SSLC ಹಾಗು PUC ಆಗಿರುವಂತ ಮಹಿಳೆಯರಿಗೆ ಅಂಗನವಾಡಿ ಕೇಂದ್ರದಲ್ಲಿ ಉದ್ಯೋಗಾವಕಾಶವಿದೆ, ಖಾಲಿ ಇರುವಂತ ಹುದ್ದೆಗಳ ನೇಮಕಾತಿ ನಡೆಯುತ್ತಿದೆ, ಆಸಕ್ತರು ಅರ್ಜಿಸಲ್ಲಿಸಿ. ಈ ಹುದ್ದೆಯ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ.

ಬೆಳಗಾವಿ ಗ್ರಾಮೀಣ ವಾಪ್ಯಿಯಲ್ಲಿ 7 ಅಂಗನವಾಡಿ ಕಾರ್ಯಕರ್ತೆಯರು ಮತ್ತು 26 ಅಂಗನವಾಡಿ ಸಹಾಯಕಿಯರು ಹಾಗೂ 13 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಯ ವಿವರ ಹೀಗಿದೆ: ಅಂಗನವಾಡಿ ಕಾರ್ಯಕರ್ತೆ ಈ ಹುದ್ದೆಗೆ ಅರ್ಜಿಸಲ್ಲಿಸಲು ಪಿಯುಸಿ ಪಾಸ್ ಆಗಿರಬೇಕು. ಇನ್ನೂ ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿಸಲ್ಲಿಸಲು ಹತ್ತನೇ ತರಗತಿ ಪಾಸ್ ಆಗಿರಬೇಕು.
ವಯೋಮಿತಿ: ಕನಿಷ್ಟ 19 ವರ್ಷ ಹಾಗೂ ಗರಿಷ್ಟ 35 ವರ್ಷ ನಿಗದಿಪಡಿಸಲಾಗಿದೆ ಇನ್ನೂ ಈ ಹುದ್ದೆಯಲ್ಲಿ ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ

ಈ ಹುದ್ದೆಗಳಿಗೆ ಅರ್ಜಿಸಲ್ಲಿಸಲು ಏನೆಲ್ಲಾ ದಾಖಲಾತಿ ಬೇಕು?
ವಾಸಸ್ಥಳ ದೃಢೀಕರಣ ಪತ್ರ
ಜಾತಿ ಪ್ರಮಾಣ ಪತ್ರ
ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ/ರೇಷನ್ ಕಾರ್ಡ್
ವಿಕಲಚೇತನರು, ವಿಧವೆಯರು, ವಿಚ್ಛೇದಿತೆಯರು, ಯೋಜನಾ ನಿರಾಶ್ರಿತರು, ಲಿಂಗತ್ವ ಅಲ್ಪಸಂಖ್ಯಾತರು ಸಂಬಂಧಿಸಿದ ಪ್ರಮಾಣ ಪತ್ರ
ಅರ್ಜಿ ನಿಗದಿತ ನಮೂನೆ (ಆನ್‌ಲೈನ್)
ಜನನ ಪ್ರಮಾಣ ಪತ್ರ
ಜನ್ಮ ದಿನಾಂಕ ಇರುವ SSLC / PUC ಅಂಕಪಟ್ಟಿ
ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ

ವೇತನ ಶ್ರೇಣಿ
ಆಯ್ಕೆಯಾದ ಅಭ್ಯರ್ಥಿಗಳ ಮಾಸಿಕ ಗೌರವ ಧನ:
ಅಂಗನವಾಡಿ ಕಾರ್ಯಕರ್ತೆ : ರೂ 10,000/-
ಅಂಗನವಾಡಿ ಸಹಾಯಕಿ : ರೂ 5,000/-

ಅರ್ಜಿಸಲ್ಲಿಸುವ ಪ್ರಮುಖ ದಿನಾಂಕ:
ಬೆಳಗಾವಿ ಗ್ರಾಮೀಣ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳಿಗೆ ಆಗಸ್ಟ್ 08, 2024 ಕೊನೆಯ ದಿನವಾಗಿರುತ್ತದೆ
ಬೆಳಗಾವಿ ಜಿಲ್ಲಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 04, 2024 ಕೊನೆಯ ದಿನವಾಗಿದೆ.
ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!