ಸರ್ಕಾರಿ ಕೆಲಸಕ್ಕೆ ಸೇರಬೇಕು ಎನ್ನುವುದು ಹಲವರ ಆಸೆಯಾಗಿರುತ್ತದೆ. ಸರ್ಕಾರಿ ಕೆಲಸ ಪಡೆಯುವುದು ಸುಲಭವಲ್ಲ ಅದಕ್ಕಾಗಿ ಬಹಳ ವರ್ಷಗಳಿಂದ ಶ್ರಮ ಪಡಬೇಕಾಗುತ್ತದೆ. ಶಿವಮೊಗ್ಗ ಜಿಲ್ಲೆಯ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಯೋಣ.
ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಶೀಘ್ರಲಿಪಿಗಾರರು, ಬೆರಳಚ್ಚುಗಾರರು ಹಾಗೂ ಬೆರಳಚ್ಚು ನಕಲುಗಾರರು ಹುದ್ದೆಗಳು ಖಾಲಿ ಇದ್ದು 17 ವೇಕೆನ್ಸಿ ಇವೆ. ಶೀಘ್ರಲಿಪಿಗಾರರು ಈ ಹುದ್ದೆಯಲ್ಲಿ 4 ವೇಕೆನ್ಸಿ ಇದೆ, ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 27,650 ರೂಪಾಯಿಯಿಂದ 52,650 ರೂಪಾಯಿವರೆಗೆ ವೇತನ ಕೊಡಲಾಗುತ್ತದೆ. ಬೆರಳಚ್ಚುಗಾರರು ಹುದ್ದೆಗೆ 9 ವೇಕೆನ್ಸಿ ಇದ್ದು, ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 21,400 ರೂಪಾಯಿಯಿಂದ 42,000 ರೂಪಾಯಿವರೆಗೆ ವೇತನ ಕೊಡಲಾಗುತ್ತದೆ.
ಬೆರಳಚ್ಚು ನಕಲುಗಾರರು ಹುದ್ದೆಗೆ 4 ವೇಕೆನ್ಸಿ ಇದ್ದು, ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 21,400 ರೂಪಾಯಿಯಿಂದ 42,000 ರುಪಯಿವರೆಗೆ ವೇತನ ಕೊಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳು 200 ರೂಪಾಯಿ, ಪ್ರವರ್ಗ 2 ಎ, 2 ಬಿ, 3 ಎ, 3 ಬಿ ಅಭ್ಯರ್ಥಿಗಳು 100 ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಎಸ್ಸಿ, ಎಸ್ಟಿ, ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸುವುದು ಬೇಡ. ಶುಲ್ಕ ಪಾವತಿಸುವ ಅಭ್ಯರ್ಥಿಗಳು ಆನಲೈನ್ ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಜಿಲ್ಲಾ ನ್ಯಾಯಾಲಯದ ವೆಬ್ ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್ ಬಿಐ ಈ ಬ್ಯಾಂಕ್ ನ ಯಾವುದೆ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.
ಅಭ್ಯರ್ಥಿಗಳು ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಶೀಘ್ರಲಿಪಿಗಾರರು, ಬೆರಳಚ್ಚುಗಾರರು ಹುದ್ದೆಗೆ ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಮೂರು ವರ್ಷಗಳ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಶೀಘ್ರಲಿಪಿಗಾರರು ಹುದ್ದೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಶೀಘ್ರಲಿಪಿ ಮತ್ತು ಬೆರಳಚ್ಚು ಹಿರಿಯ ದರ್ಜೆ ಪರೀಕ್ಷೆ ಉತ್ತೀರ್ಣತೆ ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕಾಗುತ್ತದೆ.
ಬೆರಳಚ್ಚು ನಕಲುಗಾರರು ಹುದ್ದೆಗೆ ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಕಿರಿಯ ದರ್ಜೆ ಪರೀಕ್ಷೆ ಉತ್ತೀರ್ಣತೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗೆ 18 ವರ್ಷ ವಯಸ್ಸಾಗಿರಬೇಕು.
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ, ಪ್ರವರ್ಗ 2 ಎ, 2 ಬಿ, 3 ಎ, 3 ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 27,2021 ರಿಂದ ಪ್ರಾರಂಭವಾಗಿದ್ದು ಜನವರಿ 30,2022 ಕೊನೆಯ ದಿನಾಂಕವಾಗಿದೆ. ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ ಜನವರಿ 31,2022. ಈ ಮಾಹಿತಿಯನ್ನು ತಪ್ಪದೆ ಎಲ್ಲಾ ನಿರುದ್ಯೋಗ ಯುವಕ, ಯುವತಿಯರಿಗೆ ತಿಳಿಸಿ.