ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯಾವ ಯಾವ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ, ವಿದ್ಯಾರ್ಹತೆ ಏನು, ವಯಸ್ಸಿನ ಮಿತಿ ಅರ್ಜಿ ಸಲ್ಲಿಸುವ ದಿನಾಂಕ ಎಲ್ಲವನ್ನು ಒಂದೊಂದಾಗಿ ತಿಳಿಯೋಣ ಬನ್ನಿ. ಈ ಅಧಿಸೂಚನೆ ಬಿಡುಗಡೆ ಆಗಿರುವುದು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಡ್ಯದಿಂದ, ಇನ್ನು ಜವಾನ ( ಪ್ಯೂನ್ ) ಪೋಸ್ಟ್’ಗೆ, ಒಟ್ಟು 41 ಪೋಸ್ಟ್’ಗೆ ಅರ್ಜಿ ಕರೆಯಲಾಗಿದೆ. ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಕೆ ಮಾಡಬೇಕು.
ವಿದ್ಯಾ ಅರ್ಹತೆ :-ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಇರಬೇಕು ಅಥವಾ ತತ್ಸಮಾನ ವಿದ್ಯ ಅರ್ಹತೆ ಹೊಂದಿರಬೇಕು. ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ತಿಳಿದಿರಬೇಕು.
ವಯಸ್ಸಿನ ಮಿತಿ :-ಅರ್ಜಿ ಸಲ್ಲಿಕೆ ಮಾಡಲು ನಿಗದಿ ಮಾಡಿರುವ ಕೊನೆ ದಿನಾಂಕದ ಒಳಗೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ. ಪ್ರವರ್ಗ 2ಎ, 2ಬಿ, 3ಎ, 3ಬಿ ( 2A, 2B, 3A, 3B ) ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ. ಪ. ಜಾತಿ / ಪ. ಪಂಗಡ, ಪ್ರವರ್ಗ-1 ( SC/ST, CATEGORY -1 ) ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ವೇತನ ಶ್ರೇಣಿ :-ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ₹ 17,000/- ರಿಂದ ₹ 28950/- ಶ್ರೇಣಿಯಲ್ಲಿ ವೇತನ ನಿಗದಿ ಮಾಡಲಾಗಿದೆ.
ಅರ್ಜಿ ಶುಲ್ಕ :-
ಸಾಮಾನ್ಯ ಅಭ್ಯರ್ಥಿಗಳಿಗೆ : ₹ 300/-
ಪ್ರವರ್ಗ 2ಎ, 2ಬಿ, 3ಎ, 3ಬಿ ( 2A, 2B, 3A, 3B ) ಅಭ್ಯರ್ಥಿಗಳಿಗೆ :
₹ 150/-
ಪ. ಜಾತಿ / ಪ. ಪಂಗಡ, ಪ್ರವರ್ಗ-1 ( SC/ST, CATEGORY -1 ) ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ[ ಅಭ್ಯರ್ಥಿಗಳು ಆನ್ಲೈನ್’ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿ ಮಾಡಬಹುದು. ]
ಆಯ್ಕೆ ಮಾಡುವ ಪ್ರಕ್ರಿಯೆ :-ನೇಮಕಾತಿ ಅಧಿಸೂಚನೆಯ ಪ್ರಕಾರ 1೦ ನೇ ತರಗತಿಯ ಗರಿಷ್ಠ ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 10 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ.
ಪ್ರಮುಖ ದಿನಾಂಕಗಳು :-
ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ : 03/06/2024.
ಕೆಳಗಡೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು.
https://recruitmenthck.kar.nic.in/district/mdy/gdp/home.php
ಅರ್ಹತೆ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು.