ಸರಕಾರಿ ಜಮೀನುಗಳಲ್ಲಿ ಹಲವು ವರ್ಷಗಳಿಂದ ಅನಧಿಕೃತವಾಗಿ ಸಾಗುವಳಿ ಮಾಡುತ್ತಿದ್ದು, ನಮೂನೆ- 50, ನಮೂನೆ- 57ರಡಿ ಸಕ್ರಮಕ್ಕೆ ಅರ್ಜಿ ಸಲ್ಲಿಸದವರಿಗೆ ಮತ್ತೊಂದು ಅವಕಾಶ ನೀಡಬೇಕು ಎಂಬ ಬೇಡಿಕೆಯಂತೆ ಇನ್ನೂ ಒಂದು ವರ್ಷ ಕಾಲಾವಕಾಶ ನೀಡಲು ಸರಕಾರ ಉದ್ದೇಶಿಸಿದೆ ಎಂದು ಕಂದಾಯ ಸಚಿವ ಅಶೋಕ್ ತಿಳಿಸಿದ್ದಾರೆ. ಅಕ್ರಮವಾಗಿ ಕಟ್ಟಿಕೊಂಡಿರುವ ಮನೆ ಸೇರಿದಂತೆ ಎಲ್ಲ ಕಟ್ಟಡಗಳನ್ನು ಸಕ್ರಮಗೊಳಿಸುವ ಹಕ್ಕುಪತ್ರ ಮತ್ತು ಪಹಣಿ ನೀಡುವಿಕೆಗೆ ಹೊಸ ಅರ್ಜಿ ಆಹ್ವಾನಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಕಂದಾಯ ಸಚಿವ ಆರ್.ಅಶೋಕ್, ಬಿಬಿಎಂಪೀ ಸೇರಿದಂತೆ ವಿವಿಧ ನಗರ ಪ್ರದೇಶಗಳಲ್ಲಿ ಕಂದಾಯ ನಿವೇಶನದಲ್ಲಿ ಕಟ್ಟಡ ನಿರ್ಮಾಣ, ನಕ್ಷೆ, ನಿಯಮ ಉಲ್ಲಂಘನೆ ಸೇರಿದಂತೆ ಅಕ್ರಮ ಕಟ್ಟಡ ನಿರ್ಮಾಣಗಳಿಗೆ ನಿಗದಿತ ದಂಡ ವಸೂಲಿ ಮಾಡಿ ಸಕ್ರಮಗೊಳಿಸಲು ಸರ್ಕಾರ ಅಕ್ರಮ ಸಕ್ರಮ ಯೋಜನೆ ಜಾರಿಗೆ ತಂದಿತ್ತು. ಇಂದು ಅಕ್ರಮವಾಗಿರುವ ಸರ್ಕಾರಿ ಮನೆ, ಜಮೀನು, ಸೈಟ್, ಇನಾಂ ಆಸ್ತಿ ಇದ್ದವರ ಹೆಸರಿಗೆ ಹಕ್ಕು ಪತ್ರ ನೀಡುವ ಸಲುವಾಗಿ ಹಕ್ಕು ಪತ್ರ ವಿತರಣೆ ಮಾಡಲಾಗುವುದು ಎಂದು ಹೇಳಿದರು. ಕಂದಾಯ ಭೂಮಿಯಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಕಲಂ 94ಸಿ ಹಾಗೂ 94ಸಿಸಿ ಅಡಿ ನೀಡಿದ ಹಕ್ಕುಪತ್ರಗಳ ನೋಂದಣಿಗೆ ಅಗತ್ಯ ಕ್ರಮಕ್ಕೆ ಸೂಚಿಸಲಾಗಿದೆ. ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದಾಗ ಲಕ್ಷಾಂತರ ಬಡವರಿಗೆ ಹಕ್ಕುಪತ್ರ ನೀಡಲಾಗಿದ್ದು, ಅವರು ಮನೆ ನಿರ್ಮಿಸಿಕೊಂಡಿದ್ದಾರೆ.
ಆದರೆ ಕಾವೇರಿ ತಂತ್ರಾಂಶದಲ್ಲಿ ‘ಹಕ್ಕುಪತ್ರ’ ಎಂಬ ಆಯ್ಕೆಗೆ ಅವಕಾಶವಿಲ್ಲದ ಕಾರಣ ನೋಂದಣಿಯಾಗದಿರುವುದು ಗಮನಕ್ಕೆ ಬಂದಿದೆ,” ಎಂದು ಹೇಳಿದರು. ಗೋಮಾಳ, ಇತರೆ ಭೂಮಿಗೆ ಸಂಬಂಧಿಸಿದ ಸಮಿತಿ ರಚನೆ ಬಗ್ಗೆ ಪ್ರತಿಕ್ರಿಯಿಸಿ,”ಈ ಹಿಂದಿನ ನಿಯಮ ಬದಲಿಸಿ, ಕಠಿಣ ನಿಯಮ ಜಾರಿಗೊಳಿಸಲಾಗುವುದು. ಸರಕಾರಿ ಜಮೀನು ಅರ್ಹರಿಗೆ ಸಿಗಬೇಕು. ಯಾವ ರೈತರು ಸಾಗುವಳಿ ಮಾಡುತ್ತಿದ್ದಾರೋ ಅದನ್ನು ಆ ರೈತರಿಗೇ ನೀಡಲಾಗುವುದು, ಎಂದು ತಿಳಿಸಿದರು. ‘ಮಠ-ಮಾನ್ಯಗಳು, ಸಂಸ್ಥೆ, ಟ್ರಸ್ಟ್ಗಳಿಗೆ ಭೂಮಿ ನೀಡುವಾಗ ಪರಾಮರ್ಶೆ ನಡೆಸಬೇಕು. ಟ್ರಸ್ಟ್ ನೋಂದಣಿಯಾಗಿ ಎಷ್ಟು ವರ್ಷಗಳಾಗಿರಬೇಕು,
ಅದರ ಕೆಲಸ ಕಾರ್ಯ, ಸಾಮಾಜಿಕ ಬದ್ಧತೆಯೊಂದಿಗೆ ಕಾರ್ಯ ನಿರ್ವಹಿಸುತ್ತಿದೆಯೇ ಎಂಬ ವಿಚಾರಗಳನ್ನು ಪರಿಶೀಲಿಸಿ ಭೂಮಿ ನೀಡಬೇಕಾಗುತ್ತದೆ,” ಎಂದು ಸ್ಪಷ್ಟನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ‘ಬಿ’ ಖಾತಾ ನಿವೇಶನಗಳಿಗೆ ‘ಎ’ ಖಾತಾ ದೊರೆಯಲಿದೆ. ಅಲ್ಲದೆ, ಬಿಬಿಎಂಪಿ ಸೇರಿದಂತೆ ಎಲ್ಲ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ರೆವಿನ್ಯೂ ನಿವೇಶಗಳಲ್ಲಿ ನಿರ್ಮಾಣ ಮಾಡಿರುವ ಕಟ್ಟಡಗಳಿಂದ ದಂಡ ಕಟ್ಟಿಸಿಕೊಂಡು ಸಕ್ರಮಗೊಳಿಸಿ ಖಾತಾ ನೋಂದಣಿ ನೀಡುವ ಕೆಲಸವಾಗಲಿದೆ. ಜತೆಗೆ ಆ ಪ್ರದೇಶಗಳಿಗೆ ರಸ್ತೆ, ಕುಡಿಯುವ ನೀರು ಸೇರಿದಂತೆ ಸರ್ಕಾರದಿಂದ ಎಲ್ಲ ರೀತಿಯ ಮೂಲಸೌಕರ್ಯ ಒದಗಿಸಬಹುದು.
ಅಂತಹ ನಿವೇಶನದಾರರಿಗೆ ಬ್ಯಾಂಕುಗಳಲ್ಲಿ ಉತ್ತಮ ಸಾಲಸೌಲಭ್ಯಗಳೂ ದೊರೆಯುವಂತಾಗಲಿದೆ. ಒಟ್ಟಿನಲ್ಲಿ ಇದರಿಂದ ದೊಡ್ಡ ಮಟ್ಟದಲ್ಲಿ ಜನರಿಗೆ ಇದು ಉಪಯೋಗವಾಗಲಿದೆ. ಸರ್ಕಾರಕ್ಕೂ ಇದರಿಂದ ದೊಡ್ಡ ಮೊತ್ತದ ಆದಾಯವೂ ಬರಲಿದೆ ಎಂದು ಆರ್.ಅಶೋಕ್ ವಿವರಿಸಿದರು.ನಕ್ಷೆ, ನಿಯಮ ಉಲ್ಲಂಘಿಸಿ ನಿರ್ಮಿಸಿರುವ ಕಟ್ಟಡಗಳಿಗೆ ಸಕ್ರಮ ಭಾಗ್ಯ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ನಗರ, ಹಳ್ಳಿಗಳಿಗೆ ಅನ್ವಯ. ರಾಜ್ಯ ಸರ್ಕಾರದಿಂದ ಈಗಾಗಲೇ ಈ ಬಗ್ಗೆ ಕಾಯ್ದೆ ಜಾರಿಯಾಗಿದೆ. ಆದರೆ, ಸುಪ್ರೀಂಕೋರ್ಟ್ನಲ್ಲಿ ಈ ಕಾಯ್ದೆಯನ್ನು ಪ್ರಶ್ನಿಸಲಾಗಿದೆ. ಕಾಯ್ದೆಗೆ ಕೋರ್ಟ್ನ ತಡೆ ತೆರವುಗೊಳಿಸಲು ಸರ್ಕಾರದಿಂದ ಯತ್ನ.
ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ
ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458. ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ ಶತ್ರುಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ) ಪೂರ್ವಜರ ಶಾಪ (ಪಿತೃ ದೋಷ) ರೋಗಗಳನ್ನು ಕೊನೆಗೊಳಿಸಿ ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.