ಎರಡು ಸಾವಿರದ ಇಪ್ಪತ್ತೆರಡಕ್ಕೆ ಸಂಬಂಧಿಸಿದಂತೆ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತದಲ್ಲಿ ನೇಮಕಾತಿ ನಡೆಯುತ್ತಿದ್ದು ಈ ಒಂದು ನೇಮಕಾತಿಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಯಾವ ದಿನಾಂಕದೊಳಗೆ ಸಲ್ಲಿಸಬೇಕು ಅರ್ಜಿ ಶುಲ್ಕ ಯಾವ ರೀತಿಯಾಗಿ ಇರುತ್ತದೆ ಈ ಕುರಿತಾಗಿ ಸಂಪೂರ್ಣ ಮಾಹಿತಿಯನ್ನು ನಾವು ನಿಮಗೆ ತಿಳಿಸಿಕೊಡುತ್ತೇವೆ. ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಒಟ್ಟು 71 ಹುದ್ದೆಗಳು ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಆಫ್ಲೈನ್ ಮೂಲಕ ಸಲ್ಲಿಸಬೇಕು.
ಈ ಒಂದು ನೇಮಕಾತಿಯಲ್ಲಿ ಯಾವೆಲ್ಲಾ ಹುದ್ದೆಗಳ ನೇಮಕಾತಿ ನಡೆಯುತ್ತಿದೆ ಎಂಬುದನ್ನು ನೋಡುವುದಾದರೆ ಹಿರಿಯ ವ್ಯವಸ್ಥಾಪಕರ ಹುದ್ದೆ ಕಿರಿಯ ವ್ಯವಸ್ಥಾಪಕರ ಹುದ್ದೆ ಕಂಪ್ಯೂಟರ್ ಇಂಜಿನಿಯರ್ ಕ್ಷೇತ್ರಾಧಿಕಾರಿಗಳು ಕೃಷಿ ಅಭಿವೃದ್ಧಿ ಅಧಿಕಾರಿ ಪ್ರಥಮ ದರ್ಜೆ ಸಹಾಯಕರು ಜವಾನ್ ಮತ್ತು ಸೆಕ್ಯೂರಿಟಿ ಗಾರ್ಡ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಹಿರಿಯ ವ್ಯವಸ್ಥಾಪಕರ ಮೂರು ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನಲವತ್ತೈದು ಸಾವಿರದಿಂದ ಎಂಬತ್ತೆಂಟು ಸಾವಿರ ರೂಪಾಯಿ ಮಾಸಿಕ ವೇತನ ಇರುತ್ತದೆ. ಕಿರಿಯ ವ್ಯವಸ್ಥಾಪಕರ ಐದು ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ನಲವತ್ಮೂರು ಸಾವಿರದಿಂದ ಎಂಬತ್ಮೂರು ಸಾವಿರ ರೂಪಾಯಿವರೆಗೆ ವೇತನ ಇರುತ್ತದೆ.
ಕಂಪ್ಯೂಟರ್ ಇಂಜಿನಿಯರ್ ಒಂದು ಹುದ್ದೆ ಖಾಲಿ ಇದ್ದು ಇವರಿಗೂ ಮಾಸಿಕ ವೇತನ ನಲವತ್ಮೂರು ಸಾವಿರದಿಂದ ಎಂಬತ್ಮೂರು ಸಾವಿರ ರೂಪಾಯಿವರೆಗೆ ಇರುತ್ತದೆ. ಕ್ಷೇತ್ರಾಧಿಕಾರಿಗಳ ಹದಿನೈದು ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನಲವತ್ತು ಸಾವಿರದಿಂದ ಎಪ್ಪತ್ತು ಸಾವಿರ ರೂಪಾಯಿಗಳವರೆಗೆ ಮಾಸಿಕ ವೇತನ ಇರುತ್ತದೆ. ಕೃಷಿ ಅಭಿವೃದ್ಧಿ ಅಧಿಕಾರಿಗಳ ಒಂದು ಹುದ್ದೆ ಕಾಲಿ ಇದ್ದು ಆಯ್ಕೆಯಾದ ಅಭ್ಯರ್ಥಿಗೆ ನಲವತ್ತು ಸಾವಿರದಿಂದ ಎಪ್ಪತ್ತು ಸಾವಿರ ರೂಪಾಯಿಗಳವರೆಗೆ ವೇತನ ಇರುತ್ತದೆ.
ಪ್ರಥಮ ದರ್ಜೆ ಸಹಾಯಕರ ಇಪ್ಪತ್ತೊಂದು ಹುದ್ದೆಗಳು ಖಾಲಿ ಇದ್ದು ಇವರಿಗೆ ಮೂವತ್ಮೂರು ಸಾವಿರ ರೂಪಾಯಿಯಿಂದ ಅರವತ್ತೆರಡು ಸಾವಿರ ರೂಪಾಯಿವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ. ಇಪ್ಪತ್ಮೂರು ಜವಾನ್ ಹುದ್ದೆಗಳು ಖಾಲಿ ಇದ್ದು ಆಯ್ಕೆಯಾದ ಅಭ್ಯರ್ಥಿಗಳಿಗೆ ಇಪ್ಪತ್ಮೂರು ಸಾವಿರ ರೂಪಾಯಿಂದ ನಲವತ್ತೇಳು ಸಾವಿರ ರೂಪಾಯಿಗಳಿಗೆ ವೇತನ ಇರುತ್ತದೆ.
ಎರಡು ಸೆಕ್ಯೂರಿಟಿ ಗಾರ್ಡ್ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗೆ ಇಪ್ಪತ್ಮೂರು ಸಾವಿರ ರೂಪಾಯಿಂದ ನಲವತ್ತೇಳು ಸಾವಿರ ರೂಪಾಯಿವರೆಗೆ ವೇತನವನ್ನು ನೀಡಲಾಗುತ್ತದೆ. ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಕ್ಕೆ ಅಭ್ಯರ್ಥಿಗಳು ಯಾವ ಅರ್ಹತೆಯನ್ನು ಹೊಂದಿರಬೇಕು ಎಂಬುದನ್ನು ನೋಡುವುದಾದರೆ ಹಿರಿಯ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಕಂಪ್ಯೂಟರ್ ಪರಿಜ್ಞಾನ ಹಾಗೂ ಕನಿಷ್ಠ ಮೂರು ವರ್ಷ ಬ್ಯಾಂಕಿನಲ್ಲಿ ವ್ಯವಸ್ಥಾಪಕ ದರ್ಜೆಯಲ್ಲಿ ಕಾರ್ಯನಿರ್ವಹಿಸಿರುವ ಅನುಭವ ಇರಬೇಕು.
ಕಿರಿಯ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿ, ಕಂಪ್ಯೂಟರ್ ಪರಿಜ್ಞಾನ ಹಾಗೂ ಕನಿಷ್ಠ ಮೂರು ವರ್ಷ ಬ್ಯಾಂಕಿನಲ್ಲಿ ಕ್ಷೇತ್ರಾಧಿಕಾರಿ ದರ್ಜೆಯಲ್ಲಿ ಕಾರ್ಯನಿರ್ವಹಿಸಿರುವ ಅನುಭವವಿರಬೇಕು. ಕಂಪ್ಯೂಟರ್ ಎಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಇ ಅಥವಾ ಎಂಸಿಎ ಪದವಿ ಪಡೆದಿರಬೇಕು.
ಕ್ಷೇತ್ರಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವವರು ವಿಶ್ವವಿದ್ಯಾಲಯದಿಂದ ಪದವಿ, ಕಂಪ್ಯೂಟರ್ ಪರಿಜ್ಞಾನ ಹಾಗೂ ಕನಿಷ್ಠ ಎರಡು ವರ್ಷ ಬ್ಯಾಂಕಿನಲ್ಲಿ ಗುಮಾಸ್ತರ ಹುದ್ದೆಯಲ್ಲಿ ಕಾರ್ಯನಿರ್ವಹಿಸಿರುವ ಅನುಭವ ಇರಬೇಕು. ಕೃಷಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ ಪದವಿ ಪಡೆದಿರಬೇಕು ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಾಸಾಗಿರಬೇಕು. ಕಂಪ್ಯೂಟರ್ ತರಬೇತಿ ಸಹಕಾರ ಕ್ಷೇತ್ರದಲ್ಲಿ ಅನುಭವ ಹೊಂದಿರುವವರಿಗೆ ಅರ್ಹತೆಯ ಮೇಲೆ ಆದ್ಯತೆ ನೀಡಲಾಗುವುದು. ಜವಾನ್ ಮತ್ತು ಸೆಕ್ಯೂರಿಟಿ ಗಾರ್ಡ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಹತ್ತನೇ ತರಗತಿ ಪಾಸಾಗಿರಬೇಕು. ಈ ಒಂದು ಹುದ್ದೆಗೆ 18 ವರ್ಷದಿಂದ 48 ವರ್ಷ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ಏರ್ಪಡಿಸಿ ಅದರಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಯಾವ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬೇಕು ಎಂದರೆ, ಸಂಚಾಲಕ ಸದಸ್ಯರು ನೇಮಕಾತಿ ಸಮಿತಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಸೊಲ್ಲಾಪುರ್ ರಸ್ತೆ ವಿಜಯಪುರ. ಈ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬೇಕು ಅಭ್ಯರ್ಥಿಗಳು ಬ್ಯಾಂಕ್ ನಿಂದ ಅರ್ಜಿಯನ್ನು ಪಡೆದು ಕೊಂಡು ಮಾರ್ಚ್ 5 2022ರ ಒಳಗಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬೇಕು. ನೀವು ಕೂಡ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದರೆ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಈ ಮಾಹಿತಿಯನ್ನು ನೀವು ತಿಳಿದುಕೊಳ್ಳುವುದರ ಜೊತೆಗೆ ನಿಮ್ಮ ಪರಿಚಿತರು ಹಾಗೂ ಸ್ನೇಹಿತರೊಂದಿಗೆ ಉದ್ಯೋಗ ಮಾಹಿತಿಯನ್ನು ಹಂಚಿಕೊಳ್ಳಿರಿ.