ಡಿಕೆ ಶಿವಕುಮಾರ್ ಅವರು ಕನಕಪುರದ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಯಾದ ಮತ್ತು ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಮಂತ್ರಿಯು ಆಗಿದ್ದರು. ಕಾಂಗ್ರೆಸ್ ಪಕ್ಷದ ಧೀಮಂತ ನಾಯಕ ಎಂದು ಹೆಸರನ್ನು ಪಡೆದಿದ್ದಾರೆ. ಕಾಂಗ್ರೆಸ್ನ ಈಗಿನ ಕೆಪಿಸಿಸಿ ಅಧ್ಯಕ್ಷರು ಕೂಡ ಆಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಗಳು ಐಶ್ವರ್ಯ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ್ ಹೆಗ್ಡೆ ಅವರ ಮಗ ಅಮರ್ಥ್ಯ ಹೆಗ್ಡೆ ಪ್ರೇಮಿಗಳ ದಿನ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅದ್ದೂರಿಯಾಗಿ ನಡೆದ ಮದುವೆಯಲ್ಲಿ ಶಾಸ್ತ್ರೋಕ್ತವಾಗಿ ಇಬ್ಬರೂ ಸಪ್ತಪದಿ ತುಳಿದಿದ್ದಾರೆ. ಆದ್ದರಿಂದ ನಾವು ಇಲ್ಲಿ ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ.
ಎಸ್.ಎಂ. ಕೃಷ್ಣ ಅವರ ಮೊಮ್ಮಗನಾಗಿರುವ ಅಮರ್ಥ್ಯ ಹೆಗ್ಡೆ ಹಾಗೂ ಡಿಕೆ ಶಿವಕುಮಾರ್ ಮಗಳ ಮದುವೆಯಲ್ಲಿ ಕಾಂಗ್ರೆಸ್, ಬಿಜೆಪಿ ರಾಜಕೀಯ ನಾಯಕರೂ ಪಾಲ್ಗೊಂಡಿದ್ದರು. ಬೆಂಗಳೂರಿನ ವೈಟ್ಫೀಲ್ಡ್ನಲ್ಲಿರುವ ಖಾಸಗಿ ಹೋಟೆಲ್ನಲ್ಲಿ ಅದ್ದೂರಿಯ ಮದುವೆ ನಡೆದಿದೆ. ಎಸ್ಎಂ ಕೃಷ್ಣ ಹಾಗೂ ಡಿಕೆ ಶಿವಕುಮಾರ್ ಕುಟುಂಬಸ್ಥರು ಮದುವೆಯಲ್ಲಿ ಪಾಲ್ಗೊಂಡಿದ್ದು ಆಪ್ತ ಸಂಬಂಧಿಕರಿಗಷ್ಟೇ ಆಮಂತ್ರಣ ನೀಡಲಾಗಿದೆ. ರಿಸೆಪ್ಷನ್ನಲ್ಲಿ ಪ್ರಭಾವಿ ರಾಜಕೀಯ ನಾಯಕರು, ಉದ್ಯಮಿಗಳು ಕೂಡ ಪಾಲ್ಗೊಂಡಿದ್ದರು.
ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ್ ಹೆಗ್ಡೆ ಆತ್ಮಹತ್ಯೆ ಬಳಿಕ ಅಮರ್ಥ್ಯ ಮತ್ತು ಐಶ್ವರ್ಯಾಳ ಮದುವೆ ವಿಷಯ ದೂರ ಉಳಿದಿತ್ತು. ಕಳೆದ ವರ್ಷ ಜೂನ್ ತಿಂಗಳಲ್ಲಿ ಡಿಕೆ ಶಿವಕುಮಾರ್ ಕುಟುಂಬಸ್ಥರು ಎಸ್ಎಂ ಕೃಷ್ಣ ಅವರ ಮನೆಗೆ ತೆರಳಿ ಮದುವೆ ಮಾತುಕತೆ ನಡೆಸಿದ್ದರು. ಬಳಿಕ ಲಾಕ್ಡೌನ್ ಸಮಯದಲ್ಲಿ ಅವರಿಬ್ಬರ ನಿಶ್ಚಿತಾರ್ಥವೂ ನೆರವೇರಿತ್ತು.ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮಗಳ ಆರತಕ್ಷತೆಗೆ ರಾಹುಲ್ ಗಾಂಧಿ , ಪ್ರಿಯಾಂಕಾ ಗಾಂಧಿ, ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಪುದುಚೇರಿ ಮುಖ್ಯಮಂತ್ರಿ ನಾರಾಯಣ ಸ್ವಾಮಿ ಸೇರಿದಂತೆ ಹಲವು ಗಣ್ಯರಿಗೆ ಆಹ್ವಾನ ನೀಡಿದ್ದರು.
ಪ್ರವೇಶಕ್ಕೆ ಬಾರ್ ಕೋಡ್ ವ್ಯವಸ್ಥೆ ಮಾಡಿದ್ದರು. ಪ್ರವೇಶ ದ್ವಾರದ ಬಳಿ ಬಾರ್ ಕೋಡ್ ಸ್ಕ್ಯಾನ್ ಮಾಡಿಸಬೇಕು. ಒಟಿಪಿ ಬಂದರೆ ಮಾತ್ರ ಒಳಗೆ ಪ್ರವೇಶ ಸಾಧ್ಯವಾಗುತ್ತದೆ. ಇಲ್ಲದೇ ಹೋದರೆ ಗೇಟ್ ಬಳಿಯೇ ಇರಬೇಕಾಗುತ್ತದೆ. ರೆಸಾರ್ಟ್ ಸುತ್ತಮುತ್ತ ಪೊಲೀಸ್ ಭದ್ರತೆ ಒದಗಿಸಿದ್ದರು. ಖಾಸಗೀ ಭದ್ರತೆಯ ವ್ಯವಸ್ಥೆಯನ್ನು ಮಾಡಿಸಿದರು.ಐಶ್ವರ್ಯ ಡಿಕೆ ಶಿವಕುಮಾರ್ ಅವರು ಮದುವೆಯಾಗಿ ಒಂದು ತಿಂಗಳಾದರೂ ಮೀಡಿಯಾ ಮುಂದೆ ಕಾಣಿಸಿಕೊಂಡಿಲ್ಲ.ಈಗ ಅವರು ಫೋಟೋ ಶೂಟ್ ಒಂದರಲ್ಲಿ ಕಾಣಿಸಿಕೊಂಡಿದ್ದಾರೆ.