Free ration: ಚುನಾವಣೆಗೂ ಮುನ್ನ ಜನರಿಗೆ ಐದು ಗ್ಯಾರೆಂಟಿಯನ್ನು ನೀಡಿದ್ದ ಕಾಂಗ್ರೇಸ್ ಸರ್ಕಾರ ಈಗ ರಾಜ್ಯದಾದ್ಯಂತ ಬಹುಮತದಿಂದ ಆಯ್ಕೆಗೊಂಡಿದ್ದು ರಾಜ್ಯದ ಮುಖ್ಯಮಂತ್ರಿಯಾಗಿ ಸಿಎಂ ಸಿದ್ದರಾಮಯ್ಯನವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಿದ್ದರಾಮಯ್ಯ ನವರು ಅವರು ಕೊಟ್ಟಂತಹ ಗ್ಯಾರಂಟಿಯನ್ನು ಜಾರಿಗೆ ತರಲು ತಾತ್ಕಾಲಿಕ ಆದೇಶವನ್ನು ಬಿಡುಗಡೆ ಮಾಡಿದ್ದಾರೆ .
ಎಲ್ಲರಿಗೂ ಕೂಡ 10kg ಅಕ್ಕಿ ವಿತರಣೆಗೆ ಅಧಿಕೃತ ಆದೇಶವನ್ನ ಹೊರಡಿಸಲಾಗಿದೆ. ಎರಡನೆಯದಾಗಿ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕೊಡುತ್ತೇವೆ ಎಂದು ಕಾಂಗ್ರೆಸ್ ಸರ್ಕಾರ ತಿಳಿಸಿದೆ. ಸಿಎಂ ಹುದ್ದೆ ಅಲಂಕರಿಸಿದ ಬಳಿಕ ಮೊದಲ ಸುದ್ದಿಗೋಷ್ಠಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದಿದೆ. ಸುದ್ದಿ ಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯನವರು ತಮ್ಮ ಗ್ಯಾರಂಟಿಯ ಘೋಷಣೆ ಬಗ್ಗೆ ಮಾತನಾಡಿದ್ದಾರೆ ಅಷ್ಟು ಗ್ಯಾರಂಟಿ ಯೋಜನೆಗಳನ್ನು ಶೀಘ್ರದಲ್ಲಿಯೇ ಜಾರಿಗೆ ತರುವ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುತ್ತೇವೆ.
ಕರ್ನಾಟಕದವರಾದರೆ ಮಾತ್ರ ಉಚಿತ ಬಸ್ ಪಾಸ್ ನೀಡಲಾಗುತ್ತದೆ ಅದು ಕೇವಲ ಮಹಿಳೆಯರಿಗೆ ಮಾತ್ರ. *ಮನೆಯ ಯಜಮಾನಿ ಖಾತೆಗೆ ಪ್ರತಿ ತಿಂಗಳು 2000ರೂಪಾಯಿ ಹಣ ಬರುತ್ತದೆ. ಅನ್ನ ಭಾಗ್ಯ ಯೋಜನೆ ಅಡಿ 10 ಕೆಜಿ ಅಕ್ಕಿ.ಇಂದಿರಾ ಕ್ಯಾಂಟೀನ್ ನಲ್ಲಿ ಮತ್ತೆ ಆಹಾರ ನೀಡಲಾಗುತ್ತದೆ.
ಮುಂದಿನ ಕ್ಯಾಬಿನೆಟ್ ನಲ್ಲಿ ಎಲ್ಲ ಸ್ಪಷ್ಟವಾಗಿ ತಿಳಿಯುತ್ತದೆ ಈಗ ತಾತ್ವಿಕವಾಗಿ ಒಪ್ಪಿಗೆ ಕೊಟ್ಟಿದ್ದೇನೆ ಆಮೇಲೆ ಎಲ್ಲವೂ ಹಣಕಾಸಿನ ವಿಚಾರದಲ್ಲೆಲ್ಲ ಚರ್ಚೆ ಮಾಡುತ್ತೀವಿ ಎಂದು ಹೇಳಿದ್ದಾರೆ. ಎಷ್ಟೇ ಕಷ್ಟವಾದರೂ ಕೂಡ ಈ 5 ಗ್ಯಾರಂಟಿಯನ್ನು ಜಾರಿಗೆ ತಂದೇ ತರುತ್ತೇವೆ ಎಂದಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಅನ್ನ ಭಾಗ್ಯ ಯೋಜನೆ ಅಡಿ ಉಚಿತವಾಗಿ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುವುದು. ಅನ್ನಭಾಗ್ಯ ಯೋಜನೆ ಬಗ್ಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದ್ದು ಅನ್ನ ಭಾಗ್ಯ ಯೋಜನೆ ಅಡಿ ಉಚಿತವಾಗಿ 10 ಕೆಜಿ ಅಕ್ಕಿ ವಿತರಿಸಲಾಗುವುದು ಸಂಪುಟದ ತೀರ್ಮಾನದಂತೆ ಅನ್ನಭಾಗ್ಯ ಯೋಜನೆ ಜಾರಿಗೊಳಿಸಲಾಗಿದೆ.