ಇತ್ತೀಚೆಗೆ ಕೆಲವು ದಿನಗಳ ಹಿಂದೆ ಇದ್ದಕ್ಕಿದ್ದಂತೆ ಪೆಟ್ರೋಲ್, ಡೀಸೆಲ್ ಬೆಲೆ ನೂರು ರೂಪಾಯಿ ಆಗಿದ್ದು ವಾಹನ ಸವಾರರಿಗೆ ಶಾಖ್ ಕೊಟ್ಟಂತಾಗಿತ್ತು. ಹಬ್ಬದ ಸಮಯದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಸ್ವಲ್ಪಮಟ್ಟಿಗೆ ಇಳಿಕೆಯಾಗಿ ವಾಹನ ಸವಾರರಿಗೆ ನೆಮ್ಮದಿ ಕೊಟ್ಟಿತ್ತು. ಎಲ್ಲೆಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಎಷ್ಟಿದೆ ಎಂಬುದರ ಬಗ್ಗೆ ಈ ಲೇಖನದ ಮೂಲಕ ತಿಳಿಯೋಣ.

ಪೆಟ್ರೋಲ್​, ಡೀಸೆಲ್​ ಮೇಲೆ ಸುಂಕ ಕಡಿತವಾದ ನಂತರ ಸತತ ಮೂರು ದಿನಗಳಿಂದ ಇಂಧನದ ದರದಲ್ಲಿ ಯಾವುದೆ ಬದಲಾವಣೆಗಳಾಗಲಿಲ್ಲ. ಭಾನುವಾರ ಪೆಟ್ರೋಲ್, ಡೀಸೆಲ್ ಗಳ ಬೆಲೆ ಸ್ಥಿರವಾಗಿದೆ. ಕಳೆದ ಬುಧವಾರ ಇಂಧನದ ದರದಲ್ಲಿ ಇಳಿಕೆ ಆಗಿದ್ದು ದೀಪಾವಳಿ ಹಬ್ಬಕ್ಕೆ ವಾಹನ ಸವಾರರಿಗೆ ಭರ್ಜರಿ ಗಿಫ್ಟ್ ಸಿಕ್ಕಂತಾಗಿದ್ದು ಖುಷಿಯಾಗಿದ್ದಾರೆ. ನಿರಂತರವಾಗಿ ಏರುತ್ತಲೆ ಇದ್ದಂತಹ ಪೆಟ್ರೋಲ್, ಡೀಸೆಲ್ ಬೆಲೆ ಕಂಡು ಗ್ರಾಹಕರು ಆಕ್ರೋಶ ಹೊರಹಾಕಿದ್ದರು. ಒಮ್ಮೆ ಇಂಧನದ ದರದಲ್ಲಿ ಇಳಿಕೆಯಾದ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೆ ಇಳಿಕೆ ಕಂಡು ಬಂದಿಲ್ಲ.

ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಗೆ 103.97 ರೂಪಾಯಿ ನಿಗದಿಯಾಗಿದೆ. ಅದೆ ರೀತಿ ಒಂದು ಲೀಟರ್ ಡೀಸೆಲ್ ದರ 86.67 ರೂಪಾಯಿ ನಿಗದಿಯಾಗಿದೆ. ಮುಂಬೈನಲ್ಲಿ ಒಂದು ಲೀಟರ್ ಪೆಟ್ರೋಲ್ ಗೆ 109.98 ರೂಪಾಯಿ ಹಾಗೂ ಒಂದು ಲೀಟರ್ ಡೀಸೆಲ್ ಗೆ 94.14 ರೂಪಾಯಿ ನಿಗದಿಯಾಗಿದೆ. ಕೋಲ್ಕತ್ತಾದಲ್ಲಿ ಒಂದು ಲೀಟರ್ ಪೆಟ್ರೋಲ್ ಗೆ 104.67 ರೂಪಾಯಿ ಹಾಗೂ ಒಂದು ಲೀಟರ್ ಡೀಸೆಲ್ ಗೆ 89.79 ರೂಪಾಯಿ ನಿಗದಿಯಾಗಿದೆ. ಚೆನ್ನೈನಲ್ಲಿ ಒಂದು ಲೀಟರ್ ಪೆಟ್ರೋಲ್ ಗೆ 101.40 ರೂಪಾಯಿ ಹಾಗೂ ಒಂದು ಲೀಟರ್ ಡೀಸೆಲ್ ಗೆ 91.43 ರೂಪಾಯಿ ನಿಗದಿಯಾಗಿದೆ. 

ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್ ಗೆ 100.58 ರೂಪಾಯಿ ಹಾಗೂ ಒಂದು ಲೀಟರ್ ಡೀಸೆಲ್ ಗೆ 85.01 ರೂಪಾಯಿ ದಾಖಲಾಗಿದೆ. ಇನ್ನು ರಾಜಸ್ಥಾನದ ಜೈಪುರದಲ್ಲಿ ಲೀಟರ್ ಪೆಟ್ರೋಲ್ ಗೆ 111.10 ರೂಪಾಯಿ ಲೀಟರ್ ಡೀಸೆಲ್ ಗೆ 95.71 ರೂಪಾಯಿ ಇದೆ. ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ನಡೆಯುತ್ತದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇವುಗಳು ಇಂಧನದ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಣೆ ಮಾಡುತ್ತದೆ.

ಆ ಮೂಲಕ ವಿದೇಶಿ ವಿನಿಮಯ ದರಗಳ ಜೊತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ಬೆಲೆಗಳ ಆಧಾರದ ಮೇಲೆ ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ. ಒಟ್ಟಿನಲ್ಲಿ ಪೆಟ್ರೋಲ್ ಡೀಸೆಲ್ ಒಂದೇ ಸಮನೆ ಗಗನಕ್ಕೇರಿದ್ದು ವಾಹನ ಸವಾರರಿಗೆ ಕಷ್ಟವಾಯಿತು ಹಬ್ಬದ ಸಮಯದಲ್ಲಿ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದು ವಾಹನ ಸವಾರರು ತಕ್ಕಮಟ್ಟಿಗೆ ಉಸಿರಾಡುವಂತೆ ಆಗಿದೆ. ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಯಲ್ಲಿ ಏರಿಳಿತವಾಗುತ್ತಲೆ ಇದೆ.

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave a Reply

Your email address will not be published. Required fields are marked *