ನಟ ರವಿಚಂದ್ರನ್ ಅವರ ಕನಸಿನ ಮನೆ ಹೇಗಿದೆ ಮೊದಲ ಬಾರಿಗೆ ನೋಡಿ

0 5

ವೀರಾಸ್ವಾಮಿ ರವಿಚಂದ್ರನ್ ಕನ್ನಡ ಚಿತ್ರರಂಗದಲ್ಲಿ ವಿ.ರವಿಚಂದ್ರನ್ ಎನ್ನುವ ಹೆಸರಿನಲ್ಲಿ ಪ್ರಸಿದ್ಧರು. ಕನ್ನಡ ಚಿತ್ರರಂಗಕ್ಕೆ ಶ್ರೀಮಂತಿಕೆ ಮತ್ತು ಬೆಳ್ಳಿಪರದೆಗೆ ಹೊಸರಂಗು ತಂದ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ. ಅನೇಕ ರೀಮೇಕ್ ಸಿನಿಮಾಗಳನ್ನು ಕನ್ನಡಕ್ಕೆ ತಂದರೂ ಮೂಲಸಿನಿಮಾದ ಛಾಯೆ ಇರದ ತಮ್ಮದೇ ಆದ ಶೈಲಿಯಲ್ಲಿ ಕನ್ನಡ ಸೊಗಡಿನ ಸೂಪರ್ ಹಿಟ್ ಗಳನ್ನು ನೀಡಿದ್ದಾರೆ.

ಕನ್ನಡ ಚಿತ್ರರಂಗದ ಕನಸುಗಾರ ರವಿಚಂದ್ರನ್ ಅವರು ಮೇ 30, 1961 ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ಇವರ ತಂದೆ ಎಮ್ ವೀರಸ್ವಾಮಿ ಅವರು ಕನ್ನಡದ ಖ್ಯಾತ ನಿರ್ಮಾಪಕರಾಗಿದ್ದರು. ಇನ್ನೂ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ನಾಯಕ ನಟರಾಗಿ ನಿರ್ದೇಶಕರಾಗಿ, ನಿರ್ಮಾಪಕರಾಗಿ ಕಥೆಗಾರರಾಗಿ, ಗೀತ ರಚನಾಕಾರರಾಗಿ ಸಂಗೀತ ನಿರ್ದೇಶಕರಾಗಿ ಸಂಕಲನ ಕಾರರಾಗಿ ಈಗೆ ಚಿತ್ರರಂಗದ ಎಲ್ಲಾ ವಿಭಾಗಗಳಲ್ಲಿಯೂ ಕೂಡ ತೊಡಗಿಸಿ ಕೊಂಡಿದ್ದು ಅದ್ಬುತ ಕ್ರಿಯಾಶೀಲ ಕಲಾವಿದರಾಗಿದ್ದಾರೆ.

ರವಿಚಂದ್ರನ್ ಒಬ್ಬ ಬಹುಮುಖ ಪ್ರತಿಭೆಯ ನಟ, ಚಿತ್ರ ನಿರ್ಮಾಣ, ನಿರ್ದೇಶನ, ಸಾಹಿತ್ಯ, ಸಂಗೀತ, ಸಂಕಲನ, ಸಂಭಾಷಣೆ ಮುಂತಾದ ಚಿತ್ರರಂಗದ ವಿವಿಧ ಪ್ರಕಾರಗಳಲ್ಲಿ ಕೆಲಸ ಮಾಡಿದ್ದಾರೆ. ತಾಂತ್ರಿಕತೆಯ ಪರಿಪೂರ್ಣ ಜ್ಞಾನ ಹೊಂದಿರುವ ಹಾಗೂ ತಂತ್ರಜ್ಞಾನದ ವಿನೂತನ ರೀತಿಯ ಪ್ರಯೋಗ ಇವರ ನಿರ್ದೇಶನದ ಚಿತ್ರಗಳಲ್ಲಿ ಕಾಣಬಹುದು. ಇವರ ಚಿತ್ರಗಳಲ್ಲಿ ಕಂಡುಬರುವ ಪ್ರಮುಖ ಅಂಶವೆಂದರೆ ಮನಸೂರೆ ಮಾಡುವ ಸಂಗೀತ, ರಂಗುರಂಗಿನ ಸೆಟ್ಟುಗಳು, ಪ್ರತಿಯೊಂದು ಫ಼್ರೇಮಿನಲ್ಲೂ ಹೊಸತನ. ಆಯಾ ಕಾಲಗಟ್ಟಕ್ಕೆ ಅಧುನಿಕ ತಂತ್ರಜ್ಞಾನವನ್ನು ಕನ್ನಡಕ್ಕೆ ತಂದ ಹಿರಿಮೆ ರವಿಚಂದ್ರನ್ ಅವರದು. ವಿದೇಶಗಳಲ್ಲಿ ಹಾಡುಗಳ ಚಿತ್ರಿಕರಣ ಕಾಲ ಪ್ರಾರಂಭವಾದ ಮೇಲೂ ರವಿಚಂದ್ರನ್ ಹಳ್ಳಿಸೊಗಡಿನ ರಾಮಾಚಾರಿ ಸಿನಿಮಾದ ಮೂಲಕ ಹೆಸರಾದರು.

ಪ್ರೇಮಲೋಕ, ರಣಧೀರ, ಶಾಂತಿ ಕ್ರಾಂತಿ, ಯುಗಪುರುಷ, ಯುದ್ದಕಾಂಡ, ರಾಮಾಚಾರಿ, ಅಂಜದ ಗಂಡು, ಸ್ವಾಭಿಮಾನ, ನಾನು ನನ್ನ ಹೆಂಡ್ತಿ, ಮನೆದೇವ್ರು, ಗೋಪಿಕೃಷ್ಣ, ಬಣ್ಣದಗೆಜ್ಜೆ, ಶ್ರೀರಾಮಚಂದ್ರ, ಆಣ್ಣಯ್ಯ, ಗಡಿಬಿಡಿ ಗಂಡ, ರಸಿಕ, ಕಲಾವಿದ, ಸಿಪಾಯಿ, ಪುಟ್ನಂಜ, ಕನಸುಗಾರ, ಮಾಂಗಲ್ಯಂ ತಂತುನಾನೇನ, ಪ್ರೀತ್ಸೋದ್ ತಪ್ಪಾ, ಯಾರೇ ನೀನು ಚೆಲುವೆ, ನಾನು ನನ್ನ ಹೆಂಡ್ತೀರು, ಓ ನನ್ನ ನಲ್ಲೆ, ಏಕಾಂಗಿ, ಮಲ್ಲ, ರಾಮಕೃಷ್ಣ, ಕೋದಂಡರಾಮ, ಅಹಂ ಪ್ರೇಮಾಸ್ಮಿ, ಸಾಹುಕಾರ, ಹಠವಾದಿ, ಹೂ, ಅಪೂರ್ವ, ಮುಂತಾದ ಜನಪ್ರಿಯ ಚಿತ್ರಗಳನ್ನು ಇವರು ಚಂದನವನಕ್ಕೆ ನೀಡಿದ್ದಾರೆ. ‘ರಾಮಾಚಾರಿ’ ಚಿತ್ರವು ಆಗಿನ ಕಾಲದಲ್ಲೇ ಕೆನಡಾದ ಓಂಟಾರಿಯೋ ಫಿಲ್ಮ್ ಫೆಸ್ಟ್ ನಲ್ಲಿ ಪ್ರದರ್ಶನಗೊಂಡಿದ್ದು ಗಮನಾರ್ಹ ಸಂಗತಿ.

ಇನ್ನು ವಿ ರವಿಚಂದ್ರನ್ ರವರಿಗೆ ತಮ್ಮ ಪತ್ನಿ ಹಾಗೂ ಮಕ್ಕಳೆಂದರೆ ಬಹಳ ಇಷ್ಟ. ಸಿನಿಮಾ ಬಿಟ್ಟರೆ ಹೆಚ್ಚಿನ ಸಮಯವನ್ನು ಮನೆಯವರ ಜೊತೆ ಕಳೆಯಲು ಇಷ್ಟಪಡುತ್ತಾರೆ. ಅದರಲ್ಲೂ ತಮ್ಮ ಮಗಳೆಂದರೆ ಅವರಿಗೆ ಎಲ್ಲಿಲ್ಲದ ಪ್ರೀತಿ. ಬಾಲ್ಯದಿಂದಲೂ ಕೂಡ ಮಗಳನ್ನು ಯುವರಾಣಿಯಂತೆ ಬೆಳೆಸಿದ್ದಾರೆ ಎಂದೇ ಹೇಳಬಹುದು.

ಕನ್ನಡ ಚಿತ್ರ ತಾಂತ್ರಿಕತೆಯಲ್ಲಿ ಮೊದಲಿಗೆ ಹೊಸ ಭಾಷ್ಯವನ್ನು ಬರೆದವರು ನಮ್ಮ ಕ್ರೇಜಿಸ್ಟಾರ್ ರವಿಚಂದ್ರನ್ ಅವರು. ಅವರು ತಮ್ಮ ಅಭಿರುಚಿಗೆ ತಕ್ಕಂತೆ ರಾಜಾಜಿ ನಗರದಲ್ಲಿ ಭವ್ಯ ಬಂಗಲೆಯನ್ನು ಕಟ್ಟಿಸಿದ್ದಾರೆ. ತಮ್ಮ ಕ್ರಿಯಾಶೀಲತೆಗೆ ತಕ್ಕಂತೆ ತಮ್ಮ ಮನೆಯ ಹೊರಾಂಗಣವನ್ನು ತುಂಬಾ ಅದ್ಬುತವಾಗಿ ನಿರ್ಮಿಸಿಕೊಂಡಿದ್ದಾರೆ. ತಮ್ಮ ಹೆಂಡತಿ ಮಕ್ಕಳೊಂದಿಗೆ ಸುಮಧುರ ಜೀವನ ನಡೆಸುತ್ತಿದ್ದಾರೆ.

Leave A Reply

Your email address will not be published.