ಬಹಳಷ್ಟು ಜನರು ಸಣ್ಣದಾದರೂ ಸರ್ಕಾರಿ ಕೆಲಸಕ್ಕೆ ಕಾಯುತ್ತಿರುತ್ತಾರೆ. ಬಹಳ ವರ್ಷಗಳ ಕಾಲ ಕಾಯುತ್ತಿರುವವರು ಅದೆಷ್ಟೊ ಜನರಿದ್ದಾರೆ. ಕೊರೋನ ವೈರಸ್ ಹರಡುತ್ತಿರುವ ಕಾರಣ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಪ್ರಕ್ರಿಯೆಯು ನಿಂತುಹೋಗಿತ್ತು ಇದೀಗ ಪುನಃ ಕೆಲವು ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗುತ್ತಿದೆ. ಮಂಡ್ಯ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಡಿಯಲ್ಲಿ ಮಂಡ್ಯ ಜಿಲ್ಲೆಯ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಮಂಡ್ಯ ಜಿಲ್ಲೆಯಲ್ಲಿ ಕೆಲಸ ಮಾಡಬೇಕಾಗುತ್ತದೆ. ಅಂಗನವಾಡಿ ಕಾರ್ಯಕರ್ತೆ 82 ಹುದ್ದೆಗಳು ಹಾಗೂ ಅಂಗನವಾಡಿ ಸಹಾಯಕಿ 40 ಹುದ್ದೆಗಳು ಖಾಲಿ ಇವೆ, ಒಟ್ಟು 122 ಹುದ್ದೆಗಳು ಮಂಡ್ಯ ಜಿಲ್ಲೆಯಲ್ಲಿ ಖಾಲಿ ಇದೆ.

ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ನಾಲ್ಕನೆ ತರಗತಿ ಹಾಗೂ ಗರಿಷ್ಠ 9ನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು. ಇವರಲ್ಲಿ ಹೆಚ್ಚಿನ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ ಆದರೆ 9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸಲು ಬರುವುದಿಲ್ಲ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಮಹಿಳಾ ಅಭ್ಯರ್ಥಿಗಳು ಎಸ್ಎಸ್ಎಲ್ ಸಿಯಲ್ಲಿ ತೇರ್ಗಡೆಯಾಗಿರಬೇಕು. ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ ಹದಿನೆಂಟು ವರ್ಷದಿಂದ ಗರಿಷ್ಠ 35 ವರ್ಷ ವಯೋಮಿತಿಯನ್ನು ಹೊಂದಿರುವವರು ಅರ್ಜಿ ಸಲ್ಲಿಸಬಹುದು.

ಅಂಗನವಾಡಿ ಸಹಾಯಕಿಯಾಗಿ ಕೆಲಸ ಮಾಡಿದ್ದು ಖಾಲಿ ಇರುವ ಅಥವಾ ಹೊಸ ಕೇಂದ್ರ ಸ್ಥಾಪನೆಯಾದ ಗ್ರಾಮದಲ್ಲಿ ಅಂಗನವಾಡಿ ಕೇಂದ್ರದಿಂದ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ವಾಸವಾಗಿದ್ದು ಎಸ್ಎಸ್ಎಲ್ ಸಿ ಯಲ್ಲಿ ತೇರ್ಗಡೆಯಾಗಿದ್ದು, ಕನಿಷ್ಠ ಮೂರು ವರ್ಷ ಕೆಲಸದ ಅನುಭವ ಹೊಂದಿದ್ದು, 45ವರ್ಷಗಳ ವಯೋಮಿತಿ ಹೊಂದಿದ್ದು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದರೆ ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ ಹಾಗೂ ಬೇರೆ ಅಭ್ಯರ್ಥಿಗಳಿಂದ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಪಡೆಯಲಾಗುವುದಿಲ್ಲ.

ಅಂಗನವಾಡಿ ಸಹಾಯಕಿ ಹಾಗೂ ಕಾರ್ಯಕರ್ತೆ ಹುದ್ದೆಗಳಿಗೆ ಅಕ್ಟೋಬರ್ 12ರಿಂದ ಅರ್ಜಿ ಸಲ್ಲಿಸಬಹುದಾಗಿದೆ, ನವೆಂಬರ್ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಈ ಮಾಹಿತಿಯನ್ನು ತಪ್ಪದೆ ಎಲ್ಲರಿಗೂ ತಿಳಿಸಿ ಅರ್ಹ ಮಹಿಳಾ ಅಭ್ಯರ್ಥಿಗಳು ಅದರಲ್ಲೂ ಮಂಡ್ಯ ಜಿಲ್ಲೆಯವರಾಗಿದ್ದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದನ್ನು ಮರೆಯಬೇಡಿ.

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave a Reply

Your email address will not be published. Required fields are marked *