ಇತ್ತೀಚೆಗಷ್ಟೇ 39 ಕೋಟಿ ಮೌಲ್ಯದ ಮೂರು ಅಂತಸ್ತಿನ ಅಪಾರ್ಟ್ ಮೆಂಟ್ ಖರೀದಿಸಿ ಭಾರೀ ಸುದ್ದಿಯಾಗಿದ್ದ ನಟಿ ಜಾಹ್ನವಿ ಕಪೂರ್ ಇದೀಗ ಬೆಲ್ಲಿ ಡ್ಯಾನ್ಸ್ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ದಡಕ್ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ನಟಿ ಜಾಹ್ನವಿ ಕಪೂರ್ ನಟನೆಗೆ ಸೈ ಎನಿಸಿಕೊಂಡಿದ್ದಾರೆ.

ಇದೀಗ ಬೆಲ್ಲಿ ಡ್ಯಾನ್ಸ್ ಮೂಲಕ ಡ್ಯಾನ್ಸ್ ನಲ್ಲೂ ಮೋಡಿ ಮಾಡಿದ್ದಾರೆ. ಈಗಾಗಲೇ ನಟನೆಯಲ್ಲಿ ಸಾಕಷ್ಟು ಹೆಸರು ಮಾಡಿರುವ ಜಾಹ್ನವಿ ಇದೀಗ ಬೆಲ್ಲಿ ಡ್ಯಾನ್ಸ್ ಮಾಡಿರುವ ಮೂಲಕ ಸುದ್ದಿಯಾಗಿದ್ದಾರೆ. ನಟಿ ಕರೀನಾ ಕಪೂರ್ ಅಭಿನಯದ ಅಶೋಕ ಸಿನಿಮಾದ ಸನ್ ಸನನ್ ಹಾಡಿಗೆ ಬೆಲ್ಲಿ ಡ್ಯಾನ್ಸ್ ಮಾಡಿದ್ದು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದ ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. 

ಬಿಳಿ ಬಣ್ಣದ ಪೈಜಾಮಾ ಹಾಗೂ ಕ್ರಾಪ್ ಟಾಪ್ ಧರಿಸಿ ಜಾಹ್ನವಿ ಅದ್ಭುತವಾಗಿ ಡ್ಯಾನ್ಸ್ ಮಾಡಿದ್ದಾರೆ. ಜಾಹ್ನವಿ ಈ ಡ್ಯಾನ್ಸ್ ಗೆ ಸಾಕಷ್ಟು ಕಾಮೆಂಟ್ ಗಳು ಬರುತ್ತಿದ್ದು, ಅಭಿಮಾನಿಗಳು ಫಿದಾ ಆಗಿದ್ದಾರೆ. ಜಾಹ್ನವಿ ತಾಯಿ ಶ್ರೀದೇವಿ ಅವರು ಅಧ್ಬುತ ನೃತ್ಯಗಾರ್ತಿ ಎಂಬ ವಿಚಾರ ಎಲ್ಲರಿಗೂ ತಿಳೀದಿದೆ.

ಇದೀಗ ಮಗಳು ಕೂಡ ತಾಯಿಯ ನೃತ್ಯ ಕೌಶಲ್ಯಗಳನ್ನು ಬಳುವಳಿಯಾಗಿ ಪಡೆದ ರೀತಿ ಜಾಹ್ನವಿ ನೃತ್ಯ ಮಾಡಿ ಸೈ ಎನಿಸಿದ್ದಾರೆ. 80-90 ರ ದಶಕದಲ್ಲಿ ಯುವಕರ ನಿದ್ದೆಗೆಡಿಸಿದ ಬಾಲಿವುಡ್ ತಾರೆ ಶ್ರೀದೇವಿ ಅವರಾಗಳು ಜಾಹ್ನವಿ ಕಪೂರ್ ಕೂಡಾ ತನ್ನ ತಾಯಿಯ ಹಾದಿ ಹಿಡಿದಿದ್ದು ಬೆಲ್ಲಿ ಡ್ಯಾನ್ಸ್ ಮೂಲಕ ಅಭಿಮಾನಿಗಳನ್ನು ಹುಚ್ಚೆಬ್ಬಿಸಿದ್ದಾರೆ. ನಟಿಯ ಮಾದಕ ಡ್ಯಾನ್ಸ್ ನೋಡಿದ ಅಭಿಮಾನಿಗಳು ಫಿದಾ ಆಗಿದ್ದು, ಸದ್ಯ ವಿಡಿಯೋ ವೈರಲ್ ಆಗಿದೆ. 

Leave a Reply

Your email address will not be published. Required fields are marked *