ನಮ್ಮ ದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಗೆ ಹೋಲಿಸಿದರೆ ಭೂಮಿಯ ವಿಸ್ತೀರ್ಣ ಕಡಿಮೆ ಇದೆ ಇದರಿಂದ ಜೀವನ ನಡೆಸುವುದು ಕಷ್ಟವಾಗಿದೆ. ಈಗಿನ ದಿನಗಳಲ್ಲಿ ವಿದ್ಯಾಭ್ಯಾಸ ಮುಗಿಸಿದವರಿಗೆ ಉದ್ಯೋಗ ಸಿಗದೆ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗೆ ಇರಬೇಕಾದ ಅರ್ಹತೆಗಳು, ನೇಮಕಾತಿ ಪ್ರಕ್ರಿಯೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ
ಡಿಸಿಸಿ ಬ್ಯಾಂಕ್ ನಲ್ಲಿ ನೇಮಕಾತಿ ನಡೆಯುತ್ತಿದೆ ಯಾವುದೇ ರೀತಿಯ ಪರೀಕ್ಷೆ ಇಲ್ಲದೆ ಹಾಗೂ ಅರ್ಜಿ ಶುಲ್ಕ ಇಲ್ಲದೆ ನೇರವಾಗಿ ಸಹಾಯಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. 2024 ಡಿಸಿಸಿ ಬ್ಯಾಂಕ್ ನಲ್ಲಿ ಸಹಾಯಕ ಹುದ್ದೆಯ ನೇಮಕಾತಿಗೆ ಸಂಬಂಧಪಟ್ಟಂತೆ ಕೆಲವು ಮಾನದಂಡಗಳನ್ನು ನೀಡಲಾಗಿದೆ. ಒಟ್ಟು 31 ಸಹಾಯಕ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಸಹಾಯಕ ಹುದ್ದೆಗೆ ಆಸಕ್ತಿ ಇರುವ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಿದ್ಯಾರ್ಹತೆಯೆಂದರೆ ಪಿಯುಸಿ ಹಾಗೂ ತತ್ಸಮಾನ ಪದವಿಯನ್ನು ಮುಗಿಸಿರಬೇಕು ಹಾಗೂ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಆಸಕ್ತ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಡಿಸಿಸಿ ಬ್ಯಾಂಕ್ ನ ಖಾಲಿ ಇರುವ ಸಹಾಯಕ ಹುದ್ದೆಗೆ ಆಯ್ಕೆ ಪ್ರಕ್ರಿಯೆಯನ್ನು ನೋಡುವುದಾದರೆ ಮೊದಲಿಗೆ ಸಂದರ್ಶನವನ್ನು ನಡೆಸಿ ನಂತರ ದಾಖಲಾತಿಗಳ ಪರಿಶೀಲನೆ ನಡೆಸಿ ಕೊನೆಯದಾಗಿ ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ನೀಡುವಂತಿಲ್ಲ.
ಇದಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ವಿವರಗಳನ್ನು ಪಡೆದುಕೊಳ್ಳಲು hrraj.bankingofficial.gmail.com ಈ ಮೇಲ್ ಗೆ ಸಂಪರ್ಕ ಮಾಡಬಹುದು ಹಾಗೂ ಈ ಅಫೀಷಿಯಲ್ ಇಮೇಲ್ ಗೆ ಅರ್ಜಿ ಸಲ್ಲಿಸಬೇಕು. ಡಿಸಿಸಿ ಬ್ಯಾಂಕ್ ನ ಸಹಾಯಕ ಹುದ್ದೆಗೆ ಆಸಕ್ತಿ ಇರುವ ಅಭ್ಯರ್ಥಿಗಳು ಈಗಲೆ ಇಮೇಲ್ ಗೆ ತಮ್ಮ ಬಯೋಡಾಟಾವನ್ನು ಕಳುಹಿಸಬೇಕು. ಉದ್ಯೋಗ ಹುಡುಕಿದರೂ ಸಿಗದಿರುವ ಈ ಸಮಯದಲ್ಲಿ ಉದ್ಯೋಗಕ್ಕೆ ಅರ್ಜಿ ಹಾಕುವುದನ್ನು ಮರೆಯದಿರಿ. ಈ ಮಾಹಿತಿಯನ್ನು ತಪ್ಪದೆ ಎಲ್ಲರಿಗೂ ತಿಳಿಸಿ.