ನಟ ದರ್ಶನ್ ಮೈಸೂರಲ್ಲಿ ಹುಟ್ಟು ಹಬ್ಬ ಆಚರಿಸಿಕೊಂಡ ಫೋಟೋಸ್

0 3

ಚಾಲೆಂಜಿಂಗ್ ಸ್ಟಾರ್ ಇಂದು ಕನ್ನಡ ಚಿತ್ರರಂಗದಲ್ಲಿ ತೂಗುದೀಪ ಶ್ರೀನಿವಾಸ್ ಅವರ ಪುತ್ರ ದರ್ಶನ್ ಅವರನ್ನು ಕರೆಯಲಾಗುತ್ತದೆ. ದರ್ಶನ ಅವರು ತಮ್ಮ ನಟನೆಯಿಂದ ಅಭಿಮಾನಿಗಳ ಮನಸ್ಸಿನಲ್ಲಿ ಕುಳಿತಿದ್ದಾರೆ. ಇವರು ಎಷ್ಟೇ ದೊಡ್ಡ ಸ್ಟಾರ್ ಆದರೂ ಬಹಳ ಸರಳ ವ್ಯಕ್ತಿ ಎಂದು ಹೇಳಬಹುದು. ಏಕೆಂದರೆ ಇವರಿಗೆ ಯಾವುದೇ ರೀತಿ ಅಹಂಕಾರವಿಲ್ಲ. ಸಹಾಯ ಮಾಡುವುದರಲ್ಲಿ ಇವರದ್ದು ಎತ್ತಿದ ಕೈ ಯಾಗಿದೆ. ಆದ್ದರಿಂದ ನಾವು ಇಲ್ಲಿ ಈ ವರ್ಷ ದರ್ಶನ್ ಅವರ ಹುಟ್ಟು ಹಬ್ಬದ ಆಚರಣೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು 16 ಫೆಬ್ರವರಿ 1977ರಂದು ಜನಿಸಿದರು. ದರ್ಶನ್ ತೂಗುದೀಪ ಭಾರತೀಯ ಚಿತ್ರೋದ್ಯಮದಲ್ಲಿ ನಟ, ನಿರ್ಮಾಪಕ ಮತ್ತು ವಿತರಕರಾಗಿದ್ದು ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ತಂದೆ ನಟ ತೂಗುದೀಪ ಶ್ರೀನಿವಾಸ್ ಆಗಿದ್ದಾರೆ. ತೂಗುದೀಪ ಶ್ರೀನಿವಾಸ್ ಅವರು ಕೂಡ ಕನ್ನಡ ಚಿತ್ರರಂಗದಲ್ಲಿ ಹಲವಾರು ಸಿನಿಮಾಗಳಲ್ಲಿ ನಟನೆಯನ್ನು ಮಾಡಿದ್ದಾರೆ. ಅವರ ಮಗ ದರ್ಶನ್ ಅವರು ನಟನಾ ವೃತ್ತಿಯನ್ನು 1990 ರ ದಶಕದ ಮಧ್ಯಭಾಗದಲ್ಲಿ ಪ್ರಾರಂಭಿಸಿದರು. ಚಿತ್ರರಂಗ ಪ್ರವೇಶಿಸುವ ಮೊದಲು ಕಿರುತೆರೆ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದರು.

2001 ರಲ್ಲಿ ಬಿಡುಗಡೆಯಾದ ಮೆಜೆಸ್ಟಿಕ್ ಚಿತ್ರದ ಮೂಲಕ ನಾಯಕ ನಟನಾಗಿ ಪಾದಾರ್ಪಣೆ ಮಾಡಿದರು. ಇವರನ್ನು ಅಭಿಮಾನಿಗಳು ಪ್ರೀತಿಯಿಂದ ಡಿ ಬಾಸ್ ಎಂದು ಕರೆಯುತ್ತಿದ್ದರು. ಇವರು ಸ್ಯಾಂಡಲ್ವುಡ್ನನ ಡಿ ಬಾಸ್ಆಗಿದ್ದರು. ನಂತರದಲ್ಲಿ ಹಲವಾರು ಸಿನಿಮಾಗಳನ್ನು ಮಾಡಿದರು. ಕರಿಯಾ, ನನ್ನ ಪ್ರೀತಿಯ ರಾಮು, ಕಲಾಸಿಪಾಳ್ಯ ,ಗಜ , ಸಾರಥಿ ಮತ್ತು ಬುಲ್ ಬುಲ್ ನಂತಹ ವಾಣಿಜ್ಯಿಕವಾಗಿ ಯಶಸ್ವಿಯಾದ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಸಾರಥಿ ಮತ್ತು ಸಂಗೊಳ್ಳಿ  ರಾಯಣ್ಣ  ಚಿತ್ರದಲ್ಲಿನ ಅಭಿನಯಕ್ಕಾಗಿ ವಿಮರ್ಶಕರಿಂದ ಪ್ರಶಂಸೆಯನ್ನು ಪಡೆದರು.

ಸಂಗೊಳ್ಳಿ ರಾಯಣ್ಣ ಚಿತ್ರದ ಅಭಿನಯಕ್ಕಾಗಿ  ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು  ಪಡೆದಿದ್ದಾರೆ. ದರ್ಶನ್ ಚಲನಚಿತ್ರ ನಿರ್ಮಾಣ ಮತ್ತು ವಿತರಣೆಯಲ್ಲಿ ತೊಡಗಿರುತ್ತಾರೆ. ಅವರು 2006 ರಲ್ಲಿ ತೂಗುದೀಪ ಪ್ರೊಡಕ್ಷನ್ಸ್ ಎಂಬ ನಿರ್ಮಾಣ ಸಂಸ್ಥೆಯನ್ನು ಸ್ಥಾಪಿಸಿದರು. ಈ ವರ್ಷ ದರ್ಶನ್ ಅವರು ತಮ್ಮ ಹುಟ್ಟು ಹಬ್ಬವನ್ನು ಮೈಸೂರಿನ ಒಂದು ರೆಸಾರ್ಟ್ನಲ್ಲಿ ಆಚರಿಸಿಕೊಂಡಿದ್ದಾರೆ. ಹಾಗೆಯೇ ತಮ್ಮ ಸ್ನೇಹಿತರೊಂದಿಗೆ ಬಹಳ ಸಂತೋಷದಿಂದ ಆಚರಿಸಿಕೊಂಡಿದ್ದಾರೆ. ವಿನೋದ್ ಪ್ರಭಾಕರ್ ಹಾಗೆ ಇನ್ನು ಮುಂತಾದ ಜನರು ಹುಟ್ಟುಹಬ್ಬಕ್ಕೆ ಆಗಮಿಸಿದ್ದರು.

Leave A Reply

Your email address will not be published.