ಕನ್ನಡದಲ್ಲಿ ಇಲ್ಲಿಯವರೆಗೂ ಯಾರೂ ಮಾಡದ ಅದ್ಧೂರಿಯಾದ ಪ್ರಯತ್ನ ಇದಾಗಲಿದ್ದು, ಆಲ್ಬಂ ಹಾಡಿನ ವಿಚಾರದಲ್ಲಿ ಕನ್ನಡದಲ್ಲಿ ಈ ಹಿಂದೆಂದೂ ಆಗದ ಒಂದು ಹೊಸತನವನ್ನು ಈ ಹಾಡಿನಲ್ಲಿ ತೋರಿಸಲಾಗುತ್ತಾ ಇದೆಯಂತೆ. ಈ ಹಾಡಿನಲ್ಲಿ ನೋಡು ಶಿವಾ. ಎನ್ನುತಾ ಚಂದನ್ ಶೆಟ್ಟಿ ಜೊತೆ ಹೆಜ್ಜೆ ಹಾಕಿದ ಜೊತೆ ಜೊತೆಯಲಿ ಧಾರಾವಾಹಿಯ ಅನುಸಿರಿಮನೆ ಖ್ಯಾತಿಯ ಮೇಘಾ ಶೆಟ್ಟಿ. ಇದರ ಕುರಿತಾಗಿ ಇನಷ್ಟು ಮಾಹಿತಿಯನ್ನು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.

ಸ್ಯಾಂಡಲ್ ವುಡ್ ನ ರ್ಯಾಪರ್ ಚಂದನ್ ಶೆಟ್ಟಿ ಇದೀಗ ಮತ್ತೊಂದು ಆಲ್ಬಂ ಸಾಂಗ್ ನ ಸಿದ್ಧತೆಯಲ್ಲಿದ್ದಾರೆ. ನೋಡು ಶಿವ ಎನ್ನುವ ಸಾಲುಗಳಿಂದ ಪ್ರಾರಂಭವಾಗಿರುವ ಹಾಡನ್ನು ಚಂದನ್ ಅವರೇ ಸಂಗೀತ ನೀಡಿ, ಅವರೇ ಹಾಡಿದ್ದಾರೆ.ಮೋನಿಕಾ ಕಲ್ಲೂರಿ ಆರ್ಟ್ಸ್​ ಪ್ರೊಡಕ್ಷನ್​ ಬ್ಯಾನರ್​ನಲ್ಲಿ ಇದೀಗ ಆಲ್ಬಂ ಸಾಂಗ್​ವೊಂದು ಸಿದ್ಧವಾಗುತ್ತಿದೆ. ಸುಮಿತ್ ಎಂ.ಕೆ ಹಾಡಿಗೆ ಸಾಹಿತ್ಯ ರಚಿಸಿದ್ದಾರೆ ಜೊತೆಗೆ ಹಾಡಿನಲ್ಲೂ ಕಾಣಿಸಿಕೊಂಡಿದ್ದಾರೆ. ಈ ಹಾಡಿನಲ್ಲಿ ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ನಟಿ ಮೇಘಾ ಶೆಟ್ಟಿ ಸಹ ಕಾಣಿಸಿಕೊಂಡಿದ್ದಾರೆ. ಹಾಡಿನಲ್ಲಿ ಮೇಘಾ ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ ಹಾಗೂ ಸ್ಪೇಷಲ್ ಅಪೀಯರೆನ್ಸ್ ಆಗಿ ಚಂದನ್ ಶೆಟ್ಟಿ ಸಹ ಇರಲಿದ್ದಾರೆ. ಎಎಂಸಿ ಸಿಟಿ ಗ್ರೂಪ್ ಆಫ್ ಇನ್ಸಿಟ್ಯೂಷನ್ ಸೇರಿ ಒಟ್ಟು 9 ವಿದ್ಯಾಸಂಸ್ಥೆಗಳನ್ನು ನಡೆಸುತ್ತಿರುವ ಮತ್ತು ಆ ಸಂಸ್ಥೆಯ ವೈಸ್ ಪ್ರೆಸಿಡೆಂಟ್ ಆಗಿರುವ ಮೋನಿಕಾ ಕಲ್ಲೂರಿ, ಈ ಆಲ್ಬಂ ಹಾಡಿನ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುವ ತಯಾರಿಯಲ್ಲಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಮೋನಿಕಾ, ನೋಡು ಶಿವ ಎಂದೇ ಹಾಡು ಶುರುವಾಗಲಿದೆ. ಎಷ್ಟೋ ಜನ ಜೀವನದಲ್ಲಿ ಅಂದುಕೊಂಡಿದ್ದು ಏನೂ ಆಗಿಲ್ಲವಲ್ಲ ಎಂದು ತಮ್ಮನ್ನೇ ತಾವೇ ಶಪಿಸಿಕೊಳ್ಳುತ್ತಿರುತ್ತಾರೆ. ಎಷ್ಟೆ ಶ್ರಮ ಪಟ್ಟರೂ ಅದು ಈಡೇರುವುದಿಲ್ಲ. ಅಂದುಕೊಂಡ ಯಶಸ್ಸು ಸಿಕ್ಕಿರುವುದಿಲ್ಲ. ಈ ಥರದ ಹುಡುಗ ದೇವರ ಹತ್ತಿರ ಹೇಗೆ ಸಂಭಾಷಣೆ ಮಾಡುತ್ತಾನೆ, ತನ್ನ ಗೋಳನ್ನು ಹೇಗೆ ಹೇಳುತ್ತಾನೆ ಎಂಬುದನ್ನು ಫನ್ನಿಯಾಗಿ ಹಾಡಿನಲ್ಲಿ ತೋರಿಸಲಿದ್ದೇವೆ ಎಂದಿದ್ದಾರೆ. ಕನ್ನಡದಲ್ಲಿ ಇಲ್ಲಿಯವರೆಗೂ ಯಾರೂ ಮಾಡದ ಅದ್ಧೂರಿಯಾದ ಪ್ರಯತ್ನ ಇದಾಗಲಿದ್ದು, ಆಲ್ಬಂ ಹಾಡಿನ ವಿಚಾರದಲ್ಲಿ ಕನ್ನಡದಲ್ಲಿ ಈ ಹಿಂದೆಂದೂ ಆಗದ ಒಂದು ಹೊಸತನವನ್ನು ಈ ಹಾಡಿನಲ್ಲಿ ತೋರಿಸಲಿಗ್ತಾ ಇದೆಯಂತೆ. ಅದ್ಧೂರಿ ವೆಚ್ಚದಲ್ಲಿ ಸಿದ್ಧವಾಗಲಿರುವ ಈ ಹಾಡು, ಪರಭಾಷಿಕರಿಗೂ ವಿಶೇಷ ಎನಿಸೋ ಸಾಧ್ಯತೆ ಇದೆ. ಅದ್ಧೂರಿ ವೆಚ್ಚದಲ್ಲಿ ಸಿದ್ಧವಾದಲಿರುವ ಈ ಹಾಡು, ಪರಭಾಷಿಕರಿಗೂ ವಿಶೇಷ ಎನಿಸಲಿದೆ ಸರಿಸುಮಾರು 30 ಲಕ್ಷ ರೂಪಾಯಿ ಬಜೆಟ್ ನಲ್ಲಿ ಈ ಹಾಡು ಸಿದ್ಧವಾಗಲಿದೆ ಎಂದಿದ್ದಾರೆ ಮೋನಿಕಾ.

ಈ ಹಾಡಿನ ಸಾಹಿತ್ಯ ಕೇಳಿ ಚಂದನ್ ಶೆಟ್ಟಿ ತುಂಬಾ ಇಷ್ಟಪಟ್ಟು, ಎರಡನೇ ಗಂಟೆಯಲ್ಲಿ ಕಂಪೋಸ್ ಮಾಡಿ ಧ್ವನಿಯನ್ನೂ ನೀಡಿದ್ದಾರೆ. ಕಳೆದೊಂದು ತಿಂಗಳಿಂದ ಈ ಹಾಡಿನ ತಯಾರಿ ಕೆಲಸ ಶುರುವಾಗಿದ್ದು, 200 ಜನ ಈ ಹಾಡಿಗೆ ಕೆಲಸ ಮಾಡುತ್ತಿದ್ದಾರೆ. 60 ವೃತ್ತಿಪರ ಡ್ಯಾನ್ಸರ್ ಗಳು ಹೆಜ್ಜೆ ಹಾಕಲಿದ್ದಾರೆ. ಮೂರು ದಿನಗಳಲ್ಲಿ ಎಎಂಸಿ ಕಾಲೇಜು ಕ್ಯಾಂಪಸ್​ನಲ್ಲಿಯೇ ಶೂಟಿಂಗ್​ ಮುಗಿಸಿಕೊಳ್ಳುವ ಪ್ಲಾನ್​ ತಂಡದ್ದಾಗಿದ್ದು, ಮೋಹನ್ ಮಾಸ್ಟರ್ ನೃತ್ಯ ನಿರ್ದೇಶದಲ್ಲಿ ಈ ಹಾಡು ಮೂಡಿಬರುತ್ತಿದೆ. ಇನ್ನು ವಿದೇಶದಲ್ಲಿ ಪದವಿ ಮತ್ತು ಸ್ನಾತಕೋತ್ತರ ವಿದ್ಯಾಭ್ಯಾಸ ಮಾಡಿರುವ ನಿರ್ಮಾಪಕಿ ಮೋನಿಕಾ, ಮೊದಲಿಂದಲೂ ಕಲೆಯತ್ತ ಆಸಕ್ತಿ. ಜಾಗೃತಿ ಮೂಡಿಸುವ ಕೆಲಸವನ್ನು ಏಕಕಾಲದಲ್ಲಿ ದೊಡ್ಡ ಸಮುದಾಯಕ್ಕೆ ತೋರಿಸುವ ಆಕ್ತಿ ಸಿನಿಮಾ ಕ್ಷೇತ್ರಕ್ಕಿದೆ. ಆ ಒಂದು ಕಾರಣಕ್ಕೆ ಸಿನಿಮಾ ಕ್ಷೇತ್ರವನ್ನು ಆಯ್ದುಕೊಂಡಿದ್ದು, ಮುಂದಿನ ವರ್ಷ ಹೊಸ ಸಿನಿಮಾ ನಿರ್ಮಾಣ ಮಾಡುವ ಬಗ್ಗೆಯೂ ಕನಸು ಕಟ್ಟಿಕೊಂಡಿದ್ದಾರೆ. ಸದ್ಯದಲ್ಲೇ ಆನಂದ್‌ ಯೂಟ್ಯೂಬ್‌ ಚಾನಲ್‌ನಲ್ಲಿ ಈ ಹಾಡು ಮೂಡಿ ಬರಲಿದೆ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!