Ultimate magazine theme for WordPress.

ಅಂಗನವಾಡಿ ಟೀಚರ್ ಹಾಗೂ ಸಹಾಯಕಿಯರ ಹುದ್ದೆ ಕುರಿತು ಇಲ್ಲಿದೆ ಮಾಹಿತಿ

0 0

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಯೋಜನಾ ವ್ಯಾಪ್ತಿಯಲ್ಲಿನ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯ ಇರುವ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತು ಆಸಕ್ತ ಮಹಿಳಾ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು, ವಯೋಮಿತಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಈ ಎಲ್ಲದರ ಬಗ್ಗೆ ಈ ಲೇಖನದಲ್ಲಿ ನಾವು ಹೆಚ್ಚಿನ ಮಾಹಿತಿಯನ್ನು ನೋಡೋಣ.

ಅರ್ಜಿ ಸಲ್ಲಿಸಬೇಕಾದ ಹುದ್ದೆಗಳ ಹೆಸರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರು. ಒಟ್ಟೂ ಖಾಲಿ ಇರುವಂತಹ ಹುದ್ದೆಗಳ ಸಂಖ್ಯೆ 17. ಅದರಲ್ಲಿ ಅಂಗನವಾಡಿ ಕಾರ್ಯಕರ್ತೆಯರು 5 ಹಾಗೂ ಅಂಗನವಾಡಿ ಸಹಾಯಕಿಯರು 12 ಹುದ್ದೆಗಳು ಖಾಲಿ ಇರುತ್ತವೆ. ಉದ್ಯೋಗ ಸ್ಥಳ ಯಾದಗಿರಿ ಜಿಲ್ಲೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹೊರಡಿಸಿದ ಅಂಗನಾವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರು ಈ ಹುದ್ದೆಗೆ ಅಧಿಸೂಚನೆ ಹೊರಡಿಸಲಾಗಿದೆ ಅರ್ಜಿ ಸಲ್ಲಿಸಲು ಬಯಸುವ ಮಹಿಳಾ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ ಹದಿನೆಂಟು ವರ್ಷ ಹಾಗೂ ಗರಿಷ್ಠ 35 ವರ್ಷ ವಯಸ್ಸಾಗಿರಬೇಕು. ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 45 ವರ್ಷಕ್ಕೆ ನಿಗದಪಡಿಸಲಾಗಿದೆ.

ಇನ್ನೂ ಆಯ್ಕೆಯ ಪ್ರಕ್ರಿಯೆ ಹೇಗೆ? ಎಂದು ನೋಡುವುದಾದರೆ, ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲೀ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟೂ ಅಂಕಗಳಿಗೆ ಅನುಸಾರವಾಗಿ ಕ್ರೂಢಿಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಭರಿಸಬೇಕಾಗಿಲ್ಲ.

ಅರ್ಜಿ ಸಲ್ಲಿಸುವ ವಿಧಾನ ಹೇಗೆ ಎಂದು ನೋಡುವುದಾದರೆ, ಅರ್ಜಿ ಸಲ್ಲಿಸಲು ಬಯಸುವ ಮಹಿಳಾ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಅಭ್ಯರ್ಥಿಗಳ ವಿದ್ಯಾರ್ಹತೆ ನೋಡುವುದಾದರೆ, ಅಂಗನವಾಡಿ ಕಾರ್ಯಕರ್ತೆಯರು ಈ ಹುದ್ದೆಗೆ ಹತ್ತನೆತರಗತಿ ಉತ್ತೀರ್ಣ ಆಗಿರಬೇಕು. ಅಂಗನವಾಡಿ ಸಹಾಯಕಿಯರು ಈ ಹುದ್ದೆಗೆ ಕನಿಷ್ಠ ನಾಲ್ಕನೇ ತರಗತಿಯಿಂದ ಒಂಭತ್ತನೇ ತರಗತಿಯ ತೇರ್ಗಡೆ ಹೊಂದಿರಬೇಕು.

ಪ್ರಮುಖ ದಿನಾಂಕಗಳನ್ನು ನೋಡುವುದಾದರೆ, ಅರ್ಜಿ ಸಲ್ಲಿಸಲು ಆರಂಭದ ದಿನಾಂಕ 10/12/2021 ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03/01/2022 ಆಗಿರುತ್ತದೆ.
ವಿ ಸೂ :- ಹುದ್ದೆ ಖಾಲಿ ಇರುವ ಕೇಂದ್ರದ ಗ್ರಾಮದ ಮಹಿಳಾ ಅಭ್ಯರ್ಥಿಗಳನ್ನು ಹೊರತುಪಡಿಸಿ ಬೇರೆ ಗ್ರಾಮದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.

Leave A Reply

Your email address will not be published.