ಹತ್ತನೇ ತರಗತಿ ಹಾಗೂ ಪದವಿ ಪಾಸ್ ಆದಂತಹ ಅಭ್ಯರ್ಥಿಗಳಿಗೆ ಜಿಲ್ಲಾ ಆಯ್ಯುಷ್ ಇಲಾಖೆಯ ವತಿಯಿಂದ ಖಾಲಿ ಇರುವಂತಹ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಯಾವೆಲ್ಲ ಹುದ್ದೆಗಳು ಖಾಲಿ ಇವೆ? ಅಭ್ಯರ್ಥಿಗಳ ವಿದ್ಯಾರ್ಹತೆ, ವೇತನ, ಉದ್ಯೋಗ ಸ್ಥಳ ಈ ಎಲ್ಲಾ ಮಾಹಿತಿಗಳ ಕುರಿತು ವಿವರವಾಗಿ ನಾವು ಈ ಲೇಖನದಲ್ಲಿ ನೋಡೋಣ.
ಜಿಲ್ಲಾ ಆಯುಷ್ ಇಲಾಖೆಯ ನೇಮಕಾತಿ ಹುದ್ದೆಯ ಹೆಸರು ಈ ರೀತಿಯಾಗಿ ಇರುತ್ತವೆ. ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು, ಔಷಧಿ ವಿತರಕರು, ಮಲ್ಟಿ ಪರ್ಪಸ್ ವರ್ಕರ್ ಹಾಗೂ ಸ್ತ್ರೀ ರೋಗ ಅಟೆಂಡೆಂಟ್ ಈ ನಾಲ್ಕು ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇಲ್ಲಿ ಒಟ್ಟೂ ಏಳು ಹುದ್ದೆಗಳು ಖಾಲಿ ಇದ್ದು, ಅದರಲ್ಲಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರ ಹುದ್ದೆ 1, ಔಷಧಿ ವಿತರಕರ 2 ಹುದ್ದೆಗಳು,
ಮಲ್ಟಿ ಪರ್ಪಸ್ ವರ್ಕರ್ ಇವರ 3 ಹುದ್ದೆಗಳು ಹಾಗೂ 1ಸ್ತ್ರೀ ರೋಗ ಅಟೆಂಡೆಂಟ್ ಹುದ್ದೆಗಳು ಹೀಗೆ ಒಟ್ಟೂ ಏಳು ಹುದ್ದೆಗಳು ಖಾಲಿ ಇರುತ್ತವೆ. ಉದ್ಯೋಗ ಸ್ಥಳ ಚಿಕ್ಕಮಗಳೂರು ಜಿಲ್ಲೆ ಆಗಿರುತ್ತದೆ. ಇನ್ನೂ ಈ ನಾಲ್ಕೂ ಹುದ್ದೆಗಳಿಗೆ ಅಭ್ಯರ್ಥಿಗಳು ಹೊಂದಿರಬೇಕಾದ ವಿದ್ಯಾರ್ಹತೆ ಏನೂ? ಎಂದು ನೋಡುವುದಾದರೆ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು ಈ ಹುದ್ದೆಗೆ ಅಂಗೀಕೃತ ವಿಶ್ವವಿದ್ಯಾಲಯದಿಂದ ಆಯುಷ್ ಪದವಿ ಅಥವಾ MBA ಪದವಿಯ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಇನ್ನು ಎರಡನೆಯದಾಗಿ ಔಷಧಿ ವಿತರಕರ ಈ ಹುದ್ದೆಗೆ ಅಭ್ಯರ್ಥಿಯು ಹತ್ತನೇ ತರಗತಿ ಪಾಸ್ ಆಗಿರಬೇಕು ಹಾಗೂ ಔಷಧ ವಿಜ್ಞಾನದಲ್ಲಿ ಡಿಪ್ಲೊಮಾ ಪದವಿ ಹೊಂದಿರಬೇಕು. ಮಲ್ಟಿ ಪರ್ಪಸ್ ವರ್ಕರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಯು ಹತ್ತನೇ ತರಗತಿ ಪಾಸ್ ಆಗಿರಬೇಕು ಹಾಗೂ ಅದರ ಜೊತೆಗೆ ಆರೋಗ್ಯ ಹಾಗೂ ಆಯುಷ್ ಇಲಾಖೆಯ ಬಗ್ಗೆ ಜ್ಞಾನವನ್ನು ಹೊಂದಿರಬೇಕು. ಇನ್ನೂ ಕೊನೆಯದಾಗಿ ಸ್ತ್ರೀ ರೋಗ ಅಟೆಂಡೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಯು ಹತ್ತನೇ ತರಗತಿ ಪಾಸ್ ಆಗಿರಬೇಕು.
ಇನ್ನೂ ಈ ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಎಷ್ಟಿರಬೇಕು? ಎಂದು ನೋಡುವುದಾದರೆ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಗರಿಷ್ಠ ನಲವತ್ತೈದು ವರ್ಷ ವಯಸ್ಸಾಗಿರಬೇಕು ಹಾಗೂ ಉಳಿದ ಹುದ್ದೆಗಳಿಗೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ಮೂವತ್ತೈದು ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ ಮೂವತ್ತೆಂಟು ವರ್ಷ ವಯಸ್ಸಾಗಿರಬೇಕು. ಇನ್ನೂ ವೇತನ ಎಷ್ಟು ಎಂದು ನೋಡುವುದಾದರೆ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರ ಹುದ್ದೆಗೆ ಮಾಸಿಕ 30,000 ರೂಪಾಯಿ, ಔಷಧಿ ವಿತರಕರ ಹುದ್ದೆಗೆ ಮಾಸಿಕ 14,350 ರೂಪಾಯಿ ಹಾಗೂ ಮಲ್ಟಿ ಪರ್ಪಸ್ ವರ್ಕರ್ ಹಾಗೂ ರೋಗ ಅಟೆಂಡೆಂಟ್ ಈ ಎರಡೂ ಹುದ್ದೆಗೆ ತಲಾ 10,300 ರೂಪಾಯಿ ಮಾಸಿಕ ವೇತನ ನೀಡಲಾಗುವುದು.
ಅಷ್ಟೇ ಅಲ್ಲದೆ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರ ಹುದ್ದೆಗೆ ಕನಿಷ್ಠ 3ವರ್ಷ ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿರಬೇಕು. ಸ್ತ್ರೀ ರೋಗ ಅಟೆಂಡೆಂಟ್ ಹುದ್ದೆಗಳ ಅಭ್ಯರ್ಥಿಗಳಿಗೆ ಆಯುಷ್ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿರಬೇಕು. ಇನ್ನೂ ಪ್ರಮುಖ ದಿನಾಂಕಗಳನ್ನು ನೋಡುವುದಾದರೆ, ಅರ್ಜಿ ಸಲ್ಲಿಸಲು ಆರಂಭದ ದಿನಾಂಕ 26/08/2021 ಆಗಿರುತ್ತದೆ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16/09/2021 ಆಗಿರುತ್ತದೆ. ಅರ್ಜಿ ಸಲ್ಲಿಸುವ ವಿಧಾನ ಹೇಗೆ ಎಂದು ನೋಡುವುದಾದರೆ, ಅಭ್ಯರ್ಥಿಗಳು ತಮ್ಮ ಬಯೋಡೇಟಾ , ಭಾವಚಿತ್ರ, ಧ್ರಡಿಕೃತ ಪ್ರಮಾಣ ಪತ್ರ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿಳಾಸ ಹೀಗಿದೆ.
ಜಿಲ್ಲಾ ಆಯುಷ್ ಅಧಿಕಾರಿಗಳ ಕಚೇರಿ, ಸಾಲುಮರದಮ್ಮ ದೇವಸ್ಥಾನದ ಎದುರು, ಕಡೂರು ರಸ್ತೆ ಚಿಕ್ಕಮಗಳೂರು ಈ ವಿಳಾಸಕ್ಕೆ ಕಳುಹಿಸಬೇಕು. ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದು. ದೂರವಾಣಿ ಸಂಖ್ಯೆ :- 08262-220722
ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430