ಮನೆಯಲ್ಲಿನ ಸೊಳ್ಳೆಗಳ ಕಾಟಕ್ಕೆ ಅಷ್ಟೇ ಅಲ್ಲ ಮಕ್ಕಳಿಗೂ ತುಂಬಾನೇ ಒಳ್ಳೇದು ಈ ಗಿಡದ ಬೇರು

0 11

ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ನೆರವಾಗುವ ಹಾಗೂ ಅವರು ಚಟುವಟಿಕೆಯಿಂದ ಇರಲು ಗಿಡಮೂಲಿಕೆಗಳ ಪಾಲು ಹಲವಾರು ಅದರಲ್ಲಿ ಸಂಜೆಯ ಬೇರು ಸಹ ಅತ್ಯುತ್ತಮ ಮನೆ ಮುದ್ದಾಗಿದೆ. ಬಜೆ ‘ಏರೇಸಿ’ ಕುಟುಂಬಕ್ಕೆ ಸೇರಿದ ಸಸ್ಯಮೂಲಿಕೆ. ಇದು ಸಾಮಾನ್ಯವಾಗಿ ಜೌಗು ಪ್ರದೇಶದಲ್ಲಿ ಬೆಳೆಯುತ್ತದೆ. ನೀರಿನಂಶ ಜಾಸ್ತಿ ಇರುವ ಕಡೆ ಬೆಳೆಯುತ್ತದೆ.

ಇದು ದೇಹಕ್ಕೆ ತುಂಬಾ ತಂಪು.ಇದು ನೀರಿನಾಸರೆ ಇರುವ ಕಡೆ ಬೆಳೆಯುವ ಸಸಿ. ಬೇರುಗಳಿಗೆ ಸುವಾಸನೆಯಿರುವುದು. ರುಚಿ ಖಾರವಾಗಿರುವಿದು. ಹೂಗಳು ಸಣ್ಣ ಸಣ್ಣದಾಗಿದ್ದು ತಿಳಿ ಹಸಿರಾಗಿರುವುವು. ಗ್ರಾಮವಾಸಿಗಳಿಗೆ, ಅಜ್ಜಿಯಂದಿಯರಿಗೆ ಚಿರಪರಿಚಿತ ಮೂಲಿಕೆ, ಸಣ್ಣ ಮಕ್ಕಳಿರುವ ಪ್ರತಿ ಮನೆಯಲ್ಲೂ ಬಜೆ ಇದ್ದೇ ಇರುತ್ತದೆ.ಹಾಗೂ ಇದು ಸೊಳ್ಳೆಗಳು ನಿವಾರಣೆಗೆ ಉಪಯುಕ್ತವಾಗಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮುಂದಿನ ಲೇಖನದಲ್ಲಿ ನೋಡೋಣ.

ಬಜೆಯನ್ನು ಸುಟ್ಟು ಭಸ್ಮವನ್ನು ಮಾಡಿ, ಅರ್ಧ ಚಮಚ ಭಸ್ಮಕ್ಕೆ ಸ್ವಲ್ಪ ಜೇನುತುಪ್ಪ ಸೇರಿಸಿ ದಿವಸಕ್ಕೆ 2 – 3 ವೇಳೆ ತಿನ್ನುವುದರಿಂದ ನೆಗಡಿ, ಕೆಮ್ಮು ಕಡಿಮೆಯಾಗುತ್ತದೆ.ಬಜೆಯನ್ನು ತೇಯ್ದು ತುಪ್ಪದೊಡನೆ ಕಲಸಿ ಮಕ್ಕಳಿಗೆ ತಿನ್ನಿಸುವುದರಿಂದ ವಾಕ್ ಶಕ್ತಿ, ಬುದ್ಧಿಶಕ್ತಿ ಮತ್ತು ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ.ಬಟ್ಟೆಯಲ್ಲಿ ಶೋಧಿಸಿದ ಬಜೆಯ ಚೂರ್ಣ 10ಗ್ರಾಂನಷ್ಟನ್ನು ದಿವಸಕ್ಕೊಮ್ಮೆ ಬೆಳಗ್ಗೆ ಬಿಸಿ ನೀರಿನಲ್ಲಿ ಅಥವಾ ಜೇನಿನಲ್ಲಾಗಲೀ ಇಟ್ಟು 40 ದಿನ ಸೇವಿಸಿದರೆ ಮೂರ್ಛೆ ಗುಣವಾಗುತ್ತದೆ.

ಬಜೆಯನ್ನು ಅರೆದು ಲೇಪಿಸುವುದರಿಂದ, ಸಂಧಿವಾತ ಮತ್ತು ಲಕ್ವ ಗುಣವಾಗುತ್ತದೆ.ಹಸಿ ಬಜೆಯ ರಸವನ್ನು ಕಿವಿಗೆ ಹಿಂಡುವುದರಿಂದ ಕಿವಿನೋವು ಕಡಿಮೆಯಾಗುತ್ತದೆ. ಬಜೆ, ನಾಗಕೇಸರಿ, ಹಿಪ್ಪಲಿ ಬೇರಿನ ಚೂರ್ಣಗಳನ್ನು ಸೇರಿಸಿ ಸೇವಿಸಿದರೆ ಸುಖ ಪ್ರಸವವಾಗುತ್ತದೆ. ಬಜೆ ಸೇವಿಸುವುದರಿಂದ ಜಂತುಹುಳುಗಳು ನಾಶವಾಗುತ್ತವೆ.ಬಜೆಯ ಕಷಾಯ ಸೇವನೆಯಿಂದ ಮೂತ್ರಕೋಶದ ಕಲ್ಲು ಕರಗಿ ಹೋಗುತ್ತದೆ. ಮೂತ್ರ ಬಂಧವೂ ನಿವಾರಣೆಯಾಗುತ್ತದೆ.

ಮಕ್ಕಳಲ್ಲಿ ಹಲ್ಲು ಹುಟ್ಟುವಾಗ ಜ್ವರ ಕಾಣಿಸಿಕೊಂಡಲ್ಲಿ ಬಜೆಯನ್ನು ಅರೆದು ತಿನ್ನಿಸುವುದರಿಂದ ಜ್ವರ ವಾಸಿಯಾಗುತ್ತದೆ.ಬಜೆ ಮತ್ತು ಸೈಂಧಲವಣ ಇವೆರಡನ್ನು ನೀರಿನೊಡನೆ ಕುಡಿಯುವುದರಿಂದ ಕಫ ವಾಂತಿಯಾಗಿ ಕೆಮ್ಮು ಶಮನವಾಗುತ್ತದೆ.ಸಂಜೆಯಾಗುತ್ತಿದ್ದಂತೆ ಸೊಳ್ಳೆಗಳು ಹಾಡುಗಳನ್ನು ಹಾಡುತ್ತಾ ರೂಮನ್ನು ಪ್ರವೇಶಿಸುತ್ತಿದ್ದ ಹಾಗೇ ನಾವು ಡ್ಯಾನ್ಸ್ ಮಾಡಲೇಬೇಕಾಗುತ್ತದೆ.

ಸೊಳ್ಳೆ ಸಹವಾಸದಿಂದ ಕಷ್ಟ ಪಡುವುದಕ್ಕಿಂತ ಅದನ್ನು ನಾಶ ಪಡಿಸುವುದೇ ನಮಗೆ ಉಳಿದಿರುವ ಮಾರ್ಗ. ಸೊಳ್ಳೆಯನ್ನು ನಾಶ ಮಾಡಲು ತುಂಬಾ ಕೆಮಿಕಲ್ ಬಳಸಿದರೆ ಅವುಗಳು ನಮ್ಮ ದೇಹಕ್ಕೆ ಸೇರಿ ನಮಗೆ ಮತ್ತಷ್ಟು ಅಪಾಯ ತರಬಹುದು. ಆದ್ದರಿಂದ ಸಂಜೆ ಬೇರನ್ನು ಸಂಜೆ ಸಮಯದಲ್ಲಿ ಮನೆಯಲ್ಲಿ ಇಟ್ಟು ಅದರ ವಾಸನೆ ಬರುವ ರೀತಿ ಹೊಗೆ ಹಾಕುವುದರಿಂದ ಸೊಳ್ಳೆಗಳ ನಿಯಂತ್ರಣ ಮಾಡಬಹುದು

Leave A Reply

Your email address will not be published.