ಬೆಸ್ಕಾಂನಲ್ಲಿ ಅಗತ್ಯ ಇರುವ ವಿವಿಧ ವಿಭಾಗಗಳ ಪದವೀಧರ ಮತ್ತು ಡಿಪ್ಲೊಮ ಅಪ್ರೆಂಟಿಸ್‌ ಹುದ್ದೆಗಳನ್ನು ನೇಮಕ ಮಾಡಲು ಅರ್ಜಿ ಆಹ್ವಾನ ಮಾಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹೇಗೆ ಅರ್ಜಿ ಸಲ್ಲಿಸಬೇಕು ಎಂಬಿತ್ಯಾದಿ ವಿವರಗಳನ್ನು ಈ ಲೇಖನದ ಮೂಲಕ ತಿಳಿಯಬಹುದು.

ಒಟ್ಟು 400 ಹುದ್ದೆಗಳು ಖಾಲಿ ಇದ್ದು, ಗ್ರಾಜುಯೇಟ್‌ ಅಪ್ರೆಂಟಿಸ್‌ಗಳ ವಿವರ ಈ ರೀತಿಯಾಗಿದೆ. ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ 143, ಇಲೆಕ್ಟ್ರಾನಿಕ್ಸ್ ಮತ್ತು ಕಂಮ್ಯೂನಿಕೇಷನ್ ಇಂಜಿನಿಯರಿಂಗ್ 116, ಕಂಪ್ಯೂಟರ್ ಸೈನ್ಸ್‌ ಮತ್ತು ಇಂಜಿನಿಯರಿಂಗ್ 36 ಇನ್‌ಫಾರ್ಮೇಷನ್‌ ಸೈನ್ಸ್‌ ಮತ್ತು ಇಂಜಿನಿಯರಿಂಗ್ 20, ಸಿವಿಲ್ ಇಂಜಿನಿಯರಿಂಗ್ 05, ಇನ್‌ಸ್ಟ್ರುಮೆಂಟೇಶನ್ ಟೆಕ್ನಾಲಜಿ ಇಂಜಿನಿಯರಿಂಗ್ 05 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನ ಮಾಡಲಾಗಿದೆ. ಇನ್ನುಳಿದ ಟೆಕ್ನೀಷಿಯನ್ (ಡಿಪ್ಲೊಮ) ಅಪ್ರೆಂಟಿಸ್‌ ಹುದ್ದೆಗಳು, ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್‌ ಇಂಜಿನಿಯರಿಂಗ್ 55 ಹುದ್ದೆಗಳು ,ಇಲೆಕ್ಟ್ರಾನಿಕ್ಸ್‌ ಮತ್ತು ಕಮ್ಯುನಿಕೇಷನ್‌ ಇಂಜಿನಿಯರಿಂಗ್10 ಹುದ್ದೆಗಳು, ಕಂಪ್ಯೂಟರ್ ಸೈನ್ಸ್‌ ಮತ್ತು ಇಂಜಿನಿಯರಿಂಗ್ 10 ಹುದ್ದೆಗಳು ಈ ರೀತಿಯಾಗಿ ಒಟ್ಟೂ 400 ಹುದ್ದೆಗಳು ಖಾಲಿ ಇವೆ.

ಇಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗಮನಿಸಬೇಕಾದ ಪ್ರಮುಖ ದಿನಾಂಕಗಳು ಎಂದರೆ, ಅರ್ಜಿ ಸಲ್ಲಿಸಲು ಆರಂಭದ ದಿನಾಂಕ:- 15/07/2021 ಆಗಿರುತ್ತದೆ. ಬೆಸ್ಕಾಂ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 05/08/2021ಆಗಿರುವುದು.NATS ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 30/07/2021ಆಗಿರುತ್ತದೆ. ಶಾರ್ಟ್‌ಲಿಸ್ಟ್‌ ಆದ ಅಭ್ಯರ್ಥಿಗಳ ಹೆಸರಿನ ಪಟ್ಟಿ ಬಿಡುಗಡೆ ಮಾಡುವ ದಿನಾಂಕ:- 10/08/2021 ಆಗಿರುತ್ತದೆ. ಇನ್ನೂ ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹಾಗೆಯೇ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹೊಂದಿರಬೇಕಾದ ವಿದ್ಯಾರ್ಹತೆ ಡಿಪ್ಲೊಮ / ಬಿಇ / ಬಿ.ಟೆಕ್‌ ವಿದ್ಯಾರ್ಹತೆಯನ್ನು ಸಂಬಂಧಿಸಿದ ಆಯಾ ವಿಭಾಗಗಳಲ್ಲಿ ಪಾಸ್‌ ಮಾಡಿರಬೇಕು.

ಹಾಗೆಯೇ ಹುದ್ದೆಗಳ ನೇಮಕಾತಿ ಆಗುವುದು ಕೂಡಾ ರಾಜಧಾನಿ ಬೆಂಗಳೂರಿನಲ್ಲಿ. ಆಯ್ಕೆ ಆದ ಅಭ್ಯರ್ಥಿಗಳಿಗೆ ಪ್ರತೀ ತಿಂಗಳು 5ಸಾವಿರದಿಂದ ಏಳು ಸಾವಿರದವರೆಗೆ ವೇತನ ನೀಡಲಾಗುವುದು. ಅಭ್ಯರ್ಥಿಗಳ ವಯಸ್ಸು ಹಾಗೂ ನಿವೃತ್ತಿ ಇದೆಲ್ಲದ ಬಗ್ಗೆ ಬೆಸ್ಕಾಂ ವೆಬ್ಸೈಟ್ ನಲ್ಲಿ ಮಾಹಿತಿ ತಿಳಿಯಬಹುದು. ಇನ್ನೂ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ತುಂಬಬೇಕಾದ ಅಗತ್ಯತೆ ಇರುವುದಿಲ್ಲ. ಇನ್ನೂ ಆಯ್ಕೆ ಪ್ರಕ್ರಿಯೆ ಹೇಗೆ ಎಂದು ನೋಡುವುದಾದರೆ , ನಿಮ್ಮ ದಾಖಲಾತಿಗಳು ಹಾಗೂ ಪರೀಕ್ಷೆಯ ನಡೆಸಿ ಅದರಲ್ಲಿ ಪಡೆದ ಅಂಕಗಳ ಮೂಲಕ ಆಯ್ಕೆ ಮಾಡಲಾಗುತ್ತದೆ. ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವಿಡಿಯೋ ನೋಡಿ ಮಾಹಿತಿ ಪಡೆಯಬಹುದು. ವೆಬ್‌ಸೈಟ್‌ Notification-BESCOM-Graduate-Diploma-Apprentice

ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಂತ್ರಿಕ್ ರಾಘವೇಂದ್ರ ಭಟ್
ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಮತ್ತು ನಿಮ್ಮ ಗುಪ್ತ ಸಮಸ್ಯೆಗಳಿಗೆ ಹಾಗೂ ಮನ ಇಚ್ಛಾಕಾರ್ಯ ನೆರವೇರಿಸಲು ಮತ್ತು ಸುಲಭ ಪರಿಹಾರಕ್ಕಾಗಿ ಇಂದೆ ಕರೆ ಮಾಡಿ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ತೊಂದರೆ, ವಿವಾಹದಲ್ಲಿ ತೊಂದರೆ ಸ್ತ್ರೀ-ಪುರುಷ ಪ್ರೇಮ ವಿಚಾರ, ಇಷ್ಟಪಟ್ಟವರು ನಿಮ್ಮಂತೆ ಆಗಲು ಹಣಕಾಸಿನ ತೊಂದರೆ, ಆರೋಗ್ಯ ಸಮಸ್ಯೆ ಉದ್ಯೋಗ, ವ್ಯವಹಾರದಲ್ಲಿ ತೊಂದರೆ, ಅತ್ತೆಸೊಸೆ ತೊಂದರೆ ಡೈವರ್ಸ್ ಪ್ರಾಬ್ಲಮ್ ಮಕ್ಕಳು ನಿಮ್ಮ ಮಾತು ಕೇಳಲು ಶತ್ರು ಬಾಧೆ, ಮಾಟಮಂತ್ರ ತಡೆ ಇನ್ನು ನಿಮ್ಮ ಜೀವನದ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶ್ರೀ ಅಂಬಾ ಭವಾನಿ ಜ್ಯೋತಿಷ್ಯಾಲಯ ಪಂಡಿತ್ ರಾಘವೇಂದ್ರ ಭಟ್ ಮೊಬೈಲ್ ನಂಬರ್ 9448001466

Leave a Reply

Your email address will not be published. Required fields are marked *