Anganwadi jobs: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹಾವೇರಿ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿನ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು ಖಾಲಿಯಿರುವ ಹುದ್ದೆಗಳ ಸಂಖ್ಯೆ: ಒಟ್ಟು 208 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆ-ಹುದ್ದೆಗಳ ಸಂಖ್ಯೆ
ಅಂಗನವಾಡಿ ಕಾರ್ಯಕರ್ತೆಯರ 50 ಹುದ್ದೆಗಳು ಅಂಗನವಾಡಿ ಸಹಾಯಕಿಯರು 158 ಹುದ್ದೆಗಳು ಕರ್ತವ್ಯ ಸ್ಥಳ ಹಾವೇರಿ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿನ ಅಂಗನವಾಡಿ ಕೇಂದ್ರಗಳಲ್ಲಿ ಹುದ್ದೆಗಳು ಖಾಲಿ ಇದೆ. ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ ಅಂಗನವಾಡಿ ಕಾರ್ಯಕರ್ತೆಯರು ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪಿಯುಸಿಯಲ್ಲಿ ತೇರ್ಗಡೆ ಹೊಂದಿರಬೇಕು.
ಅಂಗನವಾಡಿ ಸಹಾಯಕಿಯರು ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿಯಲ್ಲಿ ತೇರ್ಗಡೆ ಹೊಂದಿರಬೇಕು ವಯೋಮಾನ ಅಭ್ಯರ್ಥಿಗಳು ಕನಿಷ್ಠ 19 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಅಭ್ಯರ್ಥಿಗಳು ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ. ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ). ಹಂತ 4 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ ಹುದ್ದೆ ಖಾಲಿ ಇರುವ ಹಾವೇರಿ ಜಿಲ್ಲೆಯ ಆಯಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಅರ್ಜಿಯನ್ನು ಸಲ್ಲಿಸಬೇಕು. ನಿಗದಿತ ಅರ್ಜಿ ಶುಲ್ಕದ ವಿವರ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ ಮಾರ್ಚ್ 29, ೨೦೨೩
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 24, 2023 ಇತರೆ ಮಾಹಿತಿ : ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ಗ್ರಾಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಹುದ್ದೆ ಖಾಲಿ ಇರುವ ಆಯಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದು.