ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಹ ಅಭ್ಯರ್ಥಿಗಳ ಆಯ್ಕೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಅಭ್ಯರ್ಥಿಗಳ ವಿದ್ಯಾರ್ಹತೆ, ವೇತನ, ಉದ್ಯೋಗ ಸ್ಥಳ ಈ ಎಲ್ಲಾ ಮಾಹಿತಿಗಳ ಕುರಿತು ವಿವರವಾಗಿ ನಾವು ಈ ಲೇಖನದಲ್ಲಿ ನೋಡೋಣ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವೀಡಿಯೋವನ್ನು ನೋಡಿ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನೇಮಕಾತಿ ಹುದ್ದೆಯ ಹೆಸರು ಅಂಗನವಾಡಿ ಕಾರ್ಯಕರ್ತೆಯರು ಅಂಗನವಾಡಿ ಸಹಾಯಕಿಯರು. ಇದರಲ್ಲಿ ಅಂಗನವಾಡಿ ಕಾರ್ಯಕರ್ತೆಯರ 44 ಹುದ್ದೆಗಳು ಖಾಲಿ ಇರುತ್ತವೆ , ಹಾಗೂ 154 ಹುದ್ದೆಗಳು ಅಂಗನವಾಡಿ ಸಹಾಯಕಿಯರ ಹುದ್ದೆಗಳಾಗಿರುತ್ತವೆ.
ಉದ್ಯೋಗ ಸ್ಥಳ ಉಡುಪಿ ಮತ್ತು ಕೋಲಾರ ಜಿಲ್ಲೆಗಳು ಆಗಿರುತ್ತವೆ. ಈ ಎರಡೂ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಯ ವಿದ್ಯಾರ್ಹತೆಯ ಅಂಗನವಾಡಿ ಕಾರ್ಯಕರ್ತೆಯರು ಹತ್ತನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಅಂಗನವಾಡಿ ಸಹಾಯಕಿಯರು ಕನಿಷ್ಠ ನಾಲ್ಕನೇ ತರಗತಿ ಉತ್ತೀರ್ಣರಾಗಿಬೇಕು ಹಾಗೂ ಗರಿಷ್ಠ ಒಂಭತ್ತನೇ ತರಗತಿಯಲ್ಲಿ ಪಾಸ್ ಆಗಿರಬೇಕು.
ಇನ್ನೂ ಅಭ್ಯರ್ಥಿಗಳ ವಯೋಮಿತಿ ನೋಡುವುದಾದರೆ ಕನಿಷ್ಠ ಹದಿನೆಂಟು ವರ್ಷ ಹಾಗೂ ಗರಿಷ್ಠ ಮೂವತ್ತೈದು ವರ್ಷ ವಯಸ್ಸು ಆಗಿರಬೇಕು ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಹತ್ತು ವರ್ಷ ವಯೋಮಿತಿಯ ಸಡಿಲಿಕೆ ಇರುತ್ತದೆ. ಆಯ್ಕೆಯ ವಿಧಾನ ಹೇಗೆ ಎಂದು ನೋಡುವುದಾದರೆ, ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟೂ ಅಂಕಗಳಿಗೆ ಅನುಸಾರವಾಗಿ ಕೃಢಿಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಪೇರಿಟ್ ಗೆ ಅನುಸಾರವಾಗಿ ಪರಿಶೀಲನೆ ನಡೆಸಿ ಹೆಚ್ಚು ಅಂಕ ಗಳಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಇನ್ನೂ ಮುಖ್ಯವಾದ ದಿನಾಂಕಗಳನ್ನು ನೋಡುವುದಾದರೆ, ಕೋಲಾರ ಜಿಲ್ಲೆಯಲ್ಲಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13/09/2021 ಆಗಿರುತ್ತದೆ ಹಾಗೂ ಉಡುಪಿ ಜಿಲ್ಲೆಯಲ್ಲಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20/09/2021 ಕೊನೆಯ ದಿನಾಂಕ ಆಗಿರುತ್ತದೆ.
ಇನ್ನು ಅರ್ಜಿ ಸಲ್ಲಿಸುವ ವಿಧಾನ ಹೇಗೆ ಎಂದು ನೋಡುವುದಾದರೆ, ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
WWW.anganawadirecruit.kar.nic.in ಈ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೀಡಬೇಕಾದ ದಾಖಲಾತಿಗಳು ಈ ರೀತಿಯಾಗಿ ಇರುತ್ತವೆ. ಜನನ ಪ್ರಮಾಣ ಪತ್ರ ಅಥವಾ ಜನ್ಮ ದಿನಾಕ ಇರುವ ಎಸೆಸೆಲ್ಸಿ ಅಂಕಪಟ್ಟಿ, ತಹಶೀಲ್ದಾರರು ಅಥವಾ ಉಪತಹಶೀಲ್ದಾರರಿಂದ ಪಡೆದ 3ವರ್ಷದ ವಾಸ ಸ್ಥಳದ ಧ್ರಡೀಕೃತ ಪತ್ರ , ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ ಹಾಗೂ ಇನ್ನಿತರೆ ದಾಖಲಾತಿಗಳು ಇದ್ದರೆ ಅದನ್ನೂ ಸಲ್ಲಿಸಬಹುದು. ಇತರೆ ಮಾಹಿತಿ :- ಈ ಹುದ್ದೆಗಳಿಗೆ ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಈ ವೀಡಿಯೋವನ್ನು ನೋಡಿ.
ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430