Anganwadi Recruitment 2023: ಅಂಗನವಾಡಿ ಕೇಂದ್ರಗಳಲ್ಲಿ ಇದೀಗ ಹೊಸದಾಗಿ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು ರಾಮನಗರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಹುದ್ದೆಗಳು ಖಾಲಿ ಇರುವುದನ್ನು ಭರ್ತಿ ಮಾಡಿಕೊಳ್ಳಲು ಆದೇಶವನ್ನು ಹೊರಡಿಸಿದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ರಾಮನಗರ ಜಿಲ್ಲೆಯ ಐದು ತಾಲೂಕುಗಳ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿಯ ಸಹಾಯಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನ ಭರ್ತಿ ಮಾಡಿಕೊಳ್ಳಲು ಅರ್ಜಿಗಳನ್ನ ಆಹ್ವಾನಿಸಲಾಗಿದೆ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕೆಲವು ಮಾಹಿತಿಗಳನ್ನ ಇಲ್ಲಿ ನಾವು ತಿಳಿದುಕೊಳ್ಳೋಣ.

Anganwadi Recruitment 2023 ಹುದ್ದೆಯ ಹೆಸರು: ಅಂಗನವಾಡಿ ಕಾರ್ಯಕರ್ತೆಯರು, ಮಿನಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿಯ ಸಹಾಯಕರು.
ಹುದ್ದೆಗಳ ಸಂಖ್ಯೆ: ಮುಖ್ಯ ಅಂಗನವಾಡಿ ಕಾರ್ಯಕರ್ತೆಯರು – 8
ಮಿನಿ ಅಂಗನವಾಡಿ ಕಾರ್ಯಕರ್ತೆಯರು -22
ಅಂಗನವಾಡಿ ಸಹಾಯಕರು -131

ಕರ್ತವ್ಯ ಸ್ಥಳ: ರಾಮನಗರ ಜಿಲ್ಲೆಯ ಐದು ತಾಲೂಕುಗಳ ಐದು ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಈ ಹುದ್ದೆಗಳು ಖಾಲಿ ಇವೆ. ಅಂಗನವಾಡಿ ಕಾರ್ಯಕರ್ತ ಹುದ್ದೆಗೆ ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷಗಳು ವಯೋಮಿತಿಯಲ್ಲಿ ಸಡೆಲಿಕೆಯನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ ಮೇ 22, 2023 ಆಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21, 2023 ಆಗಿರುತ್ತದೆ.

ಅರ್ಜಿ ಸಲ್ಲಿಕೆಯ ವಿಧಾನ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಮೊದಲಿಗೆ ಅಭ್ಯರ್ಥಿಗಳು ಕಚೇರಿಯ ವಿಳಾಸಕ್ಕೆ ಭೇಟಿ ನೀಡಿ ಅಪ್ಲಿಕೇಶನ್ ಫಾರ್ಮನ್ನ ತೆಗೆದುಕೊಳ್ಳಬೇಕು ನಂತರ ಅಭ್ಯರ್ಥಿಯು ಅಪ್ಲಿಕೇಶನ್ ನಲ್ಲಿ ತಿಳಿಸಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಒಮ್ಮೆ ಪರಿಶೀಲನೆ ಮಾಡಿ ಅವಶ್ಯಕ ದಾಖಲೆಗಳ ಜೊತೆಗೆ ಭರ್ತಿ ಮಾಡಿದ ಅರ್ಜಿಯನ್ನು ರಾಮನಗರ ಜಿಲ್ಲೆಯ ಆಯಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಪೋಸ್ಟ್ ಮಾಡಬೇಕು. ಇದನ್ನೂ ಓದಿ: Labor Card Holders: ಇನ್ನು ಮುಂದೆ ಕಾರ್ಮಿಕ ಕಾರ್ಡ್ ಇದ್ದವರು ಉಚಿತ ಪ್ರಯಾಣ ಮಾಡಲು ಸಾಧ್ಯವಿಲ್ಲ ಯಾಕೆಂದರೆ

Leave a Reply

Your email address will not be published. Required fields are marked *