ಪುನೀತ್ ರಾಜಕುಮಾರ್ ಅವರ ಅಕಾಲಿಕ ಮರಣದಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಪುನೀತ್ ಅವರ ಬಗ್ಗೆ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಮಾತುಗಳನ್ನು ಈ ಲೇಖನದ ಮೂಲಕ ತಿಳಿಯೋಣ. ದೈಹಿಕವಾಗಿ ನಮ್ಮನ್ನಗಲಿದರು ಕರುನಾಡಿನ ಜನಮಾನಸದಲ್ಲಿ ಶಾಶ್ವತವಾಗಿ ಉಳಿದಿರುವ ನಟ ಪುನೀತ್‌ ರಾಜ್‌ಕುಮಾರ್‌ ಅವರ ಹೆಸರಿನಲ್ಲಿ ಬಳ್ಳಾರಿಯಲ್ಲಿ ಬಡ ವಿದ್ಯಾರ್ಥಿಗಳಿಗೆ ಉಚಿತ ವಸತಿಯುತ ಶಾಲೆ ಹಾಗೂ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಿಸಿ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಳ್ಳಲಾಗುವುದು ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ತಿಳಿಸಿದರು.

ನಗರ ಹೊರವಲಯದ ರುಕ್ಮಣಮ್ಮ ಚೆಂಗಾರೆಡ್ಡಿ ಸ್ಮಾರಕ ಹಿರಿಯ ನಾಗರಿಕರ ವೃದ್ಧಾಶ್ರಮದಲ್ಲಿ ನಟ ಪುನೀತ್‌ ರಾಜಕುಮಾರ್‌ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವರು ಸುದ್ದಿಗಾರರ ಜೊತೆ ಮಾತನಾಡಿ ಈ ಹಿಂದೆ ನಮ್ಮ ಅಧಿಕಾರ ಅವಧಿಯಲ್ಲಿ ಅನಂತಪುರ ರಸ್ತೆಗೆ ಹಾಗೂ ಉದ್ಯಾನವನಕ್ಕೆ ವರನಟ ಡಾ. ರಾಜ್‌ಕುಮಾರ್‌ ಅವರ ಹೆಸರಿಡಲಾಯಿತು.

ಪುನೀತ್‌ ಹೆಸರು ಶಾಶ್ವತವಾಗಿ ಉಳಿಯುವಂತಾಗಬೇಕು ಎಂಬ ಆಶಯದಲ್ಲಿ ಅವರ ಹೆಸರಿನಲ್ಲಿ ವಸತಿಯುತ ಶಾಲೆಯನ್ನು ಬಳ್ಳಾರಿಯಲ್ಲಿ ನಿರ್ಮಿಸುವೆ ಎಂದು ಹೇಳಿದರು. ಹಂತ ಹಂತವಾಗಿ ಪಿಜಿವರೆಗೆ ಶಾಲೆಯನ್ನು ವಿಸ್ತರಿಸಲಾಗುವುದು. ಆದಷ್ಟು ಬೇಗ ಶಾಲೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗುವುದು, ನಗರದಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಮ್ಮ ಅವಧಿಯಲ್ಲಿ ತರಲಾಯಿತು ಆದರೆ ಅದು ಪೂರ್ಣಗೊಂಡಿಲ್ಲ. ಇದೀಗ ನಾವೆ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಿಸಿ ಜನರಿಗೆ ಆರೋಗ್ಯ ಸೇವೆಯನ್ನು ಕೈಗೊಳ್ಳುತ್ತೇವೆ. ನಮ್ಮ ಸೇವಾ ಕಾರ್ಯಕ್ಕೆ ಪುನೀತ್‌ ರಾಜ್‌ ಕುಮಾರ್‌ ಅವರು ತೆರೆ ಮರೆಯಲ್ಲಿ ಮಾಡಿರುವ ಅನೇಕ ಜನೋಪಕಾರಿ ಕೆಲಸಗಳೆ ಪ್ರೇರಣೆಯಾಗಿವೆ ಎಂದು ತಿಳಿಸಿದರು.

ಪುನೀತ್‌ ಅವರಿಗೆ ಅನೇಕ ಅವಾರ್ಡ್‌ಗಳನ್ನು ನೀಡುವಂತೆ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ ಆದರೆ ಪುನೀತ್‌ ಅವರ ಜನಮುಖಿ ಸೇವೆ ಹಾಗೂ ಚಿತ್ರರಂಗಕ್ಕೆ ನೀಡಿದ ಕೊಡುಗೆಗೆ ಅವರಿಗೆ ಯಾವ ಅವಾರ್ಡ್‌ ನೀಡಿದರೂ ಕಡಿಮೆಯೆ. ನಾಡಿನ ಪ್ರತಿಯೊಬ್ಬರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದು ಎಲ್ಲಕ್ಕಿಂತ ದೊಡ್ಡ ಅವಾರ್ಡ್‌ ಪಡೆದುಕೊಂಡು ನಮ್ಮಿಂದ ದೂರವಾಗಿದ್ದಾರೆ ಎಂದು ಹೇಳಿದರು. ನಾನು ಪರ್ಮನೆಂಟಾಗಿ ಬಳ್ಳಾರಿಯಲ್ಲಿಯೆ ಇರುತ್ತೇನೆ. ನಿಮ್ಮೆಲ್ಲರ ಜೊತೆ ಇದ್ದು ನನ್ನ ಸೇವಾ ಕಾರ್ಯವನ್ನು ಮುಂದುರಿಸುತ್ತೇನೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

ನಿಮಗೆ ಕೋರ್ಟ್‌ ಬಳ್ಳಾರಿಯಲ್ಲಿಯೆ ಇರಲು ಅನುಮತಿ ನೀಡಿದೆಯೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ರೆಡ್ಡಿ ಅವರು ಇಂಟರ್‌ನೆಟ್‌ನಲ್ಲಿ ಕೋರ್ಟ್‌ ಆರ್ಡರ್‌ ಸಿಗುತ್ತದೆ, ನಾನು ಇಲ್ಲಿಯೆ ಪರ್ಮನೆಂಟಾಗಿ ಉಳಿಯಲು ಕೋರ್ಟ್ ಅವಕಾಶ ನೀಡಿದೆ. ಮಾಧ್ಯಮಗಳು ತಪ್ಪು ಗ್ರಹಿಕೆಯಿಂದ ಕೆಲವೆ ತಿಂಗಳು ಎಂದು ಸುಳ್ಳು ಸುದ್ದಿ ಮಾಡಿದೆ ಆದರೆ ನನಗೆ ಇಲ್ಲಿಯೆ ಇರಲು ಅವಕಾಶ ಕೊಡಲಾಗಿದೆ ಎಂದು ಖಚಿತಪಡಿಸಿದರು.

ನನಗೆ ಯಾವ ಅಧಿಕಾರ ಬೇಡ, ಉಳಿದ ಆಯುಷ್ಯವನ್ನು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ನಿರ್ಧರಿಸಿರುವೆ ಅಲ್ಲದೆ ಯಾವ ರಾಜಕೀಯ ಬೇಡ. ಬಳ್ಳಾರಿಯಲ್ಲಿಯೆ ಸೇರಿಸಿಬಿಡು, ಜನಸೇವೆ ಮಾಡಿಕೊಂಡಿರುವೆ ಎಂದು ಸಂಕಷ್ಟದ ದಿನಗಳಲ್ಲಿ ದೇವರ ಮೊರೆ ಇಡುತ್ತಿದ್ದೆ, ಈಗ ಅದೇ ನಿರ್ಧಾರವನ್ನು ತೆಗೆದುಕೊಂಡಿರುವೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ತಿಳಿಸಿದರು. ನಗರದ ಹೊರವಲಯದಲ್ಲಿ ತಮ್ಮದೆ ರುಕ್ಮಣಮ್ಮ ಚೆಂಗಾರೆಡ್ಡಿ ವೃದ್ಧಾಶ್ರಮದಲ್ಲಿ ನಟ ಪುನೀತ್‌ ರಾಜ್‌ಕುಮಾರ್‌ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪುನೀತ್‌ರಾಜಕುಮಾರ್‌ ನಮ್ಮ ಕುಟುಂಬದ ಜೊತೆ ನಿರಂತರ ಒಡನಾಟದಲ್ಲಿದ್ದರು. ನನ್ನ ಮಗ ಕಿರೀಟಿಯನ್ನು ಕನ್ನಡ ಸಿನಿಮಾ ಕ್ಷೇತ್ರಕ್ಕೆ ಪರಿಚಯಿಸಬೇಕು ಎಂದುಕೊಂಡು ಪುನೀತ್‌ ಅವರ ಜತೆ ಬಿಟ್ಟಿದ್ದೆ. ಶೂಟಿಂಗ್‌ಗೆ ತೆರಳುವಾಗ ಕಿರೀಟಿಯನ್ನು ಕರೆದುಕೊಂಡು ಹೋಗುತ್ತಿದ್ದರು ಎಂದು ಮೆಲುಕು ಹಾಕಿದರು. ಒಟ್ಟಿನಲ್ಲಿ ಪುನೀತ್ ರಾಜಕುಮಾರ್ ಅವರು ಎಲ್ಲಾ ರೀತಿಯಲ್ಲಿ ತಮ್ಮಿಂದಾಗುವ ಸಹಾಯವನ್ನು ಮಾಡುತ್ತಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಆಶಿಸೋಣ.

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave a Reply

Your email address will not be published. Required fields are marked *