ಹಾಸನ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಸನ ಜಿಲ್ಲೆಯ 8 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಇರುವ ಮಹಿಳಾ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ. ಖಾಲಿ ಹುದ್ದೆಗಳ ವಿವರ ಅಂಗನವಾಡಿ ಕಾರ್ಯಕರ್ತೆಯರ 21 ಹುದ್ದೆಗಳು ಹಾಗೂ ಅಂಗನವಾಡಿ ಸಹಾಯಕಿಯರು 80 ಹುದ್ದೆಗಳು ಖಾಲಿ ಇವೆ. ಪ್ರಮುಖ ದಿನಾಂಕಗಳು ಏನೆಂದು ನೋಡುವುದಾದರೆ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ 01/01/2021ಹಾಗೂ ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30/01/2021
ಆನ್ಲೈನ್ ಅರ್ಜಿ ಸಲ್ಲಿಸಲು ವೆಬ್ಸೈಟ್ ವಿಳಾಸ : https://anganwadirecruit.kar.nic.in/
ಇದಕ್ಕೆ ಲಗತ್ತಿಸಬೇಕಾದ ದಾಖಲೆಗಳು ಏನೆಂದು ನೋಡುವುದಾದರೆ, ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ ಎಸ್ಎಸ್ಎಲ್ಸಿ ಅಂಕಪಟ್ಟಿ, ವಾಸಸ್ಥಳ ದೃಢೀಕರಣ ಪತ್ರ, ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ, ಅಂಗನವಾಡಿ ಕಾರ್ಯಕರ್ತೆ ನೇಮಕಾತಿಗಳಲ್ಲಿ ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ. ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ, ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ, ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ , ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ, ಅಂಗವಿಕಲರಾಗಿದ್ದಲ್ಲಿ ಪ್ರಮಾಣ ಪತ್ರ.
ವಿದ್ಯಾರ್ಹತೆ ನೋಡುವುದಾದರೆ , ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಸಲ್ಲಿಸಲು SSLC ಪಾಸ್ ಆಗಿರಬೇಕು. ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಟ 4ನೇ ತರಗತಿ ಪಾಸ್ ಆಗಿರಬೇಕು. ಗರಿಷ್ಟ 9ನೇ ತರಗತಿ ತೇರ್ಗಡೆ ಹೊಂದಿರುವವರು ಸಹ ಅರ್ಜಿ ಸಲ್ಲಿಸಬಹುದು. ಯಾವುದೇ ಹುದ್ದೆಗಳಿಗೆ 10 ನೇ ತರಗತಿ ನಂತರ ಹೆಚ್ಚಿನ ಶಿಕ್ಷಣ ಪಡೆದವರು ಅರ್ಜಿ ಸಲ್ಲಿಸಲು ಅವಕಾಶ ಇಲ್ಲ. ಇನ್ನು ವಯೋಮಿತಿ ನೋಡುವುದಾದರೆ ದಿನಾಂಕ 01/01/2021 ಕ್ಕೆ 18 ವರ್ಷ ತುಂಬಿರಬೇಕು. 35 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸುವುದು ಹೇಗೆ? ಎಂದು ನೋಡುವುದಾದರೆ anganwadirecruit.kar.nic.in ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ. ನೇಮಕಾತಿ ಬಯಸುವ ಜಿಲ್ಲೆ ಮತ್ತು ನೇಮಕಾತಿ ಬಯಸುವ ಹುದ್ದೆಯನ್ನು ಆಯ್ಕೆ ಮಾಡಿ , ಸಲ್ಲಿಸಿ ಎಂಬಲ್ಲಿ ಕ್ಲಿಕ್ ಮಾಡಿ ಓಪನ್ ಆದ ಹೊಸ ಪೇಜ್ನಲ್ಲಿ ಅಗತ್ಯ ಮಾಹಿತಿಗಳನ್ನು ಟೈಪಿಸಿ ಅರ್ಜಿ ಸಲ್ಲಿಸಬಹುದು. ಪ್ರಮಾಣ ಪತ್ರಗಳನ್ನು ಆಯಾ ಹೆಸರಿನ ಮುಂದೆ ಇರುವ ಆಯ್ಕೆ ಬಟನ್ ಕ್ಲಿಕ್ ಮಾಡಿ ಅಪ್ಲೋಡ್ ಮಾಡಬೇಕು. ಬೆಂಗಳೂರು ರಾಷ್ಟ್ರೀಯ ರೋಗ ಮಾಹಿತಿ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗಾವಕಾಶ
ಉದ್ಯೋಗ ವಿವರ
ಹುದ್ದೆಯ ಹೆಸರು:ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ ವಿವರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಧಿಸೂಚನೆ
ಪ್ರಕಟಣೆ ದಿನಾಂಕ: 2021-01-01
ಕೊನೆ ದಿನಾಂಕ::2021-01-30
ಉದ್ಯೋಗ ವಿಧ :Full Time
ಉದ್ಯೋಗ ಕ್ಷೇತ್ರ:ಸರ್ಕಾರಿ ವಲಯ
ವೇತನ ವಿವರ:INR 6000 to 10000 /Month
ಕೌಶಲ ಮತ್ತು ಶೈಕ್ಷಣಿಕ ಅರ್ಹತೆ
ಕೌಶಲ–ವಿದ್ಯಾರ್ಹತೆ ಕಾರ್ಯಕರ್ತೆ ಹುದ್ದೆಗೆ 9ನೇ ತರಗತಿ, ಸಹಾಯಕಿ ಹುದ್ದೆಗೆ 4ನೇ ತರಗತಿ
ಕಾರ್ಯಾನುಭವ: 0 YEARS ನೇಮಕಾತಿ ಸಂಸ್ಥೆ
ಸಂಸ್ಥೆಯ ಹೆಸರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವೆಬ್ಸೈಟ್ ವಿಳಾಸ https://anganwadirecruit.kar.nic.in/