ನಮ್ಮೂರಿಗೆ ರಸ್ತೆ ಆಗೋವರೆಗೂ ನಾನು ಮಾತ್ರ ಮದುವೆ ಆಗೋದಿಲ್ಲ ಎಂದ ಯುವತಿ

0 3

ಸ್ವಾತಂತ್ರ್ಯ ಬಂದು 7 ದಶಕಗಳೇ ಕಳೆದಿವೆ, ಅದರೂ ಕೂಡಕೆಲವು ಕಡೆ ಮೂಲಭೂತ ಸೌಕರ್ಯಗಳು ಇನ್ನೂ ಸಹ ಎಟುಕದ ನಕ್ಷತ್ರಗಳ ಹಾಗೇ ಆಗಿವೆ. ಇನ್ನೂ ಕೆಲವು ಕಡೆ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವ ಹಾಗೆ ಕಾಟಾಚಾರಕ್ಕೆ ಸೌಕರ್ಯಗಳನ್ನು ಜನರಿಗೆ ಕಣ್ಣು ಕಟ್ಟುವ ರೀತಿಯಲ್ಲಿ ಒದಗಿಸಲಾಗುತ್ತಿದೆ. ನಿಜಕ್ಕೂ ಅದರ ಉಪಯೋಗ ಅದೆಷ್ಟೋ ಕಡೆಗಳಲ್ಲಿ ಜನರಿಗೆ ಪ್ರಯೋಜನಕ್ಕೆ ಬರುತ್ತಿಲ್ಲ. ಅದೇ ರೀತಿ ದಾವಣಗೆರೆ ಜಿಲ್ಲೆಯ ಮಾಯಕೊಂಡ ಕ್ಷೇತ್ರದ ರಾಮಪುರ ಗ್ರಾಮದಲ್ಲಿಯೂ ಸಹ ಮೂಲಸೌಕರ್ಯದ ಸಮಸ್ಯೆ ಉಂಟಾಗಿದೆ.

ಈ ಗ್ರಾಮಕ್ಕೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳು ಕಳೆದರೂ ಸಹ ಇನ್ನೂ ಒಂದೇ ಒಂದು ಸರ್ಕಾರಿ ಬಸ್ ವ್ಯವಸ್ಥೆ ಸಹ ಇಲ್ಲ. ಹೀಗೆ ಹಲವಾರು ಸಮಸ್ಯೆಯನ್ನು ಕಂಡು ಬೇಸತ್ತ ಈ ಗ್ರಾಮದ ಯುವತಿಯೊಬ್ಬಳು ತನ್ನ ದಿಟ್ಟತನದಿಂದ ಮುಖ್ಯಮಂತ್ರಿಗಳಿಗೆ ಹಾಗೂ ಪ್ರಧಾನಿಗಳಿಗೆ ಪತ್ರ ಬರೆದು ಆ ಪತ್ರದಲ್ಲಿ ನಮ್ಮ ಊರಿನ ರಸ್ತೆ ಆಗುವವರೆಗೂ ನಾನು ಮದುವೆಯಾಗುವುದಿಲ್ಲ ಎಂದು ಶಪತ ಮಾಡಿದ್ದಾಳೆ.

ರಾಂಪುರ ಜಿಲ್ಲಾ ಕೇಂದ್ರದಿಂದ ಕೇವಲ 30 ಕಿಲೋ ಮೀಟರ್ ದೂರವಿದ್ದರೆ, ಮಾಯಕೊಂಡ ವಿಧಾನಸಭಾ ಕ್ಷೇತ್ರದಿಂದ 6 ಕಿಲೋ ಮೀಟರ್ ದೂರವಷ್ಟೇ ಇದೆ. ಆದರೂ ಈ ಊರು ಇಂದಿಗೂ ಮೂಲಭೂತ ಸೌಕರ್ಯದಿಂದ ವಂಚಿತಗೊಂಡಿದೆ. ಈ ಊರಲ್ಲಿ ಯುವತಿಯರು ಶಾಲಾ ಕಾಲೇಜ್‍ ಗಳಿಗೆ ಹೋಗಬೇಕೆಂದರೆ ನಡೆದುಕೊಂಡೆ ಹೋಗಬೇಕು ಹೊರತು ಬೇರಾವ ವಾಹನ ಸೌಲಭ್ಯ ಇಲ್ಲ. ಮಳೆಗಾಲದಲ್ಲಿ ಮಣ್ಣಿನ ರಸ್ತೆಯಲ್ಲಿ ನಡೆದು ಶಾಲಾ ಕಾಲೇಜ್‍ಗೆ ತೆರಳಬೇಕಾದ ಪರಿಸ್ಥಿತಿ ಇದೆ.

ಸ್ವಾತಂತ್ರ್ಯ ಬಂದು ಏಳು ದಶಕಗಳೇ ಕಳೆದರೂ ಸಹ ಈ ಗ್ರಾಮಕ್ಕೆ ಇನ್ನೂ ಸರ್ಕಾರಿ ಸಾರಿಗೆ ವ್ಯವಸ್ಥೆ ಇಲ್ಲ. ಬಸ್ ಇಲ್ಲದ ಕಾರಣ ಗ್ರಾಮದಲ್ಲಿ ಎಷ್ಟೋ ಯುವತಿಯರು ವಿದ್ಯಾಭ್ಯಾಸವನ್ನೇ ಮೊಟುಕುಗೊಳಿಸಿದ್ದಾರೆ. ಇದರಿಂದ ಬಾಲ್ಯ ವಿವಾಹ ಕೂಡ ಹೆಚ್ಚಾಗುತ್ತಿವೆ. ವಿಪರ್ಯಾಸವೆಂದರೆ ಓದುವ ಆಸೆಯಿದ್ದರು ಸರಿಯಾದ ಬಸ್ ವ್ಯವಸ್ಥೆ ಇಲ್ಲ ಎಂಬ ಕಾರಣಕ್ಕೆ ಅದೆಷ್ಟೋ ಮಹಿಳೆಯರು ಮನೆಯಲ್ಲೇ ಕೂರುವಂತಾಗಿದೆ. ಇದರಿಂದ ಈ ಊರಲ್ಲಿ ಹೆಣ್ಣು ಮಕ್ಕಳು ಹೆಚ್ಚಿನ ವಿದ್ಯಾಭ್ಯಾಸ ಮಾಡಿಲ್ಲ ಎಂದು ಮದುವೆಯಾಗಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.

ರಾಜಕಾರಣಿಗಳು ಚುನಾವಣೆ ಮಾತ್ರ ಬರುತ್ತಾರೆ ನಂತರ ಯಾರು ಬರಲ್ಲ ಎಂದು ಅಳಲು ತೋಡಿಕೊಂಡಿರುವ ಗ್ರಾಮಸ್ಥರು, ಮಕ್ಕಳನ್ನ ಹೆಚ್ಚು ಓದಿಸಬೇಕೆಂದು ಆಸೆ ಇದೆ ಆದರೆ, ಬಸ್ ಹಾಗೂ ರಸ್ತೆ ವ್ಯವಸ್ಥೆ ಇಲ್ಲ ಎಂಬ ಕಾರಣ ವಿದ್ಯಾಭ್ಯಾಸವನ್ನು ಮೊಟುಕುಗೊಳಿಸಬೇಕಾದ ಅನಿವಾರ್ಯವಿದೆ ಮೊಬೈಲ್ ಟವರ್, ಸರಿಯಾದ ರಸ್ತೆ, ಬಸ್ ವ್ಯವಸ್ಥೆ ಇದಲ್ಲದೆ ಸರ್ಕಾರ ನೀಡುವ ಪಡಿತರ ಅಕ್ಕಿಯನ್ನು ಪಡೆಯಲು ಕೂಡಾ ಹನ್ನೆರಡು ಕಿಲೋಮೀಟರ್ ಹೋಗಿ ಬರಬೇಕಾದ ಪರಿಸ್ಥಿತಿ ಇದೆ. ಯಾವುದೇ ಮೂಲಭೂತ ಸೌಕರ್ಯಗಳಿಲ್ಲದ ಈ ಊರಿಗೆ ಬೇರೆ ಗ್ರಾಮದಿಂದ ಯಾರು ಕೂಡ ಹುಡುಗರಿಗೆ ಮದುವೆಯಾಗಲು ಹೆಣ್ಣು ಕೊಡುತ್ತಿಲ್ಲ, ಹಾಗೂ ಇಲ್ಲಿಂದ ಹೆಣ್ಣನ್ನು ಮದುವೆ ಮಾಡಿಕೊಂಡು ಹೋಗುತ್ತಿಲ್ಲ. ಅಷ್ಟರ ಮಟ್ಟಿಗೆ ಇಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಗ್ರಾಮದ ಜನರು ತೊಂದರೆ ಅನುಭವಿಸುತ್ತಿದ್ದಾರೆ.

ಈ ಎಲ್ಲಾ ಸಮಸ್ಯೆಗಳನ್ನ ಗ್ರಾಮದ ಬಿಂದು ಎಂಬ ಯುವತಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಮೂಲಭೂತ ಸೌಕರ್ಯ ಒದಗಿಸುವಂತೆ ಪತ್ರ ಬರೆದಿದ್ದಾರೆ. ತಮ್ಮ ಗ್ರಾಮದ ಸಮಸ್ಯೆ ಬಗೆಹರಿಸಿಕೊಡಿ ಎಂದು ಮನವಿ ಮಾಡಿಕೊಂಡಿದ್ದು, ಅಲ್ಲದೆ ತನ್ನ ಗ್ರಾಮಕ್ಕೆ ರಸ್ತೆ ಆಗುವರೆಗೂ ತಾನು ಮದುವೆಯಾಗುವುದಿಲ್ಲ ಎಂದು ಪ್ರತಿಜ್ಞೆ ಸಹ ಮಾಡಿದ್ದಾಳೆ. ಬಿಂದು ತಮ್ಮ ಊರಿನ ಸಮಸ್ಯೆಗಳ ಬಗ್ಗೆ ಪ್ರಧಾನಿ ಹಾಗೂ ಸಿಎಂಗೆ ಬರೆದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ನಡುವೆ ಸಿಎಂ ಕೂಡ ಅವರ ಪತ್ರಕ್ಕೆ ಸ್ಪಂದಿಸಿದ್ದು ರಸ್ತೆ ಮಾಡಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ.

ಇಷ್ಟಾದ ನಂತರ ಪ್ರಧಾನಿ ಹಾಗೂ ಮುಖ್ಯಮಂತ್ರಿಗೆ ಪತ್ರ ಬರೆದು ನಮ್ಮ ಊರಿನ ರಸ್ತೆ ಆಗುವವರೆಗೆ ಮದುವೆ ಆಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದ ಬಿಂದು ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಟಿವಿ ಮಾಧ್ಯಮಗಳಲ್ಲಿ ಪ್ರಸಾರ ಆಗುತ್ತಿದ್ದ ಹಾಗೆ ದಾವಣಗೆರೆ ಡಿಸಿ ಮಹಾಂತೇಶ್ ಬೀಳಗಿ ಆ ಗ್ರಾಮಕ್ಕೆ ತೆರಳಿ ಸ್ಥಳ ಪರಿಶೀಲನೆ ಮಾಡಿದ್ದಾರೆ. ಬಳಿಕ ಬಿಂದುಗೆ ಕರೆ ಮಾಡಿ 2 ತಿಂಗಳೊಳಗೆ ರಸ್ತೆ, ಕೆಲವೇ ದಿನದಲ್ಲಿ ಬಸ್ ವ್ಯವಸ್ಥೆಯೂ ಆಗಲಿದೆ. ಜೊತೆಗೆ ನಿನ್ನ ಮದುವೆಯನ್ನೂ ನಾನೇ ಮಾಡಿಸುತ್ತೇನೆ ಎಂದು ಭರವಸೆಯನ್ನು ಸಹ ಕೊಟ್ಟಿದ್ದಾರೆ.

ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.