Farmer Loan In Sahakara Bank ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಈ ವೇಳೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಾತನಾಡಿ ರಾಜ್ಯದ ರೈತರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಯಾವೆಲ್ಲಾ ರೈತರು ಸಹಕಾರಿ ಬ್ಯಾಂಕ್ ಇಂದ ಸಾಲ ಪಡೆದು, ಸರಿಯಾದ ಸಮಯಕ್ಕೆ ಸಾಲ ಪಾವತಿ ಮಾಡಿದ್ದಾರೋ ಅವರ ಬಡ್ಡಿ ಮೊತ್ತವನ್ನು ಮನ್ನಾ ಮಾಡುವುದಾಗಿ ಹೇಳಿದ್ದಾರೆ ಸಿಎಂ ಸಿದ್ದರಾಮಯ್ಯ ಅವರು.
ಈ ಒಂದು ಮಾತಿನಿಂದ ರೈತರಿಗೆ ಸಹಾಯ ಮಾಡಿ, ರೈತರಿಗೆ ಖುಷಿ ಅಗುವಂಥ ಸುದ್ಧಿ ನೀಡಿದ್ದಾರೆ. ವಿಧಾನಸಭೆಯಲ್ಲಿ ರೈತರ ಪರವಾಗಿ ಮಾತನಾಡಿದ ಸಿಎಂ ಅವರು, ಸಹಕಾರಿ ಬ್ಯಾಂಕ್ ಗಳಿಂದ ರೈತರು ಸಾಲ ಪಡೆದು ಸರಿಯಾದ ಸಮಯಕ್ಕೆ ಮರುಪಾವತಿ ಮಾಡಿದ್ದರೆ, ಅಂಥವರ ಬಡ್ಡಿ ಮನ್ನಾ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಸಹಕಾರಿ ಬ್ಯಾಂಕ್ ಗಳಲ್ಲಿ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲ ಮಾಡಿದ್ದು, ಸಮಯಕ್ಕೆ ಸರಿಯಾಗಿ ಸಾಲ ಮರುಪಾವತಿ ಮಾಡಿದವರಿಗೆ ಬಡ್ಡಿ ಮನ್ನಾ ಮಾಡಲಾಗುತ್ತದೆ ಎಂದಿದ್ದಾರೆ.
Farmer Loan In Sahakara Bank
ಸಾಲ ಮರುಪಾವತಿ ಮಾಡಿದವರಿಗೆ ಮಾತ್ರ ಈ ಸೌಲಭ್ಯ ಸಿಗುವುದಾಗಿ ಸಿಎಂ ಅವರು ಘೋಷಣೆ ಮಾಡಿದ್ದಾರೆ. ಸಿಎಂ ಅವರ ಈ ಮಾತಿಗೆ ಆರ್.ಅಶೋಕ್ ಅವರು ವ್ಯಂಗ್ಯವಾಗಿ ಮಾತನಾಡಿದ್ದು, ರೈತರು ಸಮಯಕ್ಕೆ ಸರಿಯಾಗಿ ಸಾಲ ಕಟ್ಟಲ್ಲ, ನೀವು ಸಾಲ ಮನ್ನಾ ಮಾಡಲ್ಲ ಎಂದು ಹೇಳಿದ್ದಾರೆ. ಒಟ್ಟಿನಲ್ಲಿ ಇದು ಹೇಗೆ ಕೆಲಸ ಮಾಡುತ್ತದೆ ಎಂದು ಕಾದು ನೋಡಬೇಕಿದೆ.