ನಟಿ ಜಯಂತಿ ಸಾ ವಿನ ಕೊನೆಯಲ್ಲಿ ಏನ್ ಹೇಳಿದ್ರು ಗೊತ್ತೆ, ನಿಜಕ್ಕೂ ಕಣ್ಣೀರು ಬರುತ್ತೆ

0 10

ಅಭಿಮಾನಿಗಳಿಂದ ಪ್ರೀತಿಯಿಂದ ‘ಅಭಿನಯ ಶಾರದೆ’ ಎಂದು ಕರೆಸಿಕೊಳ್ಳುತ್ತಿದ್ದ ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಯಂತಿ ನಿಧನರಾಗಿದ್ದಾರೆ. 76 ವರ್ಷ ವಯಸ್ಸಿನ ಜಯಂತಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಸೋಮವಾರ ನಸುಕಿನ ಜಾವ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ವರ್ಷಗಳಿಂದ ಅಸ್ತಮಾ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಹಿರಿಯ ನಟಿ ಕಳೆದ ವರ್ಷ ಕೋವಿಡ್-19 ಸಮಯದಲ್ಲಿ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ 40 ದಿನಗಳ ಕಾಲ ಇದ್ದು ಚೇತರಿಸಿಕೊಂಡು ಮನೆಗೆ ಹಿಂತಿರುಗಿದ್ದರು. ಆದರೆ ಸೋಮವಾರ ವಯೋಸಹಜ ಕಾಯಿಲೆಗೆ ತುತ್ತಾಗಿ ಕೊನೆಯುಸಿರೆಳೆದಿದ್ದಾರೆ.

1950ರಲ್ಲಿ ಬಳ್ಳಾರಿಯಲ್ಲಿ ಜನಿಸಿದ್ದ ಜಯಂತಿ ಅವರ ಮೂಲ ಹೆಸರು ಕಮಲಾ ಕುಮಾರಿ. ಚಿತ್ರರಂಗಕ್ಕೆ ಬಂದ ನಂತರ ಜಯಂತಿಯಾದರು. ತಂದೆ ಬಾಲಸುಬ್ರಹ್ಮಣ್ಯಂ ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರೆ, ತಾಯಿ ಸಂತಾನಲಕ್ಷ್ಮಿ ಗೃಹಿಣಿಯಾಗಿದ್ದರು. ಜಯಂತಿ ಅವರು ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದು ವೈ ಆರ್ ಪುಟ್ಟಸ್ವಾಮಿಯವರ ‘ಜೇನುಗೂಡು’ ಚಿತ್ರದ ಮೂಲಕ. ಅಲ್ಲಿಂದಲೇ ಕಮಲಾ ಕುಮಾರಿ ಜಯಂತಿಯಾಗಿದ್ದು.

ಕನ್ನಡ ಸೇರಿದಂತೆ ದಕ್ಷಿಣ ಭಾರತ ಚಿತ್ರರಂಗದಲ್ಲಿ ನಟಿ ಜಯಂತಿಯವರ ಹೆಸರು ಚಿರಪರಿಚಿತ. ಕನ್ನಡದಲ್ಲಿಯೇ ನುರಾತೊಂಭತ್ತು ಚಿತ್ರಗಳಲ್ಲಿ ಅಭಿನಯಿಸಿದ್ದ ಜಯಂತಿಯವರು ತೆಲುಗು, ತಮಿಳು, ಮಲಯಾಳಂ, ಹಿಂದಿ ಮತ್ತು ಮರಾಠಿ ಸೇರಿದಂತೆ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡದ ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಜೊತೆ 45 ಚಿತ್ರಗಳಲ್ಲಿ ನಟಿಸಿದ ಹೆಗ್ಗಳಿಕೆ ಜಯಂತಿಯವರದ್ದು. ದಕ್ಷಿಣ ಭಾರತದ ಚಿತ್ರರಂಗದ ದಂತಕಥೆಗಳಾದ ಎಂಜಿಆರ್, ಎನ್ ಟಿಆರ್ ಅವರೊಂದಿಗೆ ಸಹ ನಟಿಸಿದ್ದರು.

ಚಿತ್ರರಂಗದಲ್ಲಿ ಬಹುಬೇಡಿಕೆಯಲ್ಲಿದ್ದಾಗಲೇ ಪುಟ್ಟಣ್ಣ ಕಣಗಾಲ್ ಅವರ ನಾಗರಹಾವು ಚಿತ್ರದ ಒಂದೇ ಒಂದು ಹಾಡಿನಲ್ಲಿ ಕಾಣಿಸಿಕೊಂಡು ಕನ್ನಡ ಚಿತ್ರರಂಗದಲ್ಲಿ ಇತಿಹಾಸ ಸೃಷ್ಟಿಸಿದರು. ಒನಕೆ ಓಬವ್ವನ ಹಾಡಿನಲ್ಲಿ ಜಯಂತಿಯವರ ಅಭಿನಯ ಇಂದಿಗೂ ಜನಪ್ರಿಯ. ಕನ್ನಡ ಚಿತ್ರರಂಗದಲ್ಲೆ ಮೊದಲ ಬಾರಿಗೆ ಬಿಕಿನಿ ತೊಟ್ಟು ಸುದ್ದಿಯಾಗಿದ್ದ ನಟಿ ಜಯಂತಿಯವರು ತಾವು ನಿರ್ವಹಿಸುವ ಪಾತ್ರಕ್ಕೆ ನ್ಯಾಯ ಒದಗಿಸುತ್ತಿದ್ದರು, ಪಾತ್ರ ಬೇಡುವ ರೀತಿಯಲ್ಲಿ ಅಭಿನಯಿಸುತ್ತಿದ್ದರು. ಕನ್ನಡದಲ್ಲಿ ಡಾ ರಾಜ್ ಕುಮಾರ್, ವಿಷ್ಣುವರ್ಧನ್, ಉದಯ್ ಕುಮಾರ್, ಕಲ್ಯಾಣ್ ಕುಮಾರ್, ಶ್ರೀನಾಥ್, ಅನಂತ್ ನಾಗ್ ಮೊದಲಾದ ಚಿತ್ರಗಳಲ್ಲಿ ನಟಿಸಿದ್ದರು.

ನಟಿ ಜಯಂತಿ, 6 ಬಾರಿ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದರು. 1960 ರಿಂದ 1980ರ ದಶಕದವರೆಗೂ ಚಿತ್ರರಂಗದಲ್ಲಿ ಬೇಡಿಕೆ ಉಳಿಸಿಕೊಂಡಿದ್ದರು. ಎಡಕಲ್ಲು ಗುಡ್ಡದ ಮೇಲೆ, ಮನಸ್ಸಿನಂತೆ ಮಾಂಗಲ್ಯ, ಧರ್ಮ ದಾರಿ ತಪ್ಪಿತ್ತು, ಮಸಣದ ಹೂವು, ಆನಂದ್, ಟುವಿ ಟುವಿ ಚಿತ್ರಗಳಿಗೆ ಜಯಂತಿ ಅವರು ರಾಜ್ಯ ಪ್ರಶಸ್ತಿ ಪಡೆದಿದ್ದರು, ‘ಮಿಸ್ ಲೀಲಾವತಿ’ ಚಿತ್ರದ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿಯನ್ನೂ ಸಹ ಮುಡಿಗೇರಿಸಿಕೊಂಡಿದ್ದರು.

ಇಷ್ಟೊಂದು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದ ಜಯಂತಿ ಅವರು ತಾವು ಆಸ್ಪತ್ರೆ ಸೇರಿದಾಗ ಅವರು ಸಾಯುವ ಕೊನೆಯ ಘಳಿಗೆಯಲ್ಲಿ ಆಡಿದ ಕೆಲವು ಮಾತುಗಳ ವಿಡಿಯೋ ಒಂದು ಈಗ ಎಲ್ಲಾ ಕಡೆ ಹರಿದಾಡುತ್ತಿದ್ದು, ಜಯಂತಿ ಅವರು ಆ ವಿಡಿಯೋದಲ್ಲಿ ಎನು ಹೇಳಿದ್ದಾರೆ ಎನ್ನುವುದನ್ನು ನೋಡುವುದಾದರೆ, “ಮೊದಲು ತನ್ನ ಅಭಿಮಾನಿಗಳಿಗೆ ಕೈ ಮುಗಿದು ನಿಮ್ಮ ಜಯಂತಿಯ ವಂದನೆಗಳು ಎಂದು ತಿಳಿಸುತ್ತಾರೆ. ತಾನು ಆಸ್ಪತ್ರೆ ಸೇರಿದಾಗ ಯಾವ ಸ್ಥಿತಿಯಲ್ಲಿ ಇದ್ದೇ, ಹಾಗೂ ಈಗ ಹೇಗೆ ಆಗಿದ್ದೀನೀ ತಾನು ಇವತ್ತು ಹೇಗಿರುವುದಕ್ಕೆ ಡಾಕ್ಟರ್ ಸತೀಶ್ ಮತ್ತವರ ತಂಡ ಕಾರಣ ಅವರು ತನ್ನನ್ನು ಬಹಳ ಚೆನ್ನಾಗಿ ನೋಡಿಕೊಂಡಿದ್ದಾರೆ.

ಈ ರೀತಿ ಕುಳಿತು ಇಷ್ಟಾದರೂ ಮಾತನಾಡುವ ಭಾಗ್ಯ ಕಲ್ಪಿಸಿ ಕೊಟ್ಟಿದ್ದಾರೆ. ಹಾಗೂ ತನ್ನ ಅಭಿಮಾನಿಗಳು ಎಲ್ಲೆಲ್ಲಿಂದಲೋ ತನ್ನ ಆರೋಗ್ಯದ ಸಲುವಾಗಿ ಪ್ರಾರ್ಥನೆ, ಪೂಜೆಗಳನ್ನು ಮಾಡಿ ಅಭಿಮಾನಿಗಳು ಆಶೀರ್ವಾದ ಮಾಡುತ್ತಿದ್ದಾರೆ ಈ ಮೂಲಕ ದೇವರ ದೇವರ ಆಶೀರ್ವಾದ ಇದೆ. ತಾನು ಸಂಪೂರ್ಣವಾಗಿ ಹುಷಾರಾಗಿ ಮನೆಗೆ ಹೋದಮೇಲೆ ಇನ್ನೊಮ್ಮೆ ಎಲ್ಲರೂ ಭೇಟಿ ಆಗೋಣ. ನಿಮ್ಮೆಲ್ಲರ ಹಾರೈಕೆ ಪ್ರೀತಿ ಸದಾ ನಿಮ್ಮ ಈ ಜಯಂತಿ ಮೇಲೆ ಇರಲಿ” ಎಂದು ಭಾವುಕರಾಗಿ ನುಡಿದಿದ್ದರು. ಈ ವಿಡಿಯೋ ಈಗ ಸಾಕಷ್ಟು ವೈರಲ್ ಆಗುತ್ತಿದ್ದು ನಾವೂ ಸಹ ಎಲ್ಲಾ ಹಿರಿಯ ನಟಿ ಜಯಂತಿ ಅವರ ಆತ್ಮಕ್ಕೆ ಶಾಂತಿ, ಸದ್ಗತಿ ದೊರೆಯಲಿ ಎಂದು ಪ್ರಾರ್ಥಿಸೋಣ.

ಪ್ರಖ್ಯಾತ ಹಿರಿಯ ಕಲಾವಿದೆ, ಅಭಿನಯ ಶಾರದೆ ಜಯಂತಿ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ಅದೇ ರೀತಿ ಸರ್ಕಾರದ ಸಚಿವರುಗಳು, ಚಿತ್ರರಂಗದ ಗಣ್ಯರು, ಕಲಾವಿದರು ಹಿರಿಯ ನಟಿಯನ್ನು ಸ್ಮರಿಸಿಕೊಂಡು ಸಂತಾಪ ಸೂಚಿಸಿದ್ದಾರೆ. ನಟಿ ಜಯಂತಿಯವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಇರಿಸಲು ಅಂತಿಮ ಸಿದ್ದತೆ ಮಾಡಿಕೊಂಡು ಅಭಿಮಾನಿಗಳಿಗೆ ಹಾಗೂ ಕಲಾವಿದರಿಗೆ ಅಂತಿಮ ದರ್ಶನ ಪಡೆಯಲು ಅವಕಾಶ ಮಾಡಿಕೊಟ್ಟಿದ್ದರು. ಸೋಮವಾರ ಸಂಜೆಯ ವೇಳೆಗೆ ಜಯಂತಿ ಅವರ ಅಂತಿಮ ಸಂಸ್ಕಾರ ಮಾಡಿ ಮುಗಿಸಲಾಗಿತ್ತು.

ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಂತ್ರಿಕ್ ರಾಘವೇಂದ್ರ ಭಟ್ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಮತ್ತು ನಿಮ್ಮ ಗುಪ್ತ ಸಮಸ್ಯೆಗಳಿಗೆ ಹಾಗೂ ಮನ ಇಚ್ಛಾಕಾರ್ಯ ನೆರವೇರಿಸಲು ಮತ್ತು ಸುಲಭ ಪರಿಹಾರಕ್ಕಾಗಿ ಇಂದೆ ಕರೆ ಮಾಡಿ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ತೊಂದರೆ, ವಿವಾಹದಲ್ಲಿ ತೊಂದರೆ ಸ್ತ್ರೀ-ಪುರುಷ ಪ್ರೇಮ ವಿಚಾರ, ಇಷ್ಟಪಟ್ಟವರು ನಿಮ್ಮಂತೆ ಆಗಲು ಹಣಕಾಸಿನ ತೊಂದರೆ, ಆರೋಗ್ಯ ಸಮಸ್ಯೆ ಉದ್ಯೋಗ, ವ್ಯವಹಾರದಲ್ಲಿ ತೊಂದರೆ, ಅತ್ತೆಸೊಸೆ ತೊಂದರೆ ಡೈವರ್ಸ್ ಪ್ರಾಬ್ಲಮ್ ಮಕ್ಕಳು ನಿಮ್ಮ ಮಾತು ಕೇಳಲು ಶತ್ರು ಬಾಧೆ, ಮಾಟಮಂತ್ರ ತಡೆ ಇನ್ನು ನಿಮ್ಮ ಜೀವನದ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶ್ರೀ ಅಂಬಾ ಭವಾನಿ ಜ್ಯೋತಿಷ್ಯಾಲಯ ಪಂಡಿತ್ ರಾಘವೇಂದ್ರ ಭಟ್ ಮೊಬೈಲ್ ನಂಬರ್ 9448001466

Leave A Reply

Your email address will not be published.