ಸ್ನೇಹಿತರೆ ನಾವು ನಿಮಗಾಗಿ ಒಂದು ಹೊಸ ಉದ್ಯೋಗದ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇವೆ. ಅದುವೇ ಹೆಚ್ಚು ಪ್ರಸಿದ್ಧಿಯನ್ನು ಪಡೆದುಕೊಂಡಿರುವಂತಹ ಬಿಸ್ಲೇರಿ ಕಂಪನಿಯಲ್ಲಿ ನೇಮಕಾತಿ ನಡೆಯುತ್ತಿದೆ. ನೀವು ಖಾಸಗಿ ಕ್ಷೇತ್ರದಲ್ಲಿ ಉದ್ಯೋಗವನ್ನು ಮಾಡುವುದಕ್ಕೆ ಬಯಸಿದರೆ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಅರ್ಜಿಯನ್ನು ಸಲ್ಲಿಸುವುದಕ್ಕೆ ಎಷ್ಟು ವಿದ್ಯಾರ್ಹತೆಯನ್ನು ಹೊಂದಿರಬೇಕು ಮತ್ತು ಆಯ್ಕೆ ಪ್ರಕ್ರಿಯೆ ಯಾವ ರೀತಿ ನಡೆಯುತ್ತದೆ ಎಂಬುದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ತಿಳಿಸಿಕೊಡುತ್ತೇವೆ.

ಬಿಸ್ಲೇರಿ ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿಸುವ ಅಗತ್ಯವಿಲ್ಲ ಆಯ್ಕೆ ಮಾಡಿಕೊಳ್ಳುವ ಸಮಯದಲ್ಲಿ ಯಾವುದೇ ರೀತಿಯ ಲಿಖಿತ ಪರೀಕ್ಷೆ ಗಳು ಇರುವುದಿಲ್ಲ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳ ಆಧಾರದ ಮೇಲೆ ಮೂವತ್ತು ಸಾವಿರದವರೆಗೂ ವೇತನವನ್ನು ನೀಡಲಾಗುತ್ತದೆ. ಈ ಒಂದು ಹುದ್ದೆಗೆ ಪುರುಷ ಮತ್ತು ಮಹಿಳೆಯರು ಯಾರು ಬೇಕಾದರೂ ಅರ್ಜಿಯನ್ನು ಸಲ್ಲಿಸಬಹುದು. ಬಿಸ್ಲೇರಿ ಕಂಪನಿಯಲ್ಲಿ ಎರಡು ಸಾವಿರದ ಇಪ್ಪತ್ತೊಂದಕ್ಕೆ ಸಂಬಂಧಿಸಿದಂತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಆನ್ಲೈನ್ ಮೂಲಕ ತಮ್ಮ ಅರ್ಜಿ ಸಲ್ಲಿಸಬೇಕು.

ಬಿಸ್ಲರಿ ಕಂಪನಿಯಲ್ಲಿ ಕಸ್ಟಮರ್ ಕೇರ್, ಹಣಕಾಸು ಮತ್ತು ಲೆಕ್ಕ ವಿಭಾಗದಲ್ಲಿ, ಎಚ್ಆರ್, ಐಟಿ, ಮಾರ್ಕೆಟಿಂಗ್ ಉತ್ಪಾದನಾ ಕ್ಷೇತ್ರ, ಗುಣಮಟ್ಟ ಪರಿಶೀಲನೆ, ಮರಾಟ ಮತ್ತು ಸಂಗ್ರಹ ಕೇಂದ್ರದಲ್ಲಿ, ಟೆಕ್ನಿಕಲ್ ಮತ್ತು ಇಂಜಿನಿಯರಿಂಗ್, ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಆನ್ ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬೇಕು. ಹತ್ತನೇ ತರಗತಿ ಪಿಯುಸಿ ಪದವಿ ಶಿಕ್ಷಣವನ್ನು ಪಡೆದಿರುವಂತವರು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಹದಿನೆಂಟು ವರ್ಷದಿಂದ ಮೂವತ್ತು ವರ್ಷದ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಸ್ಲೇರಿ ಆಫೀಸಿಯಲ್ ವೆಬ್ಸೈಟ್ನಲ್ಲಿ ತಮ್ಮ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯಲ್ಲಿ ನಿಮ್ಮ ಹೆಸರು ಮೊಬೈಲ್ ನಂಬರ್ ಮೇಲ್ ಐಡಿ ಜೊತೆಗೆ ನೀವು ಯಾವ ವಿಭಾಗದಲ್ಲಿ ಕೆಲಸ ಮಾಡುವುದಕ್ಕೆ ಇಚ್ಛಿಸುತ್ತೀರಿ ಆ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು ನಿಮಗೆ ಅನುಭವವಿದ್ದಲ್ಲಿ ಅದನ್ನು ನಮೂದಿಸಬೇಕು. ಜೊತೆಗೆ ಅಲ್ಲಿ ಕೇಳುವ ಸಂಪೂರ್ಣವಾದ ಮಾಹಿತಿಯನ್ನು ತುಂಬಿ ನಿಮ್ಮ ಅರ್ಜಿಯನ್ನು ಸಲ್ಲಿಸಬೇಕು.

ನೀವು ಕೂಡ ಈ ಒಂದು ಬಿಸ್ಲೇರಿ ಕಂಪನಿಯ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಮೂಲಕ ಕೆಲಸವನ್ನು ಪಡೆದುಕೊಳ್ಳಬಹುದಾಗಿದೆ. ಅಭ್ಯರ್ಥಿಗಳಿಗೆ ಫೋನ್ ಕರೆ ಮಾಡುವ ಮೂಲಕ ಸಂದರ್ಶನವನ್ನು ತೆಗೆದುಕೊಳ್ಳಲಾಗುತ್ತದೆ. ಈ ಮಾಹಿತಿಯನ್ನು ನೀವು ತಿಳಿದುಕೊಳ್ಳುವುದರ ಜೊತೆಗೆ ನಿಮ್ಮ ಪರಿಚಿತರೊಂದಿಗೆ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Leave a Reply

Your email address will not be published. Required fields are marked *