ಸರ್ಕಾರಿ ಶಾಲೆಗಳು ಮಕ್ಕಳಿಗೆ ಅನುಕೂಲ ಆಗುವಂತೆ ಉಚಿತ ಶಿಕ್ಷಣ ಹಾಗೂ ಉಚಿತವಾಗಿ ಯೂನಿಫಾರ್ಮ್ ಜೊತೆಗೆ ಉಚಿತವಾಗಿ ಮಧ್ಯಾಹ್ನದ ಬಿಸಿ ಊಟವನ್ನು ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆಯ ಮಕ್ಕಳಿಗೆ ನೀಡುತ್ತಿದೆ. ಸ್ವಲ್ಪ ವರ್ಷಗಳ ಹಿಂದೆ ಕರ್ನಾಟಕ ರಾಜ್ಯ ಸರ್ಕಾರ 8ನೇ ತರಗತಿಯ ಹಿಂದುಳಿದ ಮಕ್ಕಳಿಗೆ ಉಚಿತವಾಗಿ ಸೈಕಲ್ ನೀಡುತ್ತಿತ್ತು. ನಂತರ ಇದನ್ನು ಎಲ್ಲಾ ವರ್ಗದ ಮಕ್ಕಳಿಗೂ ನೀಡಬೇಕು ಎಂದು ಸರ್ಕಾರ ಅನುದಾನವನ್ನು ಕೂಡ ಬಿಡುಗಡೆ ಮಾಡಿತ್ತು.

ಕೆಲವು ಕಾರಣದಿಂದ ಈ ಯೋಜನೆಯನ್ನು ರಾಜ್ಯ ಸರ್ಕಾರ ಕೈ ಬಿಟ್ಟಿತ್ತು. ಪ್ರಸುತ್ತ ಅಡಳಿತ ನಡೆಸುತ್ತಿರುವ ಸರ್ಕಾರ ಈ ಯೋಜನೆಯನ್ನು ಪುನಃ ಕಾರ್ಯರೂಪಕ್ಕೆ ತರುವ ಸಾಧ್ಯತೆ ಹೆಚ್ಚು ಕಾಣುತ್ತಿದೆ. ವಿಧ್ಯಾರ್ಥಿಗಳಿಗೆ ಸೈಕಲ್ ಭಾಗ್ಯ ನೀಡುವ ಅನುಷ್ಠಾನವನ್ನು 2024ರ ಬಜೆಟ್’ನಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ. 2024ರ ರಾಜ್ಯ ಬಜೆಟ್’ನಲ್ಲಿ ರಾಜ್ಯದ ಜನರ ಹಿತಕ್ಕೆ ಹೆಚ್ಚು ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವ ಸಾಧ್ಯತೆಗಳು ಇವೆ.

ಶಿಕ್ಷಣ ಇಲಾಖೆ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಕೆ ಮಾಡಿದೆ. ಅದರಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ಜೊತೆಗೆ ಶೂ, ರಾಗಿ ಮಾಲ್ಟ್  ಮತ್ತು ಮೊಟ್ಟೆಯನ್ನು ಕೊಡಬೇಕು ಎಂದು ಮನವಿ ಮಾಡಲಾಗಿದೆ. ಈ ಕೋರಿಕೆಗಳನ್ನು ನೆರವೇರಿಸುತ್ತೇವೆ ಎಂದು ಸಿ.ಎಂ. ಸಿದ್ದರಾಮಯ್ಯನವರು ಭರವಸೆ ನೀಡಿದ್ದಾರೆ.

ಗವರ್ನಮೆಂಟ್ ಸ್ಕೂಲ್’ಗಳಲ್ಲಿ ಕಲಿಯುವ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ, ಈ ಎಲ್ಲಾ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವ ಸಾಧ್ಯತೆ ಇದೆ. ಶಿಕ್ಷಣ ಇಲಾಖೆ ಮಾಡಿರುವ ಎಲ್ಲಾ ವಿನಂತಿಗಳನ್ನು ಕಾರ್ಯರೂಪಕ್ಕೆ ತರಲು 320 ಕೋಟಿಯ ಅನುದಾನದ ಅಗತ್ಯವಿದೆ ಎಂದು ಸರ್ಕಾರ ತಿಳಿಸಿದೆ.

16/02/2024ರಂದು ರಾಜ್ಯ ಸರ್ಕಾರದ ಬಜೆಟ್ ಇರುವುದರಿಂದ ಅಲ್ಲಿ ಈ ಯೋಜನೆಯನ್ನು ಕಾರ್ಯರೂಪಕ್ಕೆ ತರುವ ಸಾಧ್ಯತೆ ಹೆಚ್ಚಾಗಿದೆ.8ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ನೀಡುವ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಮಧು ಬಂಗಾರಪ್ಪ ಈ ಯೋಜನೆಯನ್ನು ಪುನಃ ಆರಂಭಿಸುವ ಬಗ್ಗೆ ಮುಂದಿನ ಬಜೆಟ್’‌ನಲ್ಲಿ ಘೋಷಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿ ಮುಂದಿನ ನಿರ್ಧಾರ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ.

ಸೈಕಲ್ ಭಾಗ್ಯ ಯೋಜನೆಯನ್ನು ಮತ್ತೆ ಆರಂಭ ಮಾಡಿದರೆ ಶಾಲೆಗೆ ಬರುವ ಮಕ್ಕಳ ಸಂಖ್ಯೆ ಹೆಚ್ಚಾಗಬಹುದು ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಮಧು ಬಂಗಾರಪ್ಪ ಅವರು ಸರ್ಕಾರಿ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆಗಳಲ್ಲಿ 2,320 ದೈಹಿಕ ಶಿಕ್ಷಕ ಹುದ್ದೆಗಳು ಖಾಲಿ ಇರುವುದು ಮತ್ತು ಅದನ್ನು ಭರ್ತಿ ಮಾಡುವ ಕಾರ್ಯಕ್ಕೆ ಸರ್ಕಾರ ಮುಂದಾಗಿದೆ ಎಂದು ತಿಳಿಸಿದ್ದಾರೆ.

41,913 ಕನ್ನಡ ಶಾಲೆಗಳಲ್ಲಿ 6,772 ದೈಹಿಕ ಶಿಕ್ಷಕ ಹುದ್ದೆಗಳು ಖಾಲಿ ಇದೆ. ಅದರಲ್ಲಿ ಪ್ರಸ್ತುತ 4,127 ಹುದ್ದೆಗಳಿಗೆ ಶಿಕ್ಷಕರ ನೇಮಕಾತಿ ಆಗಿದೆ ಎಂದು ತಿಳಿಸಿದರು. ಜೊತೆಗೆ 4,844 ಪ್ರೌಢ ಶಾಲೆಗಳಲ್ಲಿ 5,210 ದೈಹಿಕ ಶಿಕ್ಷಕರ ಹುದ್ದೆಯು ಈಗಾಗಲೇ ಮಂಜೂರಿ ಆಗಿದೆ. 3,589 ಮಂದಿ ಶಿಕ್ಷಕರು ಈಗಾಗಲೇ ಕೆಲಸ ಕೂಡ ಮಾಡುತ್ತಾ ಇದ್ದಾರೆ ಎಂದು ತಿಳಿಸಿದ್ದಾರೆ.

ದೈಹಿಕ ಚಟುವಟಿಕೆ ಮಕ್ಕಳ ಕಲಿಕೆಗೆ ಬಹಳ ಮುಖ್ಯವಾಗಿ ಬೇಕಾಗುತ್ತದೆ. ಕಲಿಕೆಯಲ್ಲಿ ಆಸಕ್ತಿ ಮೂಡಲು ಪಠ್ಯೇತರ ಚಟುವಟಿಕೆಗೆ ಬಹಳ ಮುಖ್ಯವಾಗುತ್ತದೆ. ಈ ಕಾರಣದಿಂದ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ನಡುವೆ 2,120 ದೈಹಿಕ ಶಿಕ್ಷಕ ವೃತ್ತಿ ಮತ್ತು 200 ಪ್ರೌಢ ಶಾಲೆ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.

ಈ ಹುದ್ದೆಗಳ ನೇಮಕಾತಿ ಬಗ್ಗೆ ಈಗಾಗಲೇ ಆರ್ಥಿಕ ಇಲಾಖೆಯ ಜೊತೆ ಚರ್ಚೆ ಮಾಡಲಾಗಿದೆ. ಆರ್ಥಿಕ ಇಲಾಖೆ ಪರ್ಮಿಷನ್ ನೀಡಿದ ನಂತರ ಉಳಿದ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ. ಸರ್ಕಾರ ಹೊಸ ಹೊಸ ಯೋಜನೆಗಳನ್ನು ಜಾರಿ ಮಾಡಿ. ಉದ್ಯೋಗ ಅವಕಾಶಗಳನ್ನು ಕಲ್ಪಿಸುತ್ತಿದೆ ಮತ್ತು ಮಕ್ಕಳಿಗೆ ಕಲಿಕೆಯಲ್ಲಿ ಆಸಕ್ತಿ ಮೂಡಿಸುವ ಸಲುವಾಗಿ ನೂತನ ಯೋಜನೆಗಳನ್ನು ಜಾರಿಗೆ ತರುವ ನಿರ್ಧಾರ ಮಾಡಿದೆ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!