ಜಗತ್ತಿನ ಅತಿದೊಡ್ಡ ಬಳಕೆದಾರರನ್ನು ಹೊಂದಿರುವ ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನ ಹೆಸರು ಬದಲಾಗಲಿದೆ ಎನ್ನುವ ಸುದ್ದಿಗಳು ಹರಿದಾಡುತ್ತಿವೆ. ರೀಬ್ರ್ಯಾಂಡ್ ಮಾಡುವುದರಿಂದ ಫೇಸ್‌ಬುಕ್ ಒಡೆತನದಲ್ಲಿರುವ ಇನ್‌ಸ್ಟಾಗ್ರಾಂ, ವಾಟ್ಸಾಪ್ ಹಾಗೂ ಅಕ್ಯುಲಸ್ ಇತರೆ ಅಪ್ಲಿಕೇಷನ್‌ಗಳಲ್ಲೂ ಬದಲಾವಣೆ ಬರಲಿದೆ ಎಂದು ವರ್ಜ್ ವರದಿ ಮಾಡಿದೆ.

ಈ ಮೂಲಕ ಸಾಮಾಜಿಕ ಮಾಧ್ಯಮದ ದೈತ್ಯ ಫೇಸ್‍ಬುಕ್ ತನ್ನ ಹೆಸರನ್ನು ಬದಲಿಸಲು ಚಿಂತಿಸಿದ್ದು, ಹೊಸ ಹೆಸರಿನೊಂದಿಗೆ ಶೀಘ್ರದಲ್ಲಿ ಮಾರುಕಟ್ಟೆಗೆ ಬರಲಿದೆ. ಹಾಗಾದ್ರೆ ಮಾರ್ಕ್ ಜುಕರ್ ಬರ್ಗ್ ನಾವು ನೀವೆಲ್ಲ ಬಳಕೆ ಮಾಡುತ್ತಿರುವ ಫೇಸ್ಬುಕ್ ಹೆಸರನ್ನ ಬದಲಾವಣೆ ಮಾಡಲಿದ್ದಾರಾ? ಇದರ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.

ಫೇಸ್‍ಬುಕ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಾರ್ಕ್ ಜುಕರ್ ಬರ್ಗ್ ಅಕ್ಟೋಬರ್ 28 ರಂದು ನಡೆದ ವಾರ್ಷಿಕ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ್ದು, ಶೀಘ್ರದಲ್ಲಿ ಹೊಸ ಹೆಸರು ನಾಮಕರಣ ಮಾಡುವ ಸಾಧ್ಯತೆಗಳಿದೆ ಎಂದು ವರ್ಜ್ ವರದಿ ಮಾಡಿದೆ. ಹೆಸರು ಬದಲಾವಣೆ ಸುದ್ದಿ ಜೋರಾಗುತ್ತಿದ್ದಂತೆ ಇದಕ್ಕೆ ಪ್ರತಿಕ್ರಿಯೆ ನೀಡಿರುವ ಫೇಸ್‍ಬುಕ್ ಈ ರೀತಿಯ ಯಾವುದೇ ಬೆಳವಣಿಗೆಗಳಿಲ್ಲ ಇದೊಂದು ಊಹಪೂಹಾದ ಸುದ್ದಿ ಎಂದು ಹೇಳಿದೆ.

ಕಂಪನಿಯನ್ನು ಮರುನಾಮಕರಣ ಮಾಡಿಕೊಳ್ಳುವ ಮೂಲಕ ಫೇಸ್‌ಬುಕ್ ಕಂಪನಿಯೂ ಬೇರೆ ಆ್ಯಪ್‌ಗಳ ರೀತಿ ಮಾತೃ ಸಂಸ್ಥೆಯೊಂದರ ಅಧೀನದಲ್ಲಿ ಕೆಲಸ ಮಾಡಲಿದೆ. ಆದರೆ ಮೂಲಗಳ ಪ್ರಕಾರ ಫೇಸ್‍ಬುಕ್ ಮೇಲೆ ಕ್ಯಾಲಿಪೋನಿಯ ಸರ್ಕಾರ ಪರಿಶೀಲನೆ ಹೆಚ್ಚಿಸುತ್ತಿದ್ದು, ಈ ನಡುವೆ ಹಲವು ವಿವಾದಗಳಿಗೆ ಫೇಸ್‍ಬುಕ್ ಕಾರಣವಾಗಿದೆ. ಈಗ ಹೆಸರು ಬದಲಿಸುವ ಮೂಲಕ ತನ್ನ ಅಡಿಯಲ್ಲಿರುವ ಇನ್‍ಸ್ಟಾಗ್ರಾಮ್, ವಾಟ್ಸಾಪ್ ಸೇರಿದಂತೆ ಹಲವು ಕಂಪನಿಗಳನ್ನು ಪುನಶ್ಚೇತನ ಮಾಡಲು ಚಿಂತಿಸಲಾಗಿದೆ ಎನ್ನಲಾಗಿದೆ.

ಯುರೋಪಿಯನ್ ಒಕ್ಕೂಟದಲ್ಲಿ 10 ಸಾವಿರ ಉದ್ಯೋಗ ಸೃಷ್ಟಿಸುವ ಉದ್ದೇಶ ಹೊಂದಿರುವ ಫೇಸ್‍ಬುಕ್, ಮತ್ತಷ್ಟು ಜನರನ್ನು ಸೆಳೆಯುವ ಲೆಕ್ಕಕಾಗಿ ಫೇಸ್‍ಬುಕ್ ವರ್ಚುವಲ್ ರಿಯಾಲಿಟಿ ವರ್ಧಿತ ರಿಯಾಲಿಟಿ ಮೇಲೆ ಹೂಡಿಕೆ ಮಾಡಿದೆ. ಈ ಮಾತೃ ಸಂಸ್ಥೆಯ ಅಧೀನದಲ್ಲಿ ಫೇಸ್‌ಬುಕ್, ಇನ್ಸ್ಟಾಗ್ರಾಮ್‌, ವಾಟ್ಸಾಪ್ ಸೇರಿದಂತೆ ಇತರ ಕಂಪನಿಗಳು ಕೆಲಸ ಮಾಡಲಿವೆ. ಅಮೆರಿಕಾದ ಸಿಲಿಕನ್ ವ್ಯಾಲಿಯಲ್ಲಿ ತಮ್ಮ ಸೇವೆಗಳನ್ನು ವಿಸ್ತರಿಸಲು ಕಂಪನಿಗಳು ಈ ರೀತಿ ಹೆಸರು ಬದಲಾಯಿಸುವುದು ಸರ್ವೆ ಸಾಮಾನ್ಯ.

ಆದರೆ ಯಾವ ಫೇಸ್‌ಬುಕ್ ಏನೆಂದು ಮರುನಾಮಕರಣವಾಗಲಿದೆ ಎಂದು ಇನ್ನೂ ತಿಳಿದು ಬಂದಿಲ್ಲ. ಅಲ್ಲದೆ ಈ ಬಗ್ಗೆ ಟ್ವೀಟರ್‌ ಮುಖಾಂತರ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಟ್ವೀಟರ್‌ ವೇದಿಕೆಯಲ್ಲೇ ಪ್ರತಿಕ್ರಿಯಿಸಿದ ಫೇಸ್ಬುಕ್‌, ಸರ್ವರ್‌ ಡೌನ್‌ನಿಂದ ಆಗಿರುವ ಸಮಸ್ಯೆ ಪರಿಹಾರಕ್ಕೆ ಕಾರ್ಯ ನಿರ್ವಹಿಸಲಾಗುತ್ತಿದೆ. ಶೀಘ್ರದಲ್ಲೇ ಗ್ರಾಹಕರು ತಮ್ಮ ಸೇವೆಯನ್ನು ಬಳಸಬಹುದು ಎಂದು ಹೇಳಲಾಗಿತ್ತು. ಫೋಟೋ ಹಂಚಿಕೊಳ್ಳುವ ಇನ್‌ಸ್ಟಾಗ್ರಾಂ ಮತ್ತು ವಾಟ್ಸಪ್‌ಗಳು ಇದೇ ರೀತಿಯ ಸ್ಪಷ್ಟನೆ ನೀಡಿದವು. ಈ ಆ್ಯಪ್‌ಗಳ ಸ್ಥಗಿತದಿಂದ ವಿಶ್ವಾದ್ಯಂತ ಸಾವಿರಾರು ಜನ ಸಮಸ್ಯೆಗೆ ಸಿಲುಕಿದರು ಎಂದು ವೆಬ್‌ಸೈಟ್‌ ಮತ್ತು ಸೇವೆಗಳ ಬಗ್ಗೆ ಮಾಹಿತಿ ಒದಗಿಸುವ ಡೌನ್‌ಡಿಟೆಕ್ಟರ್‌.ಕಾಂ ಹೇಳಿತ್ತು.

ಮಾರ್ಕ್‌ ಜುಕರ್‌ಬರ್ಗ್‌ ಜತೆಗೆ ಹಾರ್ವರ್ಡ್ ಕಾಲೇಜಿನ ಇತರ ವಿದ್ಯಾರ್ಥಿಗಳು ಸೇರಿ 2004ರಲ್ಲಿ ʼಫೇಸ್‌ ಮ್ಯಾಶ್‌ʼ ಆರಂಭಿಸಿದ್ದರು. ಇದೇ ಫೇಸ್‌ ಮ್ಯಾಶ್‌ ನಂತರ ʼದ ಫೇಸ್‌ಬುಕ್‌ʼ ಎಂದು ಮರುನಾಮಕರಣಗೊಂಡು ಕೊನೆಗೆ ಕೇವಲ ಫೇಸ್‌ಬುಕ್‌ ಎಂಬ ಹೆಸರನ್ನು ಉಳಿಸಿಕೊಳ್ಳಲು ಕಂಪನಿ ನಿರ್ಧರಿಸಿತ್ತು. 2.8 ಬಿಲಿಯನ್‌ಗೂ ಅಧಿಕ ಬಳಕೆದಾರರನ್ನು ಹೊಂದಿರುವ ಫೇಸ್‌ಬುಕ್‌ ಇಂದು ಜಗತ್ತಿನಾದ್ಯಂತ ಸುಪ್ರಸಿದ್ಧ ಜಾಲತಾಣವಾಗಿ ಬೆಳೆದು ನಿಂತಿದೆ.

ಜಾಗತಿಕ ಮಟ್ಟದಲ್ಲಿ ದೈತ್ಯನಾಗಿ ಬೆಳೆದಿರುವ ಫೇಸ್‌ಬುಕ್ ಈವರೆಗೂ ಸಾಕಷ್ಟು ಕಂಪನಿಗಳನ್ನು ಖರೀದಿಸಿದೆ. ಇತ್ತೀಚೆಗೆ ಫೇಸ್‌ಬುಕ್‌, ವಾಟ್ಸಾ ಪ್‌ ಹಾಗೂ ಇನ್‌ಸ್ಟಾಗ್ರಾಂ ಸರ್ವರ್‌ ಡೌನ್‌ ಆಗಿ ಭಾರತ ಸೇರಿದಂತೆ ವಿಶ್ವದ ಹಲವೆಡೆ ಈ ಸೇವೆಗಳಲ್ಲಿ ಭಾರೀ ವ್ಯತ್ಯಯ ಕಂಡುಬಂದಿತ್ತು. ಇದರಿಂದಾಗಿ ಫೇಸ್‌ಬುಕ್‌ ಸೇರಿದಂತೆ ಫೇಸ್ಬುಕ್‌ ಒಡೆತನದ ವಾಟ್ಸಾಪ್‌ ಮತ್ತು ಇನ್‌ಸ್ಟಾಗ್ರಾಂ ಬಳಕೆದಾರರು ಸಂದೇಶ ಕಳಿಸಲು, ಸ್ವೀಕರಿಸಲು ಮತ್ತು ಲಾಗಿನ್‌ ಮಾಡಲಾಗದೆ ಪರದಾಡಿದ್ದರು.

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave a Reply

Your email address will not be published. Required fields are marked *