಣುಗಳ ಮೂಲಕ ದೇಹ ಸೇರಿ ಅನಾರೋಗ್ಯ ಉಂಟು ಮಾಡುತ್ತದೆ. ಕೋವಿಡ್‌ -19 ಸೋಂಕಿತರಾಗಿದ್ದಲ್ಲಿ ಅಥವಾ ನೀವು ಸೋಂಕಿತರ ಆರೈಕೆ ಆಸುಪಾಸಿನಲ್ಲಿ ಓಡಾಡುವ ಸನ್ನಿವೇಶಗಳಿದ್ದಲ್ಲಿ ಮಾಸ್ಕ್‌ ಧರಿಸಿ ಎಂಬುದಾಗಿ ವಿಶ್ವ ಆರೋಗ್ಯ ಸಂಸ್ಥೆ ಸಲಹೆ ನೀಡುತ್ತದೆ. ಹಾಗೆಯೇ ಹೊರಗಡೆ ಹೋಗುವಾಗ ಮಾಸ್ಕನ್ನು ಕಡ್ಡಾಯವಾಗಿ ಧರಿಸಿ ಹೋಗಬೇಕು. ಕಾರಣ ಮಾಸ್ಕ್ ಧರಿಸದೆ ಇದ್ದ ಪಕ್ಷದಲ್ಲಿ ಗಾಳಿಯಲ್ಲಿ ಇರುವ ವೈರಾಣುಗಳು ದೇಹವನ್ನು ಸುಲಭವಾಗಿ ಸೇರಿಕೊಳ್ಳುತ್ತವೆ. ಆದರೆ ಭಾವನಾ ಅವರು ಕಾಂಗ್ರೆಸ್ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಹೋದ ಸಂದರ್ಭದಲ್ಲಿ ಮಾಸ್ಕ್ ಅನ್ನು ಧರಿಸಿರಲಿಲ್ಲ. ಹಾಗೆಯೇ ಹೋಗಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತನಾಡಿ ಬಂದಿದ್ದಾರೆ.

Leave A Reply

Your email address will not be published.