ನಟ ಯಶ್ ಮನೆಯಲ್ಲಿ ದೀಪಾವಳಿ ಸಂಭ್ರಮ ಹೇಗಿತ್ತು ನೋಡಿ ವೈರಲ್ ವೀಡಿಯೊ

0 1

ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಚಾಪ್ಟರ್ 2 ಚಿತ್ರ ವಿಶ್ವದ್ಯಂತ ಚಿತ್ರಮಂದಿರಗಳಲ್ಲಿ 1250 ಕೋಟಿ ಅಧಿಕ ಕಲೆಕ್ಷನ್ ಮಾಡಿದ ನಂತರ ಅವರು ಕೇವಲ ಈಗ ಕನ್ನಡ ಚಿತ್ರರಂಗದ ನಾಯಕ ನಟನಾಗಿ ಉಳಿದಿಲ್ಲ ಬದಲಾಗಿ ಇಡೀ ಭಾರತೀಯ ಚಿತ್ರರಂಗದ ಸ್ಟಾರ್ ನಟ ಆಗಿಬಿಟ್ಟಿದ್ದಾರೆ. ಹೀಗಾಗಿ ಅವರು ತಮ್ಮ ಜೀವನದ ಕುರಿತಂತೆ ಯಾವುದೇ ವಿಚಾರಗಳನ್ನು ಶೇರ್ ಮಾಡಿಕೊಂಡರು ಕೂಡ ಅದು ನ್ಯಾಷನಲ್ ನ್ಯೂಸ್ ಆಗುತ್ತದೆ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ.

ಇನ್ನು ನಿಮಗೆಲ್ಲರಿಗೂ ತಿಳಿದಿರುವ ಹಾಗೆ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿಗಳು ಬಹುತೇಕ ನಮ್ಮ ಎಲ್ಲಾ ಹಬ್ಬಗಳನ್ನು ಕೂಡ ಕುಟುಂಬದ ಜೊತೆಯಾಗಿ ಸಂತೋಷದಿಂದ ಆಚರಿಸಿಕೊಂಡು ಅದರ ಕುರಿತಂತೆ ಫೋಟೋ ಹಾಗೂ ವಿಡಿಯೋಗಳನ್ನು ಕೂಡ ತಮ್ಮ ಸೋಶಿಯಲ್ ಮೀಡಿಯಾ ಹ್ಯಾಂಡಲ್ಗಳಲ್ಲಿ ಆಗಾಗ ಪೋಸ್ಟ್ ಮಾಡುತ್ತಲೇ ಇರುತ್ತಾರೆ. ಈ ಮೂಲಕ ಅವರ ಸಂತೋಷವನ್ನು ನೋಡಿ ಅಭಿಮಾನಿಗಳು ಕೂಡ ಸಂತೋಷಪಡುತ್ತಾರೆ.

ಈಗ ನಾವು ಮಾತನಾಡಲು ಹೊರಟಿರುವುದು ಇಡೀ ಭಾರತವೇ ಸಂತೋಷದಿಂದ ಸಂಭ್ರಮದಿಂದ ಆಚರಿಸುವಂತಹ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಕುರಿತಂತೆ. ಇತ್ತೀಚಿಗಷ್ಟೇ ದೀಪಾವಳಿ ಹಬ್ಬ ಮುಗಿದಿದ್ದು ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿಗಳು ತಮ್ಮ ಮಗ ಹಾಗೂ ಮಗಳ ಜೊತೆಗೆ ದೀಪಾವಳಿ ಹಬ್ಬವನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಿರುವ ಫೋಟೋ ಹಾಗೂ ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡಮಟ್ಟದಲ್ಲಿ ವೈರಲ್ ಆಗಿದೆ.

ಅತ್ಯಂತ ಶಾಸ್ತ್ರೋಕ್ತವಾಗಿ ಹಾಗೂ ಸಂಪ್ರದಾಯ ಬದ್ಧವಾಗಿ ರಾಕಿಂಗ್ ದಂಪತಿಗಳು ದೀಪಾವಳಿ ಹಬ್ಬವನ್ನು ಆಚರಿಸಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಮೆಚ್ಚುಗೆ ವ್ಯಕ್ತವಾಗುತ್ತಿದ್ದು ನೀವು ಕೂಡ ಅವರು ಸಂತೋಷದಿಂದ ದೀಪಾವಳಿ ಹಬ್ಬವನ್ನು ಆಚರಿಸಿರುವ ವಿಡಿಯೋವನ್ನು ನೋಡಬಹುದಾಗಿದೆ. ಈ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ತಪ್ಪದೆ ಕಾಮೆಂಟ್ ಬಾಕ್ಸ್ ನಲ್ಲಿ ಕಾಮೆಂಟ್ ಮಾಡುವ ಮೂಲಕ ಹಂಚಿಕೊಳ್ಳಿ.

Leave A Reply

Your email address will not be published.