ಅಂಗನವಾಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ, ಜಿಲ್ಲಾ ಶಿಶು ಅಭಿವೃದ್ಧಿ ಯೋಜನೆಯಡಿ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಸಲ್ಲಿಸಿ ಹಾಗೂ ಈ ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ

ಹುದ್ದೆಗಳ ವಿವರ ಹೀಗಿದೆ:
ಉದ್ಯೋಗ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
ಕೆಲಸದ ಸ್ಥಳ: ಉತ್ತರ ಕನ್ನಡ ಜಿಲ್ಲೆಯಲ್ಲಿ
ಹುದ್ದೆಗಳ ಸಂಖ್ಯೆ: 344 ಹುದ್ದೆಗಳು
ಅರ್ಜಿಸಲ್ಲಿಸುವ ಮೋಡ್: ಆನ್ಲೈನ್
ಒಟ್ಟು ಹುದ್ದೆಗಳು: 344 ಅದರಲ್ಲಿ ಅಂಗನವಾಡಿ ಸಹಾಯಕಿ 263 ಹುದ್ದೆಗಳು
ಅಂಗನವಾಡಿ ಕಾರ್ಯಕರ್ತೆ 81 ಹುದ್ದೆಗಳು

ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವವರು ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ ತರಗತಿ (ಪಿಯುಸಿ) ಪಾಸ್ ಆಗಿರಬೇಕು.
ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿ೦ದ 10ನೇ ತರಗತಿ (10th) ಪಾಸ್ ಆಗಿರಬೇಕು.
ವಯೋಮಿತಿ: ಕನಿಷ್ಠ 18 ವರ್ಷ ಗರಿಷ್ಠ 35 ಇರಬೇಕಾಗುತ್ತದೆ. ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುವುದು.

ಅರ್ಜಿಸಲ್ಲಿಸಲು ಬೇಕಾಗುವ ದಾಖಲೆಗಳು ಹೀಗಿವೆ:
ಆಧಾರ್ ಕಾರ್ಡ್
ನಿವಾಸಿ ದೃಢೀಕರಣ ಪತ್ರ
ಜನನ ಪ್ರಮಾಣ ಪತ್ರ
ಜಾತಿ ಪ್ರಮಾಣ ಪತ್ರ
ಅಗತ್ಯ ಶೈಕ್ಷಣಿಕ ಅಂಕ ಪಟ್ಟಿಗಳು
ಆದಾಯ ಪ್ರಮಾಣ ಪತ್ರ ಹಾಗೂ ಇತರೆ ಅಗತ್ಯ ದಾಖಲಾತಿಗಳು

ಅರ್ಜಿಸಲ್ಲಿಸುವ ಪ್ರಮುಖ ದಿನಾಂಕ
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 12-07-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 12-08-2024
ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ
ಇನ್ನೂ ಹೆಚ್ಚಿನ ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಿ

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!