ಬಳ್ಳಾರಿಯ ಕಿಷ್ಕಿಂಧೆಯಲ್ಲಿ ಅಂದಾಜು 1,200 ಕೋಟಿ ರೂಪಾಯಿ ವೆಚ್ಚದಲ್ಲಿ ವಿಶ್ವದ ಎತ್ತರದ ಹನುಮಾನ್ ಪ್ರತಿಮೆಯನ್ನು ನಿರ್ಮಾಣ ಮಾಡಲಾಗುತ್ತಿದೆ. ಇದರ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.

ರಾಮ ಭಕ್ತ ಹನುಮಂತ. ಶ್ರೀರಾಮನಿಗೆ ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಭೃಹತ್ ರಾ ಮಂದಿರ ನಿರ್ಮಾಣದ ಕೆಲಸ ಈಗಾಗಲೇ ಆರಂಭ ಆಗಿದೆ. ರಾಮನ ಭಂಟ ಹನುಮಂತ, ಆಂಜನೇಯ, ಕೇಸರಿ ನಂದನ, ವಾಯುಪುತ್ರ, ಆಂಜನೀಪುತ್ರ ಎಂಬೆಲ್ಲ ಇತ್ಯಾದಿ ಹೆಸರುಗಳಿಂದ ಕರೆಯಲ್ಪಡುವ ಹನುಮಂತನಿಗೆ ಸಹ ಅವನ ಜನ್ಮ ಭೂಮಿಯಲ್ಲಿ ವಿಶ್ವದ ಅತೀ ಎತ್ತರದ ಹನುಮಂತನ ಮೂರ್ತಿಯನ್ನು ನಿರ್ಮಾಣ ಮಾಡಲು ಯೋಚಿಸಲಾಗಿದೆ. ಹನುಮಂತನ ಜನ್ಮ ಭೂಮಿಯಾದ ಕಿಷ್ಕಿಂದೆ ಇರುವುದು ಬಳ್ಳಾರಿ ಜಿಲ್ಲೆಯಲ್ಲಿ. ಇಲ್ಲಿ 215 ಮೀಟರ್ ಎತ್ತರದ ವಿಶ್ವದ ಅತೀ ಎತ್ತರದ ಹನುಮಂತನ ಪ್ರತಿಮೆಯನ್ನು ಶೀಘ್ರವೇ ನಿರ್ಮಿಸಲು ಇದರ ಕುರಿತಾದಂತಹ ಯೋಜನೆಗಳನ್ನು ಈಗಾಗಲೇ ರೂಪಿಸಲಾಗಿದೆ ಎಂದು ಹನುಮಂತ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ , ಅಧ್ಯಕ್ಷ ಸ್ವಾಮಿ ಗೋವಿಂದ ಆನಂದ ಸರಸ್ವತಿ ಸ್ವಾಮೀಜಿ ತಿಳಿಸಿದ್ದಾರೆ. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಈ ಕುರಿತು ಮಾತನಾಡಿದ ಅವರು ಸರಿಸುಮಾರು 1,200 ಕೋಟಿ ರೂಪಾಯಿಗಳ ಅಂದಾಜು ವೆಚ್ಚದಲ್ಲಿ ಹನುಮಂತನ ಮೂರ್ತಿಯನ್ನು ನಿರ್ಮಿಸಲಾಗುತ್ತಿದೆ.

ಇದು ವಿಶ್ವದಲ್ಲೇ ಅತ್ಯಂತ ಎತ್ತರದ ಹನುಮಂತನ ಪ್ರತಿಮೆಯಾಗಲಿದೆ. ವಿಶ್ವದ ಅತೀ ಎತ್ತರದ ಹನುಮಂತನ ಮೂರ್ತಿಯನ್ನು ಬಳ್ಳಾರಿಯ ಪಂಪಾಪುರ ಕಿಷ್ಕಿಂಧೆಯಲ್ಲಿ ನಿರ್ಮಿಸಲಾಗುತ್ತಿದೆ. ರಾಷ್ಟ್ರಾದ್ಯಂತ ರಥಯಾತ್ರೆ ಮಾಡುವ ಮೂಲಕ ಪ್ರತಿಮೆ ನಿರ್ಮಾಣಕ್ಕೆ ಹಣ ಸಂಗ್ರಹಿಸಲಾಗುವುದು ಎಂದು ಹನುಮಂತ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ , ಅಧ್ಯಕ್ಷ ಸ್ವಾಮಿ ಗೋವಿಂದ ಆನಂದ ಸರಸ್ವತಿ ಸ್ವಾಮೀಜಿ ಅವರು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ರಾಮಜನ್ಮಭೂಮಿಯಲ್ಲಿ ರಥ ನಿರ್ಮಾಣದ ಕುರಿತು ಮಾತನಾಡಿರುವ ಅವರು, ರಾಮಜನ್ಮ ಭೂಮಿಯಲ್ಲಿ ಸುಮಾರು 2 ಕೋಟಿ ರೂ.ವೆಚ್ಚದಲ್ಲಿ 80 ಅಡಿ ಎತ್ತರದ ರಥ ನಿರ್ಮಾಣ ಮಾಡಲಾಗುತ್ತಿದೆ. ಇನ್ನೆರಡು ವರ್ಷದಲ್ಲಿ ರಥ ನಿರ್ಮಾಣವಾಗಲಿದೆ ಎಂದು ಸಹ ತಿಳಿಸಿದ್ದಾರೆ. ಈ ತಿಂಗಳ ಆರಂಭದಲ್ಲಿ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಬೋನೊ ವಿನ್ಯಾಸದ ಕಲ್ಪನೆಗಳನ್ನು ತಿಳಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಇದನ್ನು ರಾಮ ಮಂದಿರ ನಿರ್ಮಾಣದ ಅಂತಿಮ ಮಾಸ್ಟರ್ ಪ್ಲಾನ್‍ನಲ್ಲಿ ಸೇರಿಸಿಕೊಳ್ಳಲಾಗುವುದು ಎಂದು ಟ್ರಸ್ಟ್ ಹೇಳಿದೆ. ಧಾರ್ಮಿಕ ಯಾತ್ರೆ, ಆಚರಣೆಗಳು, ಸಂಸ್ಕೃತಿ ಹಾಗೂ ವೈಜ್ಞಾನಿಕ ಯೋಜನೆಗಳ ಪ್ರಮುಖ ಅಂಶಗಳ ಆಲೋಚನೆಗಳನ್ನು ತಿಳಿಸುವಂತೆ ಹೇಳಿದೆ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!