Akrama Sakrama 2023: ಭೂಮಿಯ ಸಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊಸ ಕಾನೂನನ್ನು ಜಾರಿಗೆ ತಂದಿದೆ. ಈ ಹೊಸ ಕಾನೂನಿನಲ್ಲಿ ಯಾವೆಲ್ಲಾ ಅಂಶಗಳಿವೆ ಹಾಗೂ ರೈತರು ಸಾಗುವಳಿ ಪತ್ರ ಪಡೆಯಲು ಏನು ಮಾಡಬೇಕು ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ

ರಾಜ್ಯದ ಕಂದಾಯ ಇಲಾಖೆಯಿಂದ ಭಗರ್ ಹುಕುಂ (Bagar Hukum) ವ್ಯವಸ್ಥೆ ಜಾರಿಯಲ್ಲಿದ್ದು ಕೃಷಿ ಭೂಮಿಯ ಸಕ್ರಮಕ್ಕೆ ಫಾರಂ 57 ರಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ಈ ಅರ್ಜಿಯನ್ನು ಪರಿಶೀಲನೆ ಮಾಡಿ ಸಾಗುವಳಿ ಚೀಟಿಯನ್ನು ವಿತರಣೆ ಮಾಡಲು ರಾಜ್ಯ ಸರ್ಕಾರ ಈ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಇದರ ಬಗ್ಗೆ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪತ್ರಿಕಾ ಮಾಧ್ಯಮದೊಂದಿಗೆ ಸಂಪೂರ್ಣ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

15 ವರ್ಷದಿಂದ ಉಳುಮೆ ಮಾಡುತ್ತಿರುವವರಿಗೆ ಮಾತ್ರ ಸಕ್ರಮಕ್ಕೆ ಅವಕಾಶವಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಅರ್ಜಿಯನ್ನು ಪರಿಶೀಲನೆ ಮಾಡಿ ವಿಲೇವಾರಿ ಮಾಡಲು ಬದಲು ತಂತ್ರಜ್ಞಾನ ಬಳಕೆಗೆ ರಾಜ್ಯ ಸರ್ಕಾರ ಮುಂದಾಗಿದೆ. 1980 ರಲ್ಲಿ ಕೃಷಿ ಚಟುವಟಿಕೆಗೆ ರೈತರ ಬಳಿ ಜಮೀನು ಇರಲಿಲ್ಲ ಅಂತಹ ರೈತರಿಗೆ ಸರ್ಕಾರದಿಂದ 2 ಎಕರೆ ಜಮೀನನ್ನು ಮಂಜೂರು ಮಾಡುವ ಯೋಜನೆಯನ್ನು ಜಾರಿಗೆ ತಂದಿತ್ತು ಆದರೆ ಈ ಯೋಜನೆಯನ್ನು ಎಲ್ಲ ಭೂ ರಹಿತ ರೈತರಿಗೆ ತಲುಪಿಸಲು ಸಾಧ್ಯವಾಗಲಿಲ್ಲ.

ಹೀಗಾಗಿ ಭೂಮಿ ಇರದ ರೈತರು ತಮ್ಮ ಜೀವನ ನಡೆಸಲು ಸಿಕ್ಕ ಸಿಕ್ಕ ಜಮೀನಿನಲ್ಲಿ ಉಳುಮೆ ಮಾಡಲು ಪ್ರಾರಂಭಿಸಿದರು ಅವರು ಕೇವಲ ಭೂಮಿ ಉಳುಮೆ ಮಾಡಿದರು ಅದರ ಮೇಲೆ ಅವರಿಗೆ ಯಾವುದೆ ರೀತಿಯಲ್ಲಿ ಹಕ್ಕು ಇರಲಿಲ್ಲ ಹಾಗೂ ಹಕ್ಕು ಪತ್ರಗಳು ಇರಲಿಲ್ಲ. ಅಂತಹ ರೈತರಿಗೆ ಅವರು ಉಳುಮೆ ಮಾಡುತ್ತಿರುವ ಜಮೀನಿನ ಸಾಗುವಳಿ ಚೀಟಿ ಅಥವಾ ಹಕ್ಕು ಪತ್ರವನ್ನು ನೀಡಲು 1991 ರಲ್ಲಿ ರಾಜ್ಯಸರ್ಕಾರದಿಂದ ಕರ್ನಾಟಕ ಭೂ ಕಂದಾಯ ಕಾಯಿದೆ 1991 ರಲ್ಲಿ ನಮೂನೆ 50 ಹಾಗೂ 1999 ರಲ್ಲಿ ನಮೂನೆ 57 ರ ಈ ಮೂರು ಕಾಯಿದೆಗಳ ಅಡಿಯಲ್ಲಿ ರೈತರಿಂದ ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. ಇದೀಗ 15 ವರ್ಷಗಳಿಂದ ಭೂ ಉಳುಮೆ ಮಾಡುತ್ತಿರುವವರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಕೊಡಲಾಗಿದೆ.

ಮೊದಲು ನಮೂನೆ 50,53 ಮತ್ತು 57 ರಲ್ಲಿ ಸಕ್ರಮಕ್ಕೆ ಅರ್ಜಿ ಸಲ್ಲಿಸಿದವರ ಅರ್ಜಿಯನ್ನು ಭೌತಿಕವಾಗಿ ಪರಿಶೀಲಿಸಿ ಅದನ್ನು ವಿಲೇವಾರಿ ಮಾಡುವ ಕೆಲಸ ಮಾಡಲಾಗುತ್ತಿತ್ತು ಆದರೆ ಹೀಗೆ ಮಾಡುವುದರಿಂದ ಅರ್ಹರಲ್ಲದ ರೈತರಿಗೆ ಸಕ್ರಮ ಸಿಗುವ ಸಾಧ್ಯತೆ ಇರುವುದರಿಂದ ಇದೀಗ ಸಂಪೂರ್ಣ ಪ್ರಕ್ರಿಯೆಯನ್ನು ತಂತ್ರಜ್ಞಾನಗೊಳಿಸಿ ಸಾಗುವಳಿ ಚೀಟಿ ನೀಡಲು ಸರ್ಕಾರ ಮುಂದಾಗಿದೆ. ಸಾಗುವಳಿ ಚೀಟಿ ಪಡೆಯಲು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲನೆ ಮಾಡಿ ಸಾಗುವಳಿ ಚೀಟಿಯನ್ನು ವಿತರಣೆ ಮಾಡಲು ತಾಲೂಕು ಮಟ್ಟದಲ್ಲಿ ಸಮಿತಿಗಳನ್ನು ರಚನೆ ಮಾಡಲಾಗುತ್ತದೆ ಹಾಗೂ 6 ತಿಂಗಳಲ್ಲಿ ಎಲ್ಲಾ ಅರ್ಜಿಗಳು ವಿಲೇವಾರಿ ಆಗಲಿದೆ ಎಂದು ತಿಳಿದುಬಂದಿದೆ.

ಸಮಿತಿಗಳನ್ನು ರಚನೆ ಮಾಡಲು ಈಗಾಗಲೆ ಪ್ರಕ್ರಿಯೆ ಪ್ರಾರಂಭವಾಗಿದೆ, 50 ತಾಲ್ಲೂಕುಗಳಲ್ಲಿ ಈಗಾಗಲೆ ಸಮಿತಿ ರಚನೆ ಪ್ರಕ್ರಿಯೆ ಪೂರ್ಣಗೊಂಡಿದ್ದು ಆದಷ್ಟು ಬೇಗ ಆದೇಶ ಬರುತ್ತದೆ ಎಂದು ತಿಳಿಸಿದ್ದಾರೆ. ಉಳಿದ ತಾಲ್ಲೂಕುಗಳಲ್ಲಿ ಆದಷ್ಟು ಬೇಗ ಸಮಿತಿಗಳ ರಚನೆ ಆಗಲಿದೆ ಎಂದು ತಿಳಿದುಬಂದಿದೆ. ಈ ಮಾಹಿತಿಯನ್ನು ರೈತರಿಗೆ ತಪ್ಪದೆ ತಿಳಿಸಿ

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!