ನೋಡಲು ಒಳಗೆ ಕೆಂಪಾಗಿ ಕಾಣುವ ಕಲ್ಲಂಗಡಿ ಹಣ್ಣಿನ ರುಚಿ ಮತ್ತು ಬಣ್ಣದ ಬಗ್ಗೆ ಎಲ್ಲರಿಗೂ ಗೊತ್ತಿದೆ. ಕಲ್ಲಂಗಡಿ ಹಣ್ಣಿನ ಸೇವನೆಯಿಂದ ಅನೇಕ ಆರೋಗ್ಯಕರ ಪ್ರಯೋಜನಗಳಿವೆ. ಕಲ್ಲಂಗಡಿ ಹಣ್ಣಿನ ಬಗ್ಗೆ ಸಾಮಾನ್ಯವಾಗಿ ಗೊತ್ತಿರದ ಕೆಲವು ಅಂಶಗಳನ್ನು ಈ ಲೇಖನದ ಮೂಲಕ ತಿಳಿಯೋಣ.
ದೊಡ್ಡವರಿಂದ ಚಿಕ್ಕವರವರೆಗೆ ಕಲ್ಲಂಗಡಿ ಹಣ್ಣನ್ನು ಇಷ್ಟ ಪಟ್ಟು ತಿನ್ನುತ್ತಾರೆ. ಕಲ್ಲಂಗಡಿ ಹಣ್ಣು ಆರೋಗ್ಯಕರವಾದ ಹಣ್ಣಾಗಿದ್ದು ಬೇಸಿಗೆಯಲ್ಲಿ ಉಂಟಾಗುವ ಬಾಯಾರಿಕೆಯನ್ನು ನಿವಾರಿಸುತ್ತದೆ. ಈ ಸಿಹಿ ಮತ್ತು ರಸಭರಿತವಾದ ಕಲ್ಲಂಗಡಿ ಹಣ್ಣು ಉತ್ಕರ್ಷಣ ನಿರೋಧಕಗಳು ಮತ್ತು ವಿಟಮಿನ್ ಎ ಸೇರಿದಂತೆ ಅನೇಕ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಅಧ್ಯಯನಗಳ ಪ್ರಕಾರ ಕಲ್ಲಂಗಡಿ ಹಣ್ಣು ಆರೋಗ್ಯಕರವಾದ ಜೀವನಶೈಲಿಯ ಭಾಗವಾಗಿ ಕ್ಯಾನ್ಸರ್ ಮತ್ತು ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ತೋರಿಸಿದೆ. ಕಲ್ಲಂಗಡಿ ಹಣ್ಣು ಇತರೆ ಹಣ್ಣುಗಳಿಗಿಂತ ಹೆಚ್ಚಿನ ಪೋಷಕಾಂಶಗಳನ್ನು ಹೊಂದಿ ಶ್ರೀಮಂತವಾಗಿದೆ.
ಕಲ್ಲಂಗಡಿ ಸಿಟ್ರುಲಿನ್ ಎಂಬ ಅಮೈನೋ ಆಮ್ಲವನ್ನು ಹೊಂದಿದೆ ಇದು ನಮ್ಮ ದೇಹದ ಮೂಲಕ ರಕ್ತವನ್ನು ಚಲಿಸಲು ಸಹಾಯ ಮಾಡುತ್ತದೆ. ಅಲ್ಲದೆ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಇದರಲ್ಲಿರುವ ಲೈಕೋಪೀನ್ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ ಅಂದರೆ ಹೃದಯದ ಆರೋಗ್ಯಕ್ಕೆ ಕಲ್ಲಂಗಡಿ ಹಣ್ಣಿನ ಸೇವನೆ ಮಾಡಬೇಕು ಎಂದು ಅಧ್ಯಯನಗಳು ಸಾಬೀತು ಪಡಿಸಿವೆ. ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನಲ್ಲಿಯೆ ಹೃದಯದ ಅಪಾಯದಿಂದಾಗಿ ಸಾಕಷ್ಟು ಮಂದಿ ಬಲಿಯಾಗುತ್ತಿದ್ದಾರೆ. ಹೃದಯದ ಸಮಸ್ಯೆಯಿಂದ ಪಾರಾಗಲು ಕಲ್ಲಂಗಡಿ ಹಣ್ಣನ್ನು ಸೇವನೆ ಮಾಡಬೇಕು. ಬೇಸಿಗೆಯ ಕಾಲದಲ್ಲಿ ದೇಹವನ್ನು ಹೈಡ್ರೇಟ್ ಮಾಡಲು ಕಲ್ಲಂಗಡಿ ಹಣ್ಣಿಗಿಂತ ಅತ್ಯುತ್ತಮವಾದ ಹಣ್ಣು ಬೇರೊಂದಿಲ್ಲ ಎಂದೆ ಹೇಳಬಹುದು. ಏಕೆಂದರೆ ಹೆಚ್ಚಿನ ನೀರಿನ ಅಂಶವಿರುವ ಆಹಾರವನ್ನು ಸೇವಿಸುವುದರಿಂದ ನಮ್ಮ ದೇಹವು ಸರಿಯಾಗಿ ಕಾರ್ಯನಿರ್ವಹಿಸಲು ಅಗತ್ಯವಿರುವ ನೀರನ್ನು ಪಡೆಯಲು ಸಹಾಯ ಮಾಡುತ್ತದೆ.
ಕಲ್ಲಂಗಡಿಯಲ್ಲಿ ಸುಮಾರು 92% ನೀರನ್ನು ಒಳಗೊಂಡಿರುತ್ತದೆ ಅಷ್ಟೆ ಅಲ್ಲದೆ ಹೆಚ್ಚಿನ ನೀರಿನ ಅಂಶದಿಂದಾಗಿ ಕಡಿಮೆ ಕ್ಯಾಲೋರಿಯನ್ನು ಹೊಂದಿದೆ. ಇದು ನಮ್ಮ ತೂಕ ನಿರ್ವಹಣೆಗೆ ಸಹಾಯ ಮಾಡುತ್ತದೆ. ಕಲ್ಲಂಗಡಿಯಲ್ಲಿರುವ ಉತ್ಕರ್ಷಣ ನಿರೋಧಕಗಳು, ಲೈಕೋಪೀನ್ ಮತ್ತು ವಿಟಮಿನ್ ಸಿ ಸಂಯೋಜನೆಯು ಉರಿಯೂತ ಮತ್ತು ಆಕ್ಸಿಡೇಟಿವ್ ಹಾನಿಯನ್ನು ಕಡಿಮೆ ಮಾಡುತ್ತದೆ. ಕಲ್ಲಂಗಡಿ ಹಣ್ಣು ಒತ್ತಡವನ್ನು ಕಡಿಮೆ ಮಾಡುತ್ತದೆ ಎಂದು ಅಧ್ಯಯನಗಳು ತಿಳಿಸುತ್ತವೆ. ಯಾರೆಲ್ಲಾ ಒತ್ತಡದ ಸಮಸ್ಯೆಯಿಂದ ಬಳಲುತ್ತಿದ್ದಾರೆಯೊ ಅವರು ಕಲ್ಲಂಗಡಿ ಹಣ್ಣನ್ನು ಪ್ರತಿನಿತ್ಯ ನಿಯಮಿತವಾಗಿ ಸೇವನೆ ಮಾಡಬೇಕು. ಕಲ್ಲಂಗಡಿಯಲ್ಲಿ ಕಂಡು ಬರುವ ಅಮೈನೊ ಆಮ್ಲವಾದ ಸಿಟ್ರುಲಿನ್ ವ್ಯಾಯಾಮದ ಕಾರ್ಯಕ್ಷಮತೆಯನ್ನು ಸುಧಾರಿಸುತ್ತದೆ. ಇನ್ನು ಕಲ್ಲಂಗಡಿ ಹಣ್ಣು ಸ್ನಾಯು ನೋವನ್ನು ಗುಣಪಡಿಸುತ್ತದೆ.
ಕಲ್ಲಂಗಡಿಯು ಬೀಟಾ ಕ್ರಿಪ್ಟೋಕ್ಸಾಂಥಿನ್ ಎಂಬ ನೈಸರ್ಗಿಕ ವರ್ಣದ್ರವ್ಯವನ್ನು ಹೊಂದಿದ್ದು ಅದು ಕೀಲುಗಳನ್ನು ಉರಿಯೂತದಿಂದ ರಕ್ಷಿಸುತ್ತದೆ ಅಲ್ಲದೆ ಕಲ್ಲಂಗಡಿ ಹಣ್ಣಿನ ಸೇವನೆಯಿಂದ ಭವಿಷ್ಯದಲ್ಲಿ ಕಾಣಿಸಿಕೊಳ್ಳುವ ಸಂಧಿವಾತವನ್ನು ಕಡಿಮೆ ಮಾಡುತ್ತದೆ ಎಂದು ಕೆಲವು ಅಧ್ಯಯನಗಳು ತೋರಿಸುತ್ತವೆ. ಕಲ್ಲಂಗಡಿಯಲ್ಲಿರುವ ವಿಟಮಿನ್ ಎ, ಬಿ 6 ಮತ್ತು ಸಿ ಚರ್ಮವನ್ನು ಮೃದು ಮತ್ತು ನಯವಾಗಿರುವಂತೆ ಮಾಡುತ್ತದೆ. ಈ ಹಣ್ಣು 92% ರಷ್ಟು ನೀರಿನಿಂದ ಕೂಡಿರುವುದರಿಂದ ದೇಹವನ್ನು ಹೈಡ್ರೇಟ್ ಮಾಡುತ್ತದೆ. ಶುಷ್ಕ ಚರ್ಮವನ್ನು ಒಳಗಿನಿಂದ ಮತ್ತು ಹೊರಗಿನಿಂದ ನಿರ್ಮೂಲನೆ ಮಾಡುತ್ತದೆ. ಕಲ್ಲಂಗಡಿಯನ್ನು ಚರ್ಮಕ್ಕೂ ಅನ್ವಯಿಸಬಹುದು.
ಕಲ್ಲಂಗಡಿ ಹಣ್ಣಿನ ಸೇವನೆಯು ನಮ್ಮ ದೇಹವು ಕಾಲಜನ್ ಅನ್ನು ತಯಾರಿಸಲು ಸಹಾಯ ಮಾಡುತ್ತದೆ. ಹಾಗಾಗಿ ಇದು ಕೂದಲು ಮತ್ತು ಚರ್ಮಕ್ಕೆ ಬಹಳ ಒಳ್ಳೆಯದು. ಮುಖ್ಯವಾಗಿ ಒಣ ಮತ್ತು ಸುಕ್ಕುಗಳಿಂದ ಕೂಡಿದ ಚರ್ಮಕ್ಕೆ ಕಲ್ಲಂಗಡಿ ಹಣ್ಣು ಉತ್ತಮ. ಈಗಾಗಲೆ ಹೇಳಿದಂತೆ ಕಲ್ಲಂಗಡಿ ಸಾಕಷ್ಟು ನೀರು ಮತ್ತು ಸಣ್ಣ ಪ್ರಮಾಣದ ಫೈಬರ್ ಅನ್ನು ಹೊಂದಿರುತ್ತದೆ. ಇವೆರಡೂ ಆರೋಗ್ಯಕರವಾದ ಜೀರ್ಣಕ್ರಿಯೆಗೆ ಅವಶ್ಯಕವಾಗಿದೆ. ಜೀರ್ಣಕ್ರಿಯೆ ಸಮಸ್ಯೆಯನ್ನು ಎದುರಿಸುವವರು ತಪ್ಪದೆ ಕಲ್ಲಂಗಡಿ ಹಣ್ಣಿನ ಸೇವನೆ ಮಾಡಬೇಕು. ಫೈಬರ್ ಕರುಳನ್ನು ನಿಯಮಿತವಾಗಿ ಇರಿಸಲು ಸಹಾಯ ಮಾಡುತ್ತದೆ ಆದರೆ ನೀರು ಜೀರ್ಣಾಂಗಗಳ ಮೂಲಕ ತ್ಯಾಜ್ಯವನ್ನು ಹೆಚ್ಚು ಪರಿಣಾಮಕಾರಿಯಾಗಿ ಹೊರಹಾಕುತ್ತದೆ.
ಕಲ್ಲಂಗಡಿ ಸುಮಾರು 80 ರಷ್ಟು ಗ್ಲೈಸೆಮಿಕ್ ಇಂಡೆಕ್ಸ್ ಮೌಲ್ಯವನ್ನು ಹೊಂದಿದೆ ಹೀಗಾಗಿ ಮಧುಮೇಹ ಹೊಂದಿರುವವರು ನಿಸ್ಸಂದೇಹವಾಗಿ ಕಲ್ಲಂಗಡಿ ಹಣ್ಣನ್ನು ಸೇವನೆ ಮಾಡಬಹುದು. ಇದರಿಂದ ಯಾವುದೆ ಕಾರಣಕ್ಕೂ ರಕ್ತದಲ್ಲಿನ ಸಕ್ಕರೆಯ ಮಟ್ಟ ಹೆಚ್ಚಾಗುವುದಿಲ್ಲ. ಲ್ಲಂಗಡಿ ಹಣ್ಣಿನ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಬಹಳ ಒಳ್ಳೆಯದು. ಈ ಮಾಹಿತಿಯನ್ನು ತಪ್ಪದೆ ಎಲ್ಲರಿಗೂ ತಿಳಿಸಿ, ಕಲ್ಲಂಗಡಿ ಹಣ್ಣಿನ ಸೇವನೆಯಿಂದ ಆರೋಗ್ಯವನ್ನು ಹೆಚ್ಚಿಸಿಕೊಳ್ಳಿ.