Canara Bank Recruitment 2023: ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಹಲವು ಹುದ್ದೆಗಳ ನೇಮಕಾತಿ

0 603

Canara Bank Recruitment 2023: ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಕೆನರಾ ಬ್ಯಾಂಕ್ ಇದೀಗ ನೇಮಕಾತಿ ಅಧಿಸೂಚನೆಯನ್ನ ಹೊಸದಾಗಿ ಬಿಡುಗಡೆ ಮಾಡಿದ್ದು ಅರ್ಹ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಹಣಕಾಸು ಸುರಕ್ಷತಾ ಸಲಹೆಗಾರರ ಹುದ್ದೆಗಳಿಗೆ ಅರ್ಜಿಯನ್ನ ಆಹ್ವಾನಿಸಿದ್ದು ಇತ್ತೀಚಿಗಷ್ಟೇ ಕೆನರಾ ಬ್ಯಾಂಕ್ ಅಧಿಕಾರಿಗಳು ಆಫ್ಲೈನ್ ಮೋಡ್ ಮೂಲಕ ಈ ಪೋಸ್ಟ್ಗಳನ್ನ ಭರ್ತಿ ಮಾಡಲು ಅಧಿಸೂಚನೆಯನ್ನು ಪ್ರಕಟಿಸಿದ್ದಾರೆ.

ಸಂಸ್ಥೆಯ ಹೆಸರು :ಕೆನರಾ ಬ್ಯಾಂಕ್
ಅಧಿಕೃತ ವೆಬ್ಸೈಟ್:canarabank.com ಸಂಬಳ : ಕೆನರಾ ಬ್ಯಾಂಕ್ ನಿಯಮಗಳ ಪ್ರಕಾರ
ಹುದ್ದೆಯ ಹೆಸರು: ಆರ್ಥಿಕ ಸುರಕ್ಷತಾ ಸಲಹೆಗಾರರು
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಸುವ ಮೋಡ್: ಆಫ್ ಲೈನ್

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು. ಈ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಲು ಕೆನರಾ ಬ್ಯಾಂಕ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ ವಯಸ್ಸು 62 ವರ್ಷಗಳಿಗಿಂತ ಕಡಿಮೆ ಇರಬೇಕು ಅಷ್ಟೇ ಅಲ್ಲದೆ ಇದಕ್ಕೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನಡೆಯುತ್ತದೆ.

Leave A Reply

Your email address will not be published.