ಭಾರತೀಯ ರೈತರ ರಸಗೊಬ್ಬರ ಸಹಕಾರ ನಿಗಮವು (IFFCO) ಕೃಷಿ ಪದವೀಧರ ತರಬೇತಿ (ಎಜಿಟಿ) ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ.
ಮೊದಲಿಗೆ ಭಾರತೀಯ ರೈತರ ರಸಗೊಬ್ಬರ ಸಹಕಾರಿ ಇಲಾಖೆ ಹೊರಡಿಸಿರುವ ವೆಬ್ಸೈಟ್ನ ಮೇಲೆ ಕ್ಲಿಕ್ ಮಾಡಿದಾಗ ಅಲ್ಲಿ ಅರ್ಜಿ ಓಪನ್ ಆಗುತ್ತದೆ. ಈ ಹುದ್ದೆಗಳಿಗೆ ಬಿ.ಎಸ್ಸಿ (ಕೃಷಿ), ಐಟಿಐ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:೨೦೨೧ ರ ಅನ್ವಯ ಗರಿಷ್ಟ ೨೮ ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆ ಇದೆ.ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ವಯೋಮಿತಿ ಇದೆ.
ಈ ಹುದ್ದಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ೩೭೦೦೦/-ರೂ ವೇತನವನ್ನು ನೀಡಲಾಗುವುದು. ಆಯ್ಕೆ ಪ್ರಕ್ರಿಯೆ:ಅಭ್ಯರ್ಥಿಗಳನ್ನು ದೈಹಿಕ ದಕ್ಷತೆ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ. ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.iffco.in/ ಗೆ ಹೋಗಿ ಕೇಳಲಾಗಿರುವ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.ಅರ್ಜಿಸಲ್ಲಿಸಲು ಆರಂಭದ ದಿನಾಂಕ ಏಪ್ರಿಲ್ 21 2021, ಕೊನೆಯ ದಿನಾಂಕ ಮೇ 10 2021