ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಒಂದಲ್ಲ ಒಂದು ಉದ್ದೇಶಕ್ಕೆ ಸಾಲ ಮಾಡುತ್ತಾರೆ. ಕೆಲವು ಬಾರಿ ಸರ್ಕಾರದಿಂದ ಸಾಲ ಮನ್ನಾ ಆಗುತ್ತದೆ. ಈ ಬಾರಿ ಲೋಕಸಭಾ ಚುನಾವಣೆ ನಡೆಯುತ್ತಿದ್ದು ಈಗಾಗಲೆ ಒಂದು ಹಂತದ ಮತದಾನ ಪ್ರಕ್ರಿಯೆ ಮುಗಿದಿದೆ. ಎರಡು ಪಕ್ಷದವರು ಬಿರುಸಿನಿಂದ ಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದವರು ರೈತರಿಗೆ ಒಂದು ಹೊಸ ಭರವಸೆ ನೀಡಿದ್ದಾರೆ ಅದೇನೆಂದು ಈ ಲೇಖನದಲ್ಲಿ ನೋಡೋಣ

ಬ್ಯಾಂಕ್ ಹಾಗೂ ಸಂಘದಲ್ಲಿ ಸಾಲ ಮಾಡಿದವರಿಗೆ ಒಳ್ಳೆಯ ಸುದ್ದಿಯೊಂದಿದೆ. ಲೋಕಸಭಾ ಚುನಾವಣಾ ಪ್ರಚಾರ ಬಹಳ ಬಿರುಸಿನಿಂದ ಸಾಗುತ್ತಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ ಏಪ್ರಿಲ್ 26 ಹಾಗೂ ಮೇ 7 ರಂದು 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 26 ರಂದು ಈಗಾಗಲೆ ಒಂದು ಹಂತದ ಮತದಾನ ನಡೆದಿದೆ. ಮತದಾನದ ಪ್ರಚಾರ ಬಿರುಸಿನಿಂದ ನಡೆದಿದೆ. ಆಯಾ ಪಕ್ಷಗಳ ನಾಯಕರು ತಮ್ಮ ಪ್ರಣಾಳಿಕೆಯ ಭರವಸೆಗಳನ್ನು ಜನರಿಗೆ ನೀಡುತ್ತಿದ್ದಾರೆ. ಅದೆ ರೀತಿ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಭರವಸೆಯ ಯೋಜನೆಗಳ ಪ್ರಣಾಳಿಕೆ ನೀಡಿ ಕಾಂಗ್ರೆಸ್ ಸರ್ಕಾರ ಹೆಚ್ಚು ಮತ ಗಳಿಸಿತ್ತು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ರೈತರು ಮಾಡಿದ ಸಾಲವನ್ನು ಮನ್ನಾ ಮಾಡುವುದಾಗಿ ಹೇಳಿದ್ದಾರೆ. ದೇಶದ ಭವಿಷ್ಯ ರೂಪಿಸಲು ಜನರ ಸಹಕಾರ ಬಹಳ ಮುಖ್ಯವಾಗಿದೆ, ಯಾವ ಪಕ್ಷಕ್ಕೆ ಅಧಿಕಾರ ಕೊಟ್ಟರೆ ದೇಶದ ಹಿತ ಕಾಪಾಡುತ್ತದೆ ಎಂಬುದನ್ನು ಜನತೆ ನಿರ್ಧರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜನರನ್ನು ಕುರಿತು ಹೇಳಿದರು. ಶ್ರೀರಾಮ ಮಾರ್ಕೆಟ್ ಮೈದಾನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಪರ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಸಿದ್ದರಾಮಯ್ಯ ಮಾತನಾಡಿದರು.

ನಮ್ಮ ದೇಶದಲ್ಲಿ ಬಡವರಿಗೆ ಬೆಂಬಲ ನೀಡುತ್ತಿರುವ ಒಂದೆ ಒಂದು ಸರ್ಕಾರ ಕಾಂಗ್ರೆಸ್ ಸರ್ಕಾರ. ಬಡವರು, ಹಿಂದುಳಿದವರು ಅಲ್ಪಸಂಖ್ಯಾತರ ಪರ ಮೋದಿ ಸರ್ಕಾರ ಯಾವತ್ತಿಗೂ ಕೆಲಸ ಮಾಡಿಲ್ಲ ಎಂದು ಸಿದ್ದರಾಮಯ್ಯ ಬಿಜೆಪಿ ಪಕ್ಷದ ವಿರುದ್ಧ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೇಳಿದ ಮಾತಿನಂತೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2000 ರೂಪಾಯಿ ಖಾತೆಗೆ ಹಾಕುವ ಮೂಲಕ ಹೇಳಿದಂತೆ ನಡೆದಿದ್ದಾರೆ. ಈಗಿನ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬ್ಯಾಂಕ್ ಅಥವಾ ಸಂಘದಲ್ಲಿ ಸಾಲ ಮಾಡಿದರೆ ಅದನ್ನು ಮನ್ನಾ ಮಾಡುವುದಾಗಿ ಸರ್ಕಾರ ಹೇಳಿದೆ. ಜೂನ್ ತಿಂಗಳಲ್ಲಿ ಮತದಾನದ ಫಲಿತಾಂಶ ಹೊರಬೀಳಲಿದೆ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಕಾದು ನೋಡೋಣ.

Leave a Reply

Your email address will not be published. Required fields are marked *