Government of Karnataka: ಕಂದಾಯ ಅದಾಲತ್‌ಗಳನ್ನು ನಡೆಸಿ (Pahani) ಪಹಣಿಗಳಲ್ಲಿರುವ ಲೋಪದೋಷ ತಿದ್ದುಪಡಿ ಮಾಡುವ ಅಧಿಕಾರವನ್ನು ಸಹಾಯಕ ಆಯುಕ್ತರಿಂದ ತಹಶೀಲ್ದಾರ್‌ಗೆ (Tehsildar)ನೀಡಿದ್ದ ಅವಧಿಯನ್ನು 2023ರ ಡಿ.31ರವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.

ಪಹಣಿಗಳಲ್ಲಿರುವ ಲೋಪದೋಷಗಳನ್ನು ಸರಿಪಡಿಸುವ ಕಾರ್ಯವನ್ನು ತ್ವರಿತಗೊಳಿಸುವ ಉದ್ದೇಶದಿಂದ ತಿದ್ದುಪಡಿ ಅಧಿಕಾರವನ್ನು ತಹಶೀಲ್ದಾರ್‌ಗೆ ನೀಡಿದ್ದ ಅವಧಿ 2022ರ ಡಿ. 31ಕ್ಕೆ ಕೊನೆಗೊಂಡಿತ್ತು. ಇದೀಗ ಮತ್ತೆ ಒಂದು ವರ್ಷ ಅವಧಿಗೆ ವಿಸ್ತರಿಸಲಾಗಿದೆ. ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಈ ಮೂರು ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಉಳಿದ ಕಡೆಗಳಲ್ಲಿ ತಾಲ್ಲೂಕು ಗ್ರಾಮ ಲೆಕ್ಕಾಧಿಕಾರಿಗಳ ಮಟ್ಟದಲ್ಲಿ ಕಂದಾಯ ಅದಾಲತ್‌ ನಡೆಸಿ ಪಹಣಿಗಳಲ್ಲಿ ಲೋಪದೋಷಗಳನ್ನು ಸರಿಪಡಿಸಲು ಅವಕಾಶ ಕಲ್ಪಿಸಲಾಗಿದೆ.

ಈಗಾಗಲೇ ಇಂಥ ಲೋಪಗಳನ್ನು ಸರಿಪಡಿಸಲಾಗಿದ್ದು ಅರ್ಜಿಗಳು ಇನ್ನೂ ಬಾಕಿ ಇವೆ. ಅರ್ಜಿಗಳನ್ನು ಶೀಘ್ರ ವಿಲೇಮಾಡುವ ಉದ್ದೇಶದಿಂದ ಅವಧಿ ವಿಸ್ತರಿಸಲಾಗಿದೆ ಎಂದೂ ಆದೇಶದಲ್ಲಿ ವಿವರಿಸಲಾಗಿದೆ.‌ ಪಹಣಿ ತಿದ್ದುಪಡಿ ಅವಧಿಯನ್ನು ವಿಸ್ತರಣೆ ಮಾಡುವಂತೆ ಕೋರಿ ಕಂದಾಯ ಇಲಾಖೆಯ ಭೂಮಿ ಮತ್ತು ಯುಪಿಓಆರ್ ನಿರ್ದೇಶಕರು ಪುಸ್ತಾವನೆ ಸಲ್ಲಿಸಿದ್ದರು.

ಇದನ್ನೂ ಓದಿ..ಮನೆ ಇಲ್ಲದವರಿಗೆ ಮುಖ್ಯಮಂತ್ರಿಗಳ ವಸತಿ ಯೋಜನೆಯಿಂದ ಉಚಿತ ಮನೆ, ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಕಂದಾಯ ಅದಾಲತ್‌ ಆಂದೋಲನದ ಮೂಲಕ ಪಹಣಿ ತಿದ್ದುಪಡಿ ಕಾರ್ಯವನ್ನು ಮುಂದುವರೆಸುವುದು ಅಗತ್ಯವಾಗಿದೆ. ಹಾಗಾಗಿ ಬಾಕಿ ಉಳಿದಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಕಂದಾಯ ಅದಾಲತ್ ಕಾರ್ಯಕ್ರಮವನ್ನು ವಿಸ್ತರಿಸಿ ಪಹಣಿ ತಿದ್ದುಪಡಿ ಅಧಿಕಾರವನ್ನು ತಹಶೀಲ್ದಾರರಿಗೆ ಪ್ರತ್ಯಾಯೋಜಿಸಿ ಆದೇಶ ಹೊರಡಿಸುವಂತೆ ಕೋರಲಾಗಿತ್ತು. ಅದನ್ನು ಒಪ್ಪಿದ ಸರ್ಕಾರ 2023ರ ಡಿಸೆಂಬರ್ ತನಕ ಸಮಯ ನೀಡಿದೆ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!