ಬಿಪಿಎಲ್ ಪಡಿತರ ಕಾರ್ಡ್ ಹೊಂದಿರುವವರಿಗೆ ಸರ್ಕಾರದಿಂದ ಉಚಿತ ಅಕ್ಕಿ ಕೊಡುತ್ತಾರೆ. ನಮ್ಮ ರಾಜ್ಯದಲ್ಲಿ ಹೆಚ್ಚು ಬಡವರಿದ್ದು ಅವರು ಉಪವಾಸ ಇರಬಾರದು ಎಂದು ಅಕ್ಕಿ ಕೊಡಲಾಗುತ್ತದೆ ಆದರೆ ಕೆಲವರು ಅದನ್ನು ದುರುಪಯೋಗ ಮಾಡಿಕೊಳ್ಳುತ್ತಾರೆ ಆದ್ದರಿಂದ ಅವರಿಗೆ ಒಂದು ಎಚ್ಚರಿಕೆ ನೀಡಲಾಗಿದೆ. ಆಹಾರ ಇಲಾಖೆಯ ಎಚ್ಚರಿಕೆ ಹಾಗೂ ಹೊಸದಾಗಿ ರೇಷನ್ ಕಾರ್ಡ ಬೇಕಾದವರು ಏನು ಮಾಡಬೇಕು ಎಂಬ ರೇಷನ್ ಕಾರ್ಡ್ ಸಂಬಂಧಿತ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಯೋಣ.
ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯನ್ನು ಕೊಡಲಾಗುತ್ತದೆ. ಈ ಯೋಜನೆಯನ್ನು ಜಾರಿಗೆ ತಂದಿರುವುದು ಬಡವರಿಗೆ ಸಹಾಯವಾಗಲಿದೆ ಆದರೆ ಬಿಪಿಎಲ್ ಕಾರ್ಡುದಾರರು ತಮಗೆ ಬಂದ ಅಕ್ಕಿಯನ್ನು ಹಣದ ಆಸೆಗೆ ಹೆಚ್ಚಿನ ಹಣಕ್ಕೆ ಮಾರಾಟ ಮಾಡಿ ಸಿಕ್ಕಿಬಿದ್ದರೆ ಫಲಾನುಭವಿಗಳು ಹೊಂದಿರುವ ರೇಷನ್ ಕಾರ್ಡುಗಳನ್ನು ರದ್ದು ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸಚಿವರಾದ ಕೆ. ಗೋಪಾಲ ಆದೇಶ ಹೊರಡಿಸಿದ್ದಾರೆ.
ನ್ಯಾಯಬೆಲೆ ಅಂಗಡಿಯಲ್ಲಿ ಉಚಿತವಾಗಿ ನೀಡುವ ಅಕ್ಕಿಯನ್ನು ಪಡಿತರದಾರರು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಸಮಯದಲ್ಲಿ ಸಿಕ್ಕಿಬಿದ್ದರೆ ಅವರ ರೇಷನ್ ಕಾರ್ಡ್ ನ್ನು 6 ತಿಂಗಳ ಕಾಲ ಅಮಾನತು ಮಾಡಿ ಹಾಗೂ ಮಾರುಕಟ್ಟೆ ದರದಲ್ಲಿ ಅಕ್ಕಿಯನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗುತ್ತದೆ ಎಂದು ಆಹಾರ ಇಲಾಖೆಯ ಆದೇಶದಲ್ಲಿ ಎಚ್ಚರಿಕೆ ನೀಡಿದೆ. ಕರ್ನಾಟಕ ರಾಜ್ಯದಲ್ಲಿ 1,17,1012 ಬಿಪಿಎಲ್ ಕಾರ್ಡುಗಳಿವೆ, 10,92,580 ಅಂತ್ಯೋದಯ ಕಾರ್ಡುಗಳಿವೆ, 21,05,000 ಎಪಿಎಲ್ ಕಾರ್ಡುಗಳಿವೆ ಇವೆಲ್ಲವೂ ಸೇರಿ ಒಟ್ಟು 1,48,98,592 ಕಾರ್ಡಗಳಿವೆ.
ಪ್ರತಿ ತಿಂಗಳು 19,972 ನ್ಯಾಯ ಬೆಲೆ ಅಂಗಡಿಗಳಿಂದ ಪ್ರತಿ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದ ಸದಸ್ಯನಿಗೆ 5 ಕೆಜಿ ಅಕ್ಕಿ ಹಾಗೂ ಪ್ರತಿ ಕಾರ್ಡ್ ಗೆ 2 ಕೆಜಿ ಗೋಧಿಯನ್ನು ನೀಡಲಾಗುತ್ತದೆ. ಆದ್ದರಿಂದ ಪಡಿತರ ಚೀಟಿದಾರರು ಪಡಿತರ ಆಹಾರ ಧಾನ್ಯವನ್ನು ಮಾರಾಟ ಮಾಡಿ ಸಿಕ್ಕಿಬಿದ್ದರೆ ರೇಷನ್ ಕಾರ್ಡ್ 6 ತಿಂಗಳುಗಳ ಕಾಲ ಅಥವಾ ಶಾಶ್ವತವಾಗಿ ರದ್ದಾಗಲಿದೆ ಹಾಗೂ ದಂಡ ಕಟ್ಟಬೇಕಾಗುತ್ತದೆ. ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವವರಿಗೆ ರಾಜ್ಯ ಸರ್ಕಾರ ಒಳ್ಳೆಯ ಸುದ್ದಿ ನೀಡಿದೆ. ಗ್ರಾಮ ಪಂಚಾಯತಿಯ ಚುನಾವಣೆ ನಡೆದ ನಂತರ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ.ಗೋಪಾಲ ಅವರು ಮಾಹಿತಿಯನ್ನು ನೀಡಿದ್ದಾರೆ.
ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಅವರು ಕೊರೋನ ಹಿನ್ನಲೆಯಲ್ಲಿ ಕಳೆದ ವರ್ಷ ಸಲ್ಲಿಕೆಯಾಗಿದ್ದ 1,00,088 ಅರ್ಜಿಗಳ ವಿಲೇವಾರಿ ಕ್ರಮ ಕೈಗೊಳ್ಳಲಾಗಿದೆ, ಅಧಿಕಾರಿಗಳು ಮನೆಗೆ ಬಂದು ಪರಿಶೀಲನೆ ನಡೆಸಬೇಕಾಗಿದೆ. ತಾತ್ಕಾಲಿಕವಾಗಿ ಈ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿದೆ. ಚುನಾವಣೆ ನಂತರ ಹೊಸದಾಗಿ ಪಡಿತರ ಚೀಟಿಗೆ ಸಲ್ಲಿಕೆಯಾದ ಅರ್ಜಿಗಳ ವಿಲೇವಾರಿಯನ್ನು ಮಾಡಲಾಗುವುದು ಹಾಗೂ ಹೊಸದಾಗಿ ಅರ್ಜಿಗಳನ್ನು ಆಹ್ವಾನಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಈ ಮಾಹಿತಿಯನ್ನು ಎಲ್ಲ ರೇಷನ್ ಕಾರ್ಡ್ ಹೊಂದಿರುವವರಿಗೆ ತಪ್ಪದೇ ತಿಳಿಸಿ.